Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಆರೋಗ್ಯ...

ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿ: ನಳಿನ್ ಕುಮಾರ್

`ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' ಟ್ರೋಪಿ ಅನಾವರಣ

ವಾರ್ತಾಭಾರತಿವಾರ್ತಾಭಾರತಿ2 Jan 2024 6:49 PM IST
share
ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿ: ನಳಿನ್ ಕುಮಾರ್

ಮಂಗಳೂರು: ಬಂದರು, ವಿಮಾನ ಯಾನ, ರೈಲ್ವೇ, ಅತ್ಯುತ್ತಮ ಸಾರಿಗೆ ವ್ಯವಸ್ಥೆಯನ್ನೊಳಗೊಂಡ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಧಾರ್ಮಿಕ, ಉದ್ಯಮ, ಸಾಂಸ್ಕೃತಿಕ ಕ್ಷೇತ್ರದಲ್ಲೂ ಮುಂದುವರಿದಿದ್ದು, ಈ ರೀತಿಯಾಗಿ ಸಮಗ್ರ ಅಭಿವೃದ್ಧಿ ಕಂಡ ನಗರ ದೇಶದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಈ ವಿಭಿನ್ನತೆಯಿಂದ ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ಮಾದರಿ ಯಾಗಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ನಗರದ ಓಷಿಯನ್ ಪರ್ಲ್ ಹೊಟೇಲ್ ಮಂಗಳವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜ.5ರಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ. ಪ್ರಾಂಜಲ್ ಗೌರವಾರ್ಥ ನಡೆಯಲಿರುವ `ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್' ಟ್ರೋಪಿ ಅನಾವರಣಗೊಳಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ವಿಭಿನ್ನತೆಯೇನೆಂದರೆ ಸಾಂಸ್ಕೃತಿಕ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳು ಮುಂದುವರಿದಿದ್ದು, ದೇಶದಲ್ಲಿ ಇಂತಹ ಸ್ವಚ್ಛ, ಸೌಹಾರ್ದತೆಯ ಮತ್ತೊಂದು ನಗರವನ್ನು ಕಾಣಲು ಸಾಧ್ಯವಿಲ್ಲ. ಇಂತಹ ನಾಡಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ನಡೆಯುತ್ತಿರುವುದು ಬ್ರ್ಯಾಂಡ್ ಮಂಗಳೂರಿಗೆ ಮತ್ತಷ್ಟು ಪೂರಕ ಎಂದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, 4ವರ್ಷದ ಹಿಂದೆ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವನ್ನು ಯಶಸ್ವಿö, ಮಾದರಿಯಾಗಿ ನಡೆಸಿದ ಹೆಗ್ಗಳಿಕೆ ಪಡೆದುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಸಂಘಕ್ಕೆ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದ ಅವಕಾಶ ಸಿಕ್ಕಿರುವುದು ನಿಜಕ್ಕೂ ನಮಗೆ ಹೆಮ್ಮೆ. ಕ್ರಿಕೆಟ್ ಪಂದ್ಯಾಟ ಹಾಗೂ ಪತ್ರಕರ್ತರ ಮಹಾಸಭೆಗೆ ರಾಜ್ಯದ ನಾನಾ ಜಿಲ್ಲೆಯಿಂದ ಬರುವ 600ಕ್ಕೂ ಅಧಿಕ ಪತ್ರಕರ್ತರು ಆಗಮಿಸುತ್ತಿದ್ದು ಅವರಿಗೆ ಆತಿಥ್ಯ ಸೇರಿದಂತೆ ಯಶಸ್ವಿ ಕ್ರೀಡಾಕೂಟ ಆಯೋಜಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಉದ್ಯಮದಲ್ಲಿ ತೊಡಗಿಸಿಕೊಂಡ ನಾವು ದೇಶ-ವಿದೇಶಗಳಲ್ಲಿ ಸುತ್ತಾಡುತ್ತೇವೆ. ಆದರೆ ಕಲೆ, ಸಂಸ್ಕೃತಿ, ಧಾರ್ಮಿಕ ನಂಬಿಕೆ, ಸಹಬಾಳ್ವೆಯಂತಹ ಇಂತಹ ನಗರವನ್ನು ಮತ್ತೊಂದು ಕಡೆ ಕಾಣಲು ಸಾಧ್ಯವಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಈ ಜಗತ್ತಿನ ಸ್ವರ್ಗದಂತಹ ಸುಂದರ ನಗರ ಎಂದು ರೋಹನ್ ಕಾರ್ಪೊರೇಷನ್ ಛೇರ್ಮನ್ ರೋಹನ್ ಮೊಂತೆರೋ ಹೇಳಿದರು.

ಪತ್ರಕರ್ತರ ಬ್ರ್ಯಾಂಡ್ ಮಂಗಳೂರು ಪರಿಕಲ್ಪನೆ ನಿಜಕ್ಕೂ ಚೆನ್ನಾಗಿದ್ದು, ಈ ಶೀರ್ಷಿಕೆಯಲ್ಲಿ ನಡೆಯುವ ಕ್ರೀಡಾಕೂಟಕ್ಕೆ ಬೇರೆ ಬೇರೆ ಜಿಲ್ಲೆ, ರಾಜ್ಯಗಳಿಂದ ಪತ್ರಕರ್ತರು ಬರುವ ಕಾರಣ ಮಂಗಳೂರಿನ ಬ್ರ್ಯಾಂಡ್ ಮತ್ತಷ್ಟು ವ್ಯಾಪ್ತಿಗೆ ಪಸರಿಸಲಿ. ಈ ಕ್ರೀಡಾಕೂಟಕ್ಕೆ ಟೈಟಲ್ ಪ್ರಾಯೋಜಕರಾಗಿ ಭಾಗವಹಿಸುವುದಕ್ಕೆ ನಮಗೂ ಹೆಮ್ಮೆ ಎನಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ಕುಟ್ಟಪ್ಪ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ,ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ನಾಮ ನಿರ್ದೇಶಿತ ಸದಸ್ಯ ಇಬ್ರಾಹಿಂ ಅಡ್ಕಸ್ಥಳ,ತಾಂತ್ರಿಕ ಸಮಿತಿ ಸದಸ್ಯ ಅಜಯ್ ರಾಜ್,ದ.ಕ ಜಿಲ್ಲಾ ಸಮಿತಿ ಯ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಪದಾಧಿಕಾರಿಗಳಾದ ವಿಲ್ಫ್ರೆಡ್ ಡಿ ಸೋಜ, ರಾಜೇಶ್ ಕೆ ಪೂಜಾರಿ, ರಾಜೇಶ್ ದಡ್ಡಂಗಡಿ,ಮುಹಮ್ಮದ್ ಆರಿಫ್ ಪಡು ಬಿದ್ರಿ, ವಿಜಯ ಕೋಟ್ಯಾನ್ ಪಡು,ಸುಖ್ ಪಾಲ್ ಪೊಳಲಿ, ಸಂದೇಶ್ ಜಾರ,ರಾಜೇಶ್ ಶೆಟ್ಟಿ,ಮೊಹನ್ ಕುತ್ತಾರ್ ಮೊದಲಾದವರು ಉಪಸ್ಥಿತರಿದ್ದರು.

ಪ್ರೆಸ್‌ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ. ಭಟ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಧನ್ಯವಾದವಿತ್ತರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X