ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟ : ಬೆಥನಿ ಶಾಲೆಯ ವೈಗಾ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವ ಪುತ್ತೂರು ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವೈಗಾ ಎಂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ಡಿಸೆಂಬರ್ 25 ಮತ್ತು 26ರಂದು ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ವೈಗಾ ಎಂ ಅವರು ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರು ದರ್ಬೆ ನಿವಾಸಿ ಮನೋಜ್ ಟಿ ವಿ ಮತ್ತು ಸಂಧ್ಯಾ ಎಂ ದಂಪತಿಯ ಪುತ್ರಿ.
Next Story





