ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ: ಅವಧಿ ವಿಸ್ತರಣೆ

ಮಂಗಳೂರು : ಪ್ರಸಕ್ತ (2023-24) ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಕ್ಕ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
1. ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ ೩೧ರವರೆಗೆ ವಿಸ್ತರಿಸಲಾಗಿದೆ.
2. ವಿದೇಶಿ ವಿಶ್ವದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.೩೧ರವರೆಗೆ ವಿಸ್ತರಿಸಲಾಗಿದೆ. ಸೇವಾಸಿಂಧು ಪೋರ್ಟಲ್
ಹಾರ್ಡ್ ಕಾಪಿಯನ್ನು ಸಲ್ಲಿಸುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ ಸಹಾಯವಾಣಿ: 8277799990/ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿ ಸಬಹುದು ಎಂದು ದ.ಕ.ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಪ್ರಕಟನೆ ತಿಳಿಸಿದೆ.







