ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂಟಕ್ ಸಭೆ

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಇಂಟಕ್ ಅಧ್ಯಕ್ಷ ಲಕ್ಷ್ಮಿ ವೆಂಕಟೇಶ್ ಗುರುವಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ನಾಯಕರೊಂದಿಗೆ ಮಾತುಕತೆ ನಡೆಸಿದರು.
ಬಳಿಕ ಮಾತನಾಡಿದ ಅವರು ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಭಾರತೀಯ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ (ಇಂಟಕ್) ಸಮಾವೇಶವನ್ನು ಆಯೋಜಿಸಲಾಗುವುದು. ಇಂಟಕ್ ದೇಶದ ಬಹುದೊಡ್ಡ ಟ್ರೇಡ್ ಯೂನಿಯನ್ ಆಗಿದ್ದು, ಅತಿ ಹೆಚ್ಚು ಸದಸ್ಯತ್ವ ಪಡೆದುಕೊಂಡಿದೆ. ಇದು ಕಾಂಗ್ರೆಸ್‌ನ ಪ್ರಮುಖ ಅಂಗವಾಗಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಲು ಪ್ರತೀ ಬ್ಲಾಕ್ ಮಟ್ಟದಲ್ಲಿ ಯೂನಿಯನ್ ರಚಿಸಬೇಕು. ಇದಕ್ಕೆ ರಾಜ್ಯ ಇಂಟಕ್ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಪದ್ಮರಾಜ್, ರಾಜ್ಯ ಇಂಟಕ್ ಮುಖಂಡರಾದ ಎಲ್ಲಪ್ಪ, ಮಂಜು, ಚಂದ್ರಶೇಖರ್, ಶಾಮಣ್ಣ ರೆಡ್ಡಿ, ಸಿ.ಎ.ರಹೀಂ, ಜಿಲ್ಲಾ ಮುಖಂಡರಾದ ಸಂತೋಷ್ ಕುಮಾರ್ ಶೆಟ್ಟಿ, ವಿಶ್ವಾಸ್ ಕುಮಾರ್ ದಾಸ್, ಪ್ರವೀಣ್‌ಚಂದ್ರ ಆಳ್ವ, ಜೆ.ಅಬ್ದುಲ್ ಸಲೀಂ, ಲಾರೆನ್ಸ್ ಡಿಸೋಜ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಸುಭಾಷ್ಚಂದ್ರ ಶೆಟ್ಟಿ ಕೊಲ್ನಾಡು, ಕೆ.ಅಪ್ಪಿ ಮತ್ತಿತರರು ಉಪಸ್ಥಿತರಿದ್ದರು.







