ಉಪ್ಪಿನಂಗಡಿ: ಬಸ್ ಪಲ್ಟಿ; ನಾಲ್ವರಿಗೆ ಗಾಯ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಶಿರಾಡಿ ಎಂಬಲ್ಲಿ ಖಾಸಗಿ ಬಸ್ಸೊಂದು ಹೆದ್ದಾರಿ ಬದಿಗೆ ಮಗುಚಿ ಬಿದ್ದು ನಾಲ್ವರು ಗಾಯಗೊಂಡ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರಿನತ್ತ ಪ್ರಯಾಣಿಕರನ್ನು ಕರೆ ತರುತ್ತಿದ್ದ ಭಾರತಿ ಟ್ರಾವೆಲ್ಸ್ ಸಂಸ್ಥೆಯ ಬಸ್ಸು ಚಾಲಕನ ನಿಯಂತ್ರಣ ಕಳೆದುಕೊಂಡು ಶಿರಾಡಿಯ ಪೆಟ್ರೋಲ್ ಪಂಪು ಬಳಿ ಹೆದ್ದಾರಿ ಬದಿಗೆ ಮಗುಚಿ ಬಿತ್ತು. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರಾದ ಸಕಲೇಶಪುರದ ನಿವಾಸಿ ಇಲ್ಯಾಸ್ (30), ಮಹಮ್ಮದ್ ರಾಶೀಖ್ (19), ನಿರ್ವಾಹಕ ಮುಸ್ತಾಫ ಹಾಗೂ ಬಸ್ ಡ್ರೈವರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
Next Story





