Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೋರಾಟಗಾರರ ಮೇಲೆಯೇ ಉಳ್ಳಾಲ ಠಾಣೆಯಲ್ಲಿ...

ಹೋರಾಟಗಾರರ ಮೇಲೆಯೇ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು: ಪೊಲೀಸ್ ಇಲಾಖೆಯ ‘ನಡೆ’ ವಿರುದ್ಧ ವ್ಯಾಪಕ ಖಂಡನೆ

ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ31 Dec 2023 6:58 PM IST
share
ಹೋರಾಟಗಾರರ ಮೇಲೆಯೇ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲು: ಪೊಲೀಸ್ ಇಲಾಖೆಯ ‘ನಡೆ’ ವಿರುದ್ಧ ವ್ಯಾಪಕ ಖಂಡನೆ

ಮಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಉಳ್ಳಾಲ ತಾಲೂಕು ಡಿವೈಎಫ್‌ಐ ಸಮಿತಿಯು ಶುಕ್ರವಾರ ತೊಕ್ಕೊಟ್ಟಿನಲ್ಲು ಪ್ರತಿಭಟನೆ ನಡೆಸಿದ ಡಿವೈಎಫ್‌ಐ ಮುಖಂಡರು ಮತ್ತು ಸಮಾನ ಮನಸ್ಕ ಹೋರಾಟಗಾರರ ಮೇಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಇಲಾಖೆಯ ಈ ಅಚ್ಚರಿಯ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ರಾಜ್ಯದಲ್ಲಿರುವುದು ಜಾತ್ಯತೀತ ಪಕ್ಷದ ಆಡಳಿತವೋ ಅಥವಾ ಮತೀಯವಾದಿ ಪಕ್ಷದ ಆಡಳಿತವೋ ಎಂದು ಪ್ರಶ್ನಿಸಿದ್ದಾರೆ.

ನ್ಯಾಯ ಕೇಳಿ ಪ್ರತಿಭಟನೆ ನಡೆಸಿದವರ ಮೇಲೆಯೇ ಉಳ್ಳಾಲ ಪೋಲೀಸರು ಪ್ರಕರಣ ದಾಖಲಿಸಿದ ಕ್ರಮ ಖಂಡನೀಯ. ಪೊಲೀಸರ ಈ ಕ್ರಮದ ವಿರುದ್ಧ ಹೋರಾಟ ರೂಪಿಸಲಾಗುವುದು ಎಂದು ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ಎಚ್ಚರಿಸಿದೆ.

ರಾಜ್ಯದ ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸುವ, ಗುಂಪು ಘರ್ಷಣೆಗೆ ಎಡೆಮಾಡಿಕೊಡುವ, ಮತೀಯ ಕಲಹಗಳನ್ನು ಸೃಷ್ಟಿಸುವಂತಹ ಹೇಳಿಕೆಗಳನ್ನು, ಭಾಷಣಗಳನ್ನು ಬಹಿರಂಗವಾಗಿ ಆಡುವ ಕೋಮುವಾದಿ ಕಲ್ಲಡ್ಕ ಪ್ರಭಾಕರ್ ಭಟ್‌ನಂತಹ ಆರೆಸ್ಸೆಸ್ ಮುಖಂಡರು ಮತ್ತವರ ಕಾರ್ಯಕ್ರಮಗಳಿಗೆ ಅವಕಾಶ ಮಾಡಿಕೊಡುವ ಪೊಲೀಸ್ ಇಲಾಖೆಯು ಜಾತ್ಯತೀತ ಮೌಲ್ಯಗಳನ್ನು ಉಳಿಸುವ, ದೇಶದ ಸಂವಿಧಾನದ ಆಶಯಗಳನ್ನು ರಕ್ಷಿಸುವ, ನೆಲದ ಕಾನೂನುಗಳಿಗೆ ಗೌರವ ಕೊಡುವ ಜನಪರ ಸಂಘಟನೆಗಳ ವಿರುದ್ಧ ಎಫ್‌ಐಆರ್ ದಾಖಲಿಸುವುದು, ಪ್ರತಿಭಟಿಸಲು ಅವಕಾಶ ನಿರಾಕರಿ ಸುವುದು ಎಷ್ಟು ಸರಿ ಈ ಬಗ್ಗೆ ರಾಜ್ಯ ಸರಕಾರ ಮತ್ತು ಪೊಲೀಸ್ ಇಲಾಖೆ ಉತ್ತರಿಸಬೇಕು ಎಂದು ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಶ್ನಿಸಿದ್ದಾರೆ.

ಕಲ್ಲಡ್ಕ ಪ್ರಭಾಕರ್ ಭಟ್ಟರ ದ್ವೇಷ ಭಾಷಣದ ಮೇಲೆ ಪ್ರಕರಣ ದಾಖಲಾದರೂ ಬಂಧಿಸಲು ಅಸಾಧ್ಯವಾದ ಸರಕಾರದ ನಡೆಯ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ದ.ಕ. ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯದಂತೆ ನಿರ್ಬಂಧ ಹೇರಿರೋದು ಯಾವ ಕಾರಣಕ್ಕಾಗಿ ಎಂದು ಜಿಲ್ಲಾಡಳಿತ ಉತ್ತರಿಸಬೇಕು. ಪ್ರತಿಭಟಿಸುವುದು ದೇಶದ ಸಂವಿಧಾನಿಕ ಹಕ್ಕು. ಪ್ರತಿಭಟನೆಯಲ್ಲಿ ಧ್ವನಿವರ್ಧಕ ಬಳಸುವುದಕ್ಕೆ ಪೊಲೀಸ್ ಇಲಾಖೆಯ ಅನುಮತಿ ಬೇಕೇ ವಿನಃ ಪ್ರತಿಭಟನೆಗಳಿಗಲ್ಲ. ಡಿವೈಎಫ್‌ಐ ನಡೆಸಿದ ಪ್ರತಿಭಟನೆಯ ಬಗ್ಗೆ ಪೊಲೀಸರ ಗಮನಕ್ಕೆ ತರಲಾಗಿದೆ. ಆದರೂ ಪೊಲೀಸ್ ಇಲಾಖೆಯು ಡಿವೈಎಫ್‌ಐ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಮಾನ ಮರ್ಯಾದೆ ಅನ್ನೋದು ಇದೆಯೇ. ತನ್ನ ಭಾಷಣದ ಮೂಲಕ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುವ ಕೋಮುವಾದಿ ಕಲ್ಲಡ್ಕ ಪ್ರಭಾಕರ ಭಟ್ಟನ್ನು ಬಂಧಿಸಲು ಸಾಧ್ಯವಾಗದ ಕಾಂಗ್ರೆಸ್ ಸರಕಾರದಿಂದ ಇನ್ನೇನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಬಿಜೆಪಿ ಮತೀಯ ರಾಜಕಾರಣದಿಂದ ಬೇಸತ್ತ ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್ ಆಡಳಿತಕ್ಕೆ ಅವಕಾಶ ಮಾಡಿಕೊಟ್ಟಿದೆ ಎಂಬುದನ್ನು ಸಿದ್ದರಾಮಯ್ಯ ಮರೆಯಬಾರದು. ರಾಜ್ಯ ಸರಕಾರದ ಈ ರೀತಿಯ ಜನವಿರೋಧಿ ಆಡಳಿತದ ವಿರುದ್ಧ ಹಾಗೂ ಪ್ರತಿಭಟನಾಕಾರರ ಮೇಲೆ ಪ್ರಕರಣ ದಾಖಲಿಸಿದ ಪೊಲೀಸರ ನಡೆಯ ವಿರುದ್ಧ ಹೋರಾಟಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X