Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತದ ಮಹಿಳಾ ಸಬಲೀಕರಣ ಅಮೆರಿಕಾದಲ್ಲೂ...

ಭಾರತದ ಮಹಿಳಾ ಸಬಲೀಕರಣ ಅಮೆರಿಕಾದಲ್ಲೂ ಅನುಷಾನಕ್ಕೆ ಸರಕಾರಕ್ಕೆ ವರದಿ: ಪ್ರೊ. ಫಮೀದಾ ಹ್ಯಾಂಡಿ

ವಾರ್ತಾಭಾರತಿವಾರ್ತಾಭಾರತಿ6 Jan 2024 10:14 PM IST
share
ಭಾರತದ ಮಹಿಳಾ ಸಬಲೀಕರಣ ಅಮೆರಿಕಾದಲ್ಲೂ ಅನುಷಾನಕ್ಕೆ ಸರಕಾರಕ್ಕೆ ವರದಿ: ಪ್ರೊ. ಫಮೀದಾ ಹ್ಯಾಂಡಿ

ಪಡುಬಿದ್ರಿ: ಕಳೆದ 11 ವರ್ಷಗಳಿಂದ ಇಲ್ಲಿನ ಮಹಿಳೆಯರ ಆರ್ಥಿಕ, ಸಾಮಾಜಿಕ ಉನ್ನತೀಕರಣ ಕಂಡ ಪ್ರಭಾವಿತರಾಗಿ ದ್ದೇವೆ. ಭಾರತದಲ್ಲಿ ಮಹಿಳಾ ಸಬಲೀಕರಣ ಬಗ್ಗೆ ನಡೆಸಿದ ಅಧ್ಯಯನದಿಂದ ಅಮೇರಿಕಾದ ಗ್ರಾಮೀಣ ಭಾಗದಲ್ಲಿ ಅನುಷ್ಠಾನಗೊಳಿಸಲು ಸರಕಾರಕ್ಕೆ ವರದಿ ಸಲ್ಲಿಸಲಿದ್ದೇವೆ ಎಂದು ಅಮೇರಿಕಾದ ಪ್ರಮುಖ 3 ವಿವಿಗಳಲ್ಲಿ ಒಂದಾದ ಪೆನೊಸೋಲೋನಿಯಾ ವಿಶ್ವವಿದ್ಯಾನಿಲಯದ ಪ್ರೊ. ಡಾ. ಫಮೀದಾ ಹ್ಯಾಂಡಿ ಹೇಳಿದ್ದಾರೆ.

ಸ್ವಸಹಾಯ ಸಂಘಗಳಿಂದ ಗ್ರಾಮಾಭಿವೃದ್ಧಿ, ಮಹಿಳೆಯರ ಆರ್ಥಿಕ ಸ್ಥಿತಿಗತಿ, ಸಾಮಾಜಿಕ, ಆರ್ಥಿಕ ಅಭಿವೃದ್ಧಿ ಬಗ್ಗೆ ಅಧ್ಯಯನಕ್ಕಾಗಿ ನಿಟ್ಟಿ ವಿವಿ ಸಹಯೋಗದೊಂದಿಗೆ ಇಲ್ಲಿನ ಸಹಕಾರಿ ಸೊಸೈಟಿಗಳ ಸ್ವಸಹಾಯ ಸಂಘಗಳ ಅಧ್ಯಯನ ಕ್ಕಾಗಿ ಬಂದಿದ್ದ ಅಮೇರಿಕಾದ ವಿದ್ಯಾರ್ಥಿಗಳು ಶನಿವಾರ ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧುನೀಕೃತ ಉಚ್ಚಿಲ ಶಾಖೆಗೆ ಭೇಟಿ ನೀಡಿದ ಸಂದರ್ಭ ಅಲ್ಲಿನ ಸಹಕಾರಿ ಮಹಲ್ ಸಭಾಂಗಣದಲ್ಲಿ ಮಾಧ್ಯಮ ಜತೆ ಮಾತನಾಡಿದರು.

ಅಮೇರಿಕಾ ದೇಶದಲ್ಲೂ ಬಡತನವಿದೆ. ಮಹಿಳೆಯರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಅಮೇರಿಕಾದ ಗ್ರಾಮೀಣ ಭಾಗದ ಮಹಿಳಾ ಸಬಲೀಕರಣದ ಉದ್ದೇಶದಿಂದ ಕಳೆದ 11 ವರ್ಷಗಳಿಂದ ಅಲ್ಲಿನ ಅಧ್ಯಯನಶೀಲ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತಂದು ಇಲ್ಲಿನ ಮಹಿಳಾ ಸಬಲೀಕರಣದ ಚಿತ್ರಣವನ್ನು ಅವರಿಗೆ ಮನದಟ್ಟು ಮಾಡುವಲ್ಲಿ ಯಶಸ್ವಿಯಾಗಿದ್ದು, ವಿದ್ಯಾರ್ಥಿಗಳಿಗೆ ಅತ್ಯಂತ ಹೆಚ್ಚು ಪ್ರಭಾವಿತರಾಗಿದ್ದಾರೆ ಎಂದರು.

ಮೂಲತಃ ಪುಣೆಯವರಾದ ಫಮೀದಾ ಹ್ಯಾಂಡಿಯವರು ಅಮೇರಿಕಾದಲ್ಲೆ ನೆಲಸಿದ್ದು, ಭಾರತದ ಬಗ್ಗೆ ವಿಶೇಷ ಒಲವು ಹೊಂದಿದ್ದ ಕಾರಣ ಮತ್ತು ಕರಾವಳಿಯ ಸ್ವಸಹಾಯ ಸಂಘಗಳ ಬಗ್ಗೆ ಪ್ರಭಾವಿತರಾಗಿ 11 ವರ್ಷಗಳಿಂದ ವಿದ್ಯಾರ್ಥಿಗಳನ್ನು ಅಧ್ಯಯನಕ್ಕಾಗಿ ಕರೆದುಕೊಂಡು ಬರುತ್ತಿದ್ದಾರೆ. ಮಹಿಳಾ ಸಬಲೀಕರಣದ ಜತೆಗೆ ಹೈನುಗಾರಿಕೆ ಬಗ್ಗೆಯೂ ಅವರು ಒಲವು ಹೊಂದಿದ್ದಾರೆ ಎಂದು ತಂಡದ ಮಾರ್ಗದರ್ಶಕರಾದ ನಿಟ್ಟಿ ವಿವಿಯ ಪ್ರೊ. ವಿನೋದ್ ದೀಕ್ಷಿತ್ ವಿವರಿಸಿದರು.

ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು ಅತಿಥಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿ, ಪ್ರೊ.ಫಮೀದಾ ಹ್ಯಾಂಡಿಯವರನ್ನು ಸನ್ಮಾನಿಸಿ ಗೌರವಿಸಿದರು. ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕರು ಅಗಿ ರುವ ಡಾ. ದೇವಿಪ್ರಸಾದ್ ಶೆಟ್ಟಿ ಅವರೊಂದಿಗೆ ಅಮೆರಿಕಾ ತಂಡದ ಸದಸ್ಯರು ವಿಚಾರ ವಿನಿಮಯ ನಡೆಸಿದರು.

ಈ ಸಂದರ್ಭ ಬೆಳುಪುವಿನ ಬಟ್ಟೆ ತಯಾರಿಕಾ ಘಟಕ ಮತ್ತು ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅವರ ಗೋಶಾಲೆಗೆ ಭೇಟಿ ನೀಡಿ, ಹೈನುಗಾರಿಕೆ ಬಗ್ಗೆ ಮಾಹಿತಿ ಕಲೆ ಹಾಕಿದರು. ಬೆಳಪು ಸಂಘದ 300 ಸ್ವಸಹಾಯ ಸಂಘಗಳ ಬಗ್ಗೆಯೂ ಅವರು ಮಾಹಿತಿ ಕಲೆಹಾಕಿದರು.

ನವೋದಯ ಸ್ವಸಹಾಯ ಸಂಘಗಳ ಅಧಿಕಾರಿ ಹರಿನಾಥ್, ಬೆಳಪು ಸಂಘದ ನಿರ್ದೇಶಕರಾದ ದ್ಯುಮಣಿ ಭಟ್, ಪಾಂಡು ಶೆಟ್ಟಿ, ಪಾಂಡು ಶೇರಿಗಾರ್, ಮೀನಾ ಪೂಜಾರ್ತಿ, ಶೋಭಾ ಭಟ್, ಸುಗುಣಾ ಅಂಚನ್, ಸಂಘದ ಕಾರ್ಯನಿರ್ವಹಣಾ ಧಿಕಾರಿ ಸುಲೋಚನಾ ದೇವಾಡಿಗ, ವಿವಿಧ ಶಾಖಾ ಪ್ರಬಂಧಕರು ಉಪಸ್ಥಿತರಿದ್ದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X