Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯುವವಾಹಿನಿಯ ವಾರ್ಷಿಕ ಸಮಾವೇಶ ಸಂಪನ್ನ

ಯುವವಾಹಿನಿಯ ವಾರ್ಷಿಕ ಸಮಾವೇಶ ಸಂಪನ್ನ

ವಾರ್ತಾಭಾರತಿವಾರ್ತಾಭಾರತಿ24 Dec 2023 7:54 PM IST
share
ಯುವವಾಹಿನಿಯ ವಾರ್ಷಿಕ ಸಮಾವೇಶ ಸಂಪನ್ನ

ಬಂಟ್ವಾಳ: ರಾಜಕೀಯ ಅಧಿಕಾರವನ್ನು ಅಭಿವೃದ್ದಿಯ ಹೆಬ್ಬಾಗಿಲು ತೆಗೆಯುವ ಕೀಲಿ ಕೈ ಎಂದು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹೇಳಿದ್ದರು. ಹಾಗಾಗಿ ರಾಜಕೀಯ ಅಧಿಕಾರ ಕೈಗೆ ಬಂದಾಗ ಮಾತ್ರ ಅಭಿವೃದ್ಧಿಯ ಹೆಬ್ಬಾಗಿಲು ತೆಗೆಯುವ ಪ್ರಯತ್ನವನ್ನು ಶೋಷಿತ ಅವಕಾಶ ವಂಚಿತರ ಪರವಾಗಿ ಮಾಡಬೇಕು. ಯುವವಾಹಿನಿಯು ವಿದ್ಯೆಮ ಉದ್ಯೋಗ, ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಬಯಸುತ್ತದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.

ನಗರ ಹೊರವಲಯದ ಬೆಂಜನಪದವಿನಲ್ಲಿ ನಡೆದ ಯುವವಾಹಿನಿ ಸಂಸ್ಥೆಯ 36ನೇ ವಾರ್ಷಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸವನ್ನು ಯುವವಾಹಿನಿ ಮಾಡುತ್ತಿವೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಪದ್ಮರಾಜ್ ಆರ್. ಕರೆ ನೀಡಿದರು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರಾಜೇಶ್ ಬಿ. ಅಧ್ಯಕ್ಷತೆ ವಹಿಸಿದ್ದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಡಾ. ತುಕರಾಮ ಪೂಜಾರಿ ಪ್ರಧಾನ ಭಾಷಣಗೈದರು. ಮುಖ್ಯಮಂತ್ರಿಯ ಮಾಜಿ ಆಪ್ತ ಸಹಾಯಕ ನಿರ್ಮಲ್ ಜಗನ್ನಾಥ ಬಂಗೇರ, ಉದ್ಯಮಿಗಳಾದ ನಟೇಶ್ ಪೂಜಾರಿ ಬೆಂಗಳೂರು, ಲೋಕೇಶ್ ಪೂಜಾರಿ ಕಲ್ಲಡ್ಕ, ವಾರ್ಷಿಕ ಸಮಾವೇಶದ ನಿರ್ದೇಶಕ ಭುವನೇಶ್ ಪಚ್ಚಿನಡ್ಕ ಉಪಸ್ಥಿತರಿದ್ದರು.

ನಾರ್ದನ್ ಸ್ಕೈ ಪ್ರಾಪರ್ಟೀಸ್ ನಿರ್ದೇಶಕಿ ಕೃತಿನ್ ಅಮೀನ್ ‘ಯುವ ಸಿಂಚನ’ ವಾರ್ಷಿಕ ವಿಶೇಷಾಂಕ ಬಿಡುಗಡೆಗೊಳಿಸಿ ದರು. ಸಂಪಾದಕ ದಿನಕರ್ ಡಿ.ಬಂಗೇರ ಹಾಗು ಕಾರ್ಯನಿರ್ವಾಹಕ ಸಂಪಾದಕ ಜಗದೀಶ್‌ಚಂದ್ರ ಡಿ.ಕೆ. ಉಪಸ್ಥಿತರಿದ್ದರು.

ಯುವ ವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಉದಯ ಅಮೀನ್ ಮಟ್ಟು ನೂತನ ಕಾರ್ಯಕಾರಿ ಸಮಿತಿ ಯನ್ನು ಸಭೆಗೆ ಪರಿಚಯಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷ ರಾಜೇಶ್ ಬಿ., ನೂತನ ಅಧ್ಯಕ್ಷ ಹರೀಶ್ ಕೆ.ಪೂಜಾರಿ ನೇತೃತ್ವದ ತಂಡಕ್ಕೆ ಪ್ರತಿಜ್ಞಾವಿಧಿ ಬೋಧಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕುಸುಮಾಕರ ಕುಂಪಲ ವಾರ್ಷಿಕ ವರದಿ ವಾಚಿಸಿದರು. ವಾರ್ಷಿಕ ಸಮಾವೇಶದ ಸಂಚಾಲಕ ಹಾಗು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ಸ್ವಾಗತಿಸಿದರು. ದಿನೇಶ್ ಸುವರ್ಣ ರಾಯಿ ಹಾಗು ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

ಪ್ರಶಸ್ತಿ ಪ್ರದಾನ

ಕೆ. ಚಿತ್ತರಂಜನ್ ಗರೋಡಿಗೆ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಜಿಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಯುವ ವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ, ಮನೋಜ್ ಕುಮಾರ್ ಕಟ್ಟೆಮಾರ್, ಶ್ರೀನಿವಾಸ ಪೂಜಾರಿ ಮೆಲ್ಕಾರ್, ಅಕ್ಷತಾಗೆ ಯುವ ವಾಹಿನಿ ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ವೇದಾವತಿ, ಚೈತ್ರಾ, ಜಯಂತ್ ಅಮೀನ್, ಯೋಗ್ನ ಅಮೀನ್‌ಗೆ ಯುವವಾಹಿನಿ ಗೌರವ ಅಭಿನಂದನೆ ಸಲ್ಲಿಸಲಾಯಿತು. ಡಾ.ಸಂಜಿತ್ ಎಸ್. ಅಂಚನ್, ಡಾ.ಶುಭಕರ್ ಅಂಚನ್, ಡಾ. ಅಕ್ಷತಾ ಕೋಟ್ಯಾನ್, ಡಾ.ಲತಾ ಬಿ. ಅವರಿಗೆ ಅಭಿನಂದನೆ, ಅಭಿನ್ ಬಂಗೇರಗೆ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X