ಮಹಿಳೆ ನಾಪತ್ತೆ

ಮಂಗಳೂರು: ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಾಪತ್ತೆಯಾದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿವೆ.
ವೆಂಕಟೇಶ ದಾಸರ್ ಎಂಬವರ ಪತ್ನಿ ಪ್ರೇಮಾ (24) ನಾಪತ್ತೆಯಾದ ಮಹಿಳೆ.
ಪತಿ ಮತ್ತು ತನ್ನಿಬ್ಬರು ಮಕ್ಕಳೊಂದಿಗೆ ವಾಸವಾಗಿದ್ದ ಪ್ರೇಮಾ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುತ್ತಿ ದ್ದರು. ಜ.2ರಂದು ಬೆಳಗ್ಗೆ ಯಾರಿಗೂ ಹೇಳದೆ ಮನೆಯಿಂದ ಕಾಣೆಯಾಗಿದ್ದಾರೆ. ಸಿಸಿಟಿವಿ ಪರಿಶೀಲಿಸಿದಾಗ ರಿಕ್ಷಾದಲ್ಲಿ ಬಸ್ ನಿಲ್ದಾಣದ ಕಡೆಗೆ ಹೋಗಿರುವುದು ಗೊತ್ತಾಗಿದೆ ಎಂದು ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
Next Story





