ಮಾದಕ ವಸ್ತು ಸೇವನೆ ಆರೋಪ: ಇಬ್ಬರ ಬಂಧನ

ಮಂಗಳೂರು : ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಕಂಕನಾಡಿ ಮತ್ತು ಬಂದರು ಪೊಲೀಸರು ಗುರುವಾರ ಇಬ್ಬರನ್ನು ಬಂಧಿಸಿದ್ದಾರೆ.
ನಗರ ಹೊರವಲಯದ ಅಡ್ಯಾರ್‌ನಲ್ಲಿ ಗಾಂಜಾ ಸೇವನೆ ಮಾಡಿದ್ದ ಉಡುಪಿ ಜಿಲ್ಲೆಯ ಬೆಳಪು ಪಣಿಯೂರಿನ ರಕ್ಷಿತ್(30)ನನ್ನು ಕಂಕನಾಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಗರದ ಕೋರ್ಟ್ ಆವರಣದ ಬಳಿ ಗುರುವಾರ ಗಾಂಜಾ ಸೇವಿಸಿ ತೂರಾಡುತ್ತಿದ್ದ ಕೂಳೂರು ತೋಟಬೆಂಗ್ರೆಯ ದೀಕ್ಷಿತ್(24)ನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
Next Story





