Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಡೋಸಲ್ಫಾನ್ ಹೂತಿರುವ ವಿಚಾರ: ಪರಿಸರ...

ಎಂಡೋಸಲ್ಫಾನ್ ಹೂತಿರುವ ವಿಚಾರ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ28 Dec 2023 9:03 PM IST
share
ಎಂಡೋಸಲ್ಫಾನ್ ಹೂತಿರುವ ವಿಚಾರ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ, ಪರಿಶೀಲನೆ

ಪುತ್ತೂರು: ಕೇರಳ ಕರ್ನಾಟಕ ಗಡಿ ಪ್ರದೇಶವಾದ ಮಿಂಚಿ ಪದವು ಎಂಬಲ್ಲಿನ ಪಾಳು ಬಾವಿಯಲ್ಲಿ ಕೇರಳ ಪ್ಲಾಂಟೇಶನ್ ಕಾರ್ಪೊರೇಶನ್ ಗೋದಾಮಿನಲ್ಲಿ ಇರಿಸಲಾಗಿದ್ದ ಎಂಡೋಸಲ್ಪಾನ್ ಮಣ್ಣಿನಡಿ ಹೂತು ಹಾಕಿರುವ ವಿಚಾರದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠದ ನೋಟೀಸ್ ಜಾರಿಗೊಳಿಸಿದ ಹಿನ್ನಲೆಯಲ್ಲಿ ಕರ್ನಾಟಕ ಹಾಗೂ ಕೇರಳ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲಿಗೆ ಕೇರಳ ಮತ್ತು ಕರ್ನಾಟಕ ಗಡಿ ಪ್ರದೇಶವಾದ ಪುತ್ತೂರು ತಾಲೂಕಿನ ಈಶ್ವರ ಮಂಗಲದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅಧಿಕಾರಿಗಳು ಅಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಅವರೊಂದಿಗೆ ಮಾತುಕತೆ ನಡೆಸಿ ಮಾಹಿತಿಯನ್ನು ಸಂಗ್ರಹಿಸಿದರು. ಬಳಿಕ ಮಿಂಚಿ ಪದವು ಪ್ರದೇಶಕ್ಕೆ ನೀಡಿದ ತಂಡ ಮೊದಲಿಗೆ ಕೇರಳ ಪ್ಲಾಂಟೇಶನ್ ಕಾರ್ಪೊರೇಶನ್ ಕಚೇರಿಗೆ ತೆರಳಿ ಮಾಹಿತಿ ಪಡೆದುಕೊಂಡರು. ಬಳಿಕ ಗೋದಾಮಿ ನಲ್ಲಿದ್ದ ಎಂಡೋಸಲ್ಪಾನ್ ಡಬ್ಬಗಳಿಂದ ಮಾದರಿ ಸಂಗ್ರಹ ಪಡೆದುಕೊಂಡಿದ್ದಾರೆ.

ಎಂಡೋ ಸಲ್ಪಾನ್ ಹಾಕಲಾಗಿದೆ ಎನ್ನುಲಾದ ಇಲ್ಲಿನ ಬಾವಿಯ ಪರಿಶೀಲನೆ ನಡೆಸಿದ ಅಧಿಕಾರಿಗಳು ಬಾವಿ ಅಳದಿಂದ ಮಣ್ಣನ್ನು ಸಂಗ್ರಹಿಸಿದರು ಹಾಗೂ ಸಮೀಪದ ಕೆರೆಗಳ ನೀರನ್ನು ಪರೀಕ್ಷಾರ್ಥವಾಗಿ ಸಂಗ್ರಹಿಸಿಕೊಂಡರು. ಮಿಂಚಿಪದವು ಸಮೀಪದಲ್ಲಿರುವ ಕೇರಳದ ಭಾಗದ ಆರೋಗ್ಯ ಕೇಂದ್ರಕ್ಕೆ ಬೇಟಿ ಮಾಡಿ ಅಧಿಕಾರಿಗಳಲ್ಲಿ ಮಾಹಿತಿಯನ್ನು ಸಂಗ್ರಹಿಸಿ ಕೊಂಡರು. ಎಂಡೋಸಲ್ಫಾನ್ ಹೋರಾಟದ ಪದಾಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಸಂಗ್ರಹ ಮಾಡಿದರು.

ರಾಷರೀಯ ಹಸಿರು ನ್ಯಾಯ ಮಂಡಳಿ ದಕ್ಷಿಣ ಪೀಠದ ಅಧಿಕಾರಿ ಜೆ. ಚಂದ್ರಬಾಬು, ಪ್ರಯೋಗಾಲಯ ಸಹಾಯಕ ನಿಖಿಲ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಡಾ. ರವಿ ಡಿ. ಆರ್., ಕೇರಳ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಾಯಕ ಅಧೀಕ್ಷಕ ಆದರ್ಶ ಟಿ. ವಿ. ತಂಡದಲ್ಲಿದ್ದರು.

ಡಾ. ರವೀಂದ್ರ ಶ್ಯಾನುಭಾಗ್ ದೂರು

ಕೇರಳ ರಾಜ್ಯದ ಗಡಿ ಪ್ರದೇಶವಾದ ಮಿಂಚಿಪದವು ಗುಡ್ಡ ಪ್ರದೇಶದಲ್ಲಿ ಹೂಳಲಾಗಿದೆ ಎನ್ನಲಾದ ಎಂಡೋಸಲ್ಫಾನ್ ಸಮಸ್ಯೆಗಳನ್ನು ಅಧ್ಯಯನ ನಡೆಸಿದ ಉಡುಪಿ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರ ಶ್ಯಾನುಭಾಗ್ ಅವರು ಈ ಬಗ್ಗೆ ರಾಷ್ಟ್ರೀಯ ಹಸಿರು ಪೀಠಕ್ಕೆ ದೂರು ನೀಡಿದ್ದರು. ಈ ದೂರಿನಂತೆ ಎಂಡೋಸಲ್ಫಾನ್ ತೆರವಿಗೆ ಕೈಗೊಂಡ ಕ್ರಮಗಳ ಬಗ್ಗೆ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಹಸಿರು ಪೀಠ ನಿರ್ದೇಶಿಸಿ ಕರ್ನಾಟಕ ಮತ್ತು ಕೇರಲ ಸರ್ಕಾರ ಮತ್ತು ಪರಿಸರ ಇಲಾಖೆಗಳಿಗೆ ನೋಟೀಸ್ ಜಾರಿ ಮಾಡಿತ್ತು. ನೋಟೀಸ್ ಜಾರಿಗೊಂಡ ಬೆನ್ನಲ್ಲೇ ಇದೀಗ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ಎಂಡೋಸಲ್ಫಾನ್ ವಿಷಕಾರಕ ಗುಣಗಳಿಂದಾಗಿ ಕೇರಳ ಮತ್ತು ಕರ್ನಾಟಕ ರಾಜ್ಯದ ಸುಮಾರು 12 ಸಾವಿರಕ್ಕೂ ಅಧಿಕ ಮಕ್ಕಳು ವಿಕಲ ಚೇತನರಾಗಿದ್ದರು. ಹೀಗಾಗಿ 2011ರ ಮೇ 13ರಂದು ಭಾರತದಲ್ಲಿ ಎಂಡೋಸಲ್ಫಾನ್ ಮಾರಾಟ ಮತ್ತು ಉಪಯೋಗ ನಿಷೇಧಿಸಲ್ಪಟ್ಟಿತ್ತು. ಆದರೆ ಆ ಬಳಿಕ ಉಳಿದಿದ್ದ ಎಂಡೋಸಲ್ಫಾನ್‍ನನ್ನು ಮಿಂಚಿಪದವು ಗುಡ್ಡದ ಗೇರು ತೋಪಿನಲ್ಲಿ ಹೂತು ಹಾಕಲಾಗಿತ್ತು. ಇದರಿಂದಾಗಿ ಕೆಳ ಭಾಗದಲ್ಲಿನ ಬಾವಿ, ಕೆರೆಗಳಲ್ಲಿ ಎಂಡೋಸಲ್ಫಾನ್ ಅಂಶಗಳು ಗೋಚರಗೊಂಡ ಬಗ್ಗೆ ಆರೋಪ ವ್ಯಕ್ತವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X