ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ (2023-24ನೇ) ಸಾಲಿಗೆ ದ.ಕ.ಜಿಲ್ಲೆಯಲ್ಲಿ ಕೃಷಿ ಇಲಾಖೆಯ ರಾಜ್ಯ ವಲಯ ಯೋಜನೆಗಳಡಿ ‘ಹೈಟೆಕ್ ಹಾರ್ವೆಸ್ಟರ್ ಹಬ್’ ಎಂಬ ಹೊಸ ಯೋಜನೆಯನ್ನು ಆರಂಭಿಸಿದೆ. ಫಲಾನುಭವಿಗಳು ಜಿಲ್ಲೆಗೆ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ 40 ಲಕ್ಷದ 1 ಕಂಬೈನ್ಡ್ ಹಾರ್ವೆಸ್ಟರ್ ಹಬ್ ಸ್ಥಾಪಿಸಲು ಅವಕಾಶವಿರುತ್ತದೆ. ಈ ಹಬ್ ಸ್ಥಾಪನೆಗೆ ಸಾಮಾನ್ಯ ವರ್ಗದ ರೈತರಿಗೆ ಗರಿಷ್ಟ ಶೇ.50ರಂತೆ ಸಹಾಯಧನವನ್ನು Credit Linked Back Ended Subsidy ಮೂಲಕ ನೀಡಲಾಗುವುದು.
ಆಸಕ್ತ ರೈತರು FIDಯೊಂದಿಗೆ ಪಹಣಿ, ಗುರುತಿನ ಪತ್ರ, ಬ್ಯಾಂಕ್‌ಖಾತೆ ಸಂಖ್ಯೆ, 20 ರೂ.ಗಳ ಛಾಪಾ ಕಾಗದದ ಮೇಲೆ ಹಬ್ ಪರಬಾರೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಪತ್ರ, ತಾತ್ವಿಕ ಸಾಲ ಮಂಜೂರಾತಿ ಪತ್ರ (In Principle loan Sanction Letter) ಗಳೊಂದಿಗೆ ಜನವರಿ 29ರೊಳಗೆ ಅರ್ಜಿಗಳನ್ನು ಸಂಬಂಧಪಟ್ಟ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಜಿಲ್ಲೆಯಲ್ಲಿ ಕೇವಲ 1 ಹಾರ್ವೆಸ್ಟರ್ ಹಬ್ ಮಾತ್ರ ನಿರ್ಮಿಸುವ ಗುರಿ ಇರುವುದರಿಂದ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು. ಒಂದಕ್ಕಿಂತ ಹೆಚ್ಚು ಅರ್ಜಿಗಳು ಬಂದಲ್ಲ್ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಸ್ವೀಕೃತಗೊಂಡ ಅರ್ಜಿಗಳನ್ನು ಜಿಲ್ಲಾ ಮಟ್ಟದ ಉಪಕರಣ ಸಮಿತಿ ಸಭೆಯಲ್ಲಿ ಮಂಡಿಸಿ ಅಂತಿಮವಾಗಿ ತೀರ್ಮಾನಿ ಸಲಾಗುವುದು.
ಕಂಬೈನ್ಡ್ ಹಾರ್ವೆಸ್ಟರ್ ಹಬ್‌ನಲ್ಲಿ ಕಂಬೈನ್ಡ್ ಹಾರ್ವೆಸ್ಟರ್‌ನೊಂದಿಗೆ Baler ದಾಸ್ತಾನಿಕರಿಸುವುದು ಕಡ್ಡಾಯವಾಗಿರುತ್ತದೆ. ಇತರೆ ಉಪಕರಣಗಳಿಗೆ ಸಹಾಯಧನ ಪಡೆಯಲು ಅವಕಾಶವಿದ್ದು, ದಾಸ್ತಾನೀಕರಿಸುವುದು ಐಚ್ಛಿಕವಾಗಿರುತ್ತದೆ. ಆಯ್ಕೆಯಾದ ಫಲಾನುಭವಿಗಳು ಕೃಷಿ ಮೂಲಭೂತ ಸೌಕರ್ಯನಿಧಿ ಯೋಜನೆಯಡಿ ಸಾಲದ ನೆರವನ್ನು ಪಡೆಯಲು ಅವಕಾಶವಿರುತ್ತದೆ. ಹೈಟೆಕ್ ಹಾರ್ವೆಸ್ಟರ್ ಹಬ್ ಗಳಲ್ಲಿ ದಾಸ್ತಾನಿಕರಿಸುವ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಅಕ್ಕಪಕ್ಕದ ಜಿಲ್ಲೆಯ ರೈತರಿಗೆ ಒದಗಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.







