Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುದು ಮಾಪ್ಲ ಸರಕಾರಿ ಶಾಲೆಯ ನೂತನ ಕಟ್ಟಡ...

ಪುದು ಮಾಪ್ಲ ಸರಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 Dec 2023 10:07 PM IST
share
ಪುದು ಮಾಪ್ಲ ಸರಕಾರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಬಂಟ್ವಾಳ: ಪುದು ಮಾಪ್ಲ ಸರಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯ ಇಲ್ಲದ ವೇಳೆಯೂ ಸ್ಥಳೀಯ ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಕಳುಹಿಸಿದ್ದು, ಅಂದಿನ ಶಿಕ್ಷಕರ ತಂಡ ಹಾಗೂ ಟುಡೇ ಫೌಂಡೇಶನ್ ಸಹಕಾರದಿಂದ 40 ಇದ್ದ ಈ ಶಾಲೆಯ ಮಕ್ಕಳ ಸಂಖ್ಯೆ ಪ್ರಸ್ತುತ 600ಕ್ಕೆ ಏರಿ ಶಾಲೆ ರಾಜ್ಯಕ್ಕೆ ಮಾದರಿಯಾಗಿದೆ ರಾಜ್ಯ ವಿಧಾಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು.

ಪುದು ಮಾಪ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸರಕಾರ ಅನುದಾನದ ಜತೆಗೆ ಫರಂಗಿಪೇಟೆ ಟುಡೇ ಫೌಂಡೇಶನ್ ಸಹಕಾರದೊಂದಿಗೆ ನಿರ್ಮಾಣಗೊಂಡ ನೂತನ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿದರು.

ಹಿಂದಿನ ಶಿಕ್ಷಣ ಸಚಿವ ನಾಗೇಶ್ ಅವರು ಪ್ರತಿ ಕ್ಷೇತ್ರಕ್ಕೆ ತಲಾ 20 ಶಾಲಾ ಕೊಠಡಿಗಳನ್ನು ನೀಡಿದ್ದು, ನನಗೆ ಆತ್ಮೀಯರಾಗಿ 2 ಹೆಚ್ಚುವರಿ ಕೊಠಡಿ ನೀಡಿದ್ದಾರೆ. ಈಗಿನ ಸಚಿವರ ಬಳಿಯೂ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಗಮನಹರಿಸುವಂತೆ ತಿಳಿಸಲಾಗಿದ್ದು, ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ವಿಧಾನ ಪರಿಷತ್ ಶಾಸಕ ಹರೀಶ್‌ ಕುಮಾರ್ ಮಾತನಾಡಿ, ಖಾಸಗಿ ಶಾಲೆಗಿಂತ ಸರಕಾರಿ ಶಾಲೆಗಳ ವಾತಾವರಣವೇ ಭಿನ್ನವಾಗಿದ್ದು, ಇಲ್ಲಿ ಮಕ್ಕಳಿಗೆ ಹೆಚ್ಚಿನ ಸ್ವಾತಂತ್ರ ಇರುತ್ತದೆ. ಪ್ರಸ್ತುತ ಸರಕಾದ ವಿಶೇಷ ಗಮನ, ಆಂಗ್ಲ ಶಿಕ್ಷಣದಿಂದ ಸರಕಾರಿ ಶಾಲೆಗಳ ಮಕ್ಕಳು ಕೀಳರಿಮೆಯನ್ನು ಬಿಟ್ಟು ಶಾಲೆಗೆ ಹೋಗುವ ಸ್ಥಿತಿ ಇದೆ ಎಂದರು.

ಪುದು ಗ್ರಾ.ಪಂ.ಅಧ್ಯಕ್ಷೆ ರಶೀದಾ ಬಾನು ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಮಾಜಿ ಅಧ್ಯಕ್ಷರಾದ ರಮ್ಲಾನ್ ಮಾರಿಪಳ್ಳ, ಪ್ರಕಾಶ್ಚಂದ್ರ ರೈ ದೇವಸ್ಯ, ಉಪಾಧ್ಯಕ್ಷ ಇಕ್ಬಾಲ್ ಸುಜೀರು, ಸೇವಾಂಜಲಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಕೃಷ್ಣಕುಮಾರ್ ಪೂಂಜ, ಮೇರಮಜಲು ಗ್ರಾ.ಪಂ.ಮಾಜಿ ಅಧ್ಯಕ್ಷೆ ವೃಂದಾ ಪೂಜಾರಿ, ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಽಕಾರಿ ಜ್ಞಾನೇಶ್ ಎಂ.ಪಿ., ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾವತಿ, ದೈಹಿಕ ಶಿಕ್ಷಣ ಪರಿವೀಕ್ಷಣಾಽಕಾರಿ ವಿಷ್ಣುನಾರಾಯಣ ಹೆಬ್ಬಾರ್, ಗ್ರಾ.ಪಂ.ಪಿಡಿಒ ಹರೀಶ್ ಕೆ.ಎ, ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಜಿ.ಕೆ.ನಾಯ್ಕ್, ತಾ.ಪಂ.ಮಾಜಿ ಸದಸ್ಯ ಆಸೀಫ್ ಇಕ್ಬಾಲ್, ಪ್ರಮುಖರಾದ ಹನೀಫ್ ಹಾಜಿ ಗೋಳ್ತಮಜಲು, ಎ.ಜೆ.ಶೇಖರ್, ಅಬುಸಾಲಿ, ಇಮ್ತಿಯಾಜ್ ತುಂಬೆ, ರಮ್ಲಾನ್ ಕುಂಪನಮಜಲು, ಭಾಸ್ಕರ ರೈ, ಅಬ್ದುಲ್ ಮಜೀದ್ ಫರಂಗಿಪೇಟೆ, ಅಬೂಬಕ್ಕರ್ ಫರಂಗಿಪೇಟೆ, ಮುಖ್ಯಶಿಕ್ಷಕಿ ಯಮುನಾ, ಸುಜೀರ್ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶಶಿಮಂಗಳ, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಟುಡೇ ಪೌಂಡೇಶನ್ ಅಧ್ಯಕ್ಷ ಉಮ್ಮರ್ ಫಾರೂಕ್, ನಿಕಟಪೂರ್ವ ಮುಖ್ಯ ಶಿಕ್ಷಕಿ ಶಕುಂತಳಾ ಎಸ್.ಉಳ್ಳಾಲ್, ಸಹಾಯಕ ಎಂಜಿನಿಯರ್ ರವಿಕುಮಾರ್, ಗುತ್ತಿಗೆದಾರ ಯಶೋಧರ ಪೊಳಲಿ ಅವರನ್ನು ಸನ್ಮಾನಿಸಲಾಯಿತು.

ಜಿ.ಪಂ.ಮಾಜಿ ಸದಸ್ಯ ಉಮ್ಮರ್ ಫಾರೂಕ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರ್ವಹಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X