ಅಡ್ಕರೆಪಡ್ಪು: ಫಲಾಹ್ ಶಾಲೆಯಲ್ಲಿ ತರಬೇತಿ

ಮಂಗಳೂರು: ಜಮೀಯ್ಯತುಲ್ ಫಲಾಹ್ ಗ್ರೀನ್ ವೀವ್ ವಿದ್ಯಾಸಂಸ್ಥೆ ಅಡ್ಕರೆಪಡ್ಪುಕೊಣಾಜೆ ಇಲ್ಲಿನ ಎಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ತರಬೇತಿಯು ಶನಿವಾರ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ರಫೀಕ್ ಮಾಸ್ಟರ್ ಪಾಲ್ಗೊಂಡಿದ್ದರು. ಸಂಸ್ಥೆಯ ಸಂಚಾಲಕ ಪರ್ವೇಝ್ ಅಲಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಅಬೂಬಕ್ಕರ್ ಕೆ, ಮುಖ್ಯ ಶಿಕ್ಷಕಿ ನಮಿತಾ ಬಿ.ಎನ್ ಹಾಗೂ ಉಪನ್ಯಾಸಕರು, ಶಿಕ್ಷಕ ವೃಂದ ಮತ್ತು ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಗಳಾದ ರುಫೈದಾ ಸ್ವಾಗತಿಸಿದರು. ಅವ್ವಾ ಅನೀಶತ್ ವಂದಿಸಿದರು. ಮುಶ್ಫಿಕಾ ಕಾರ್ಯಕ್ರಮ ನಿರೂಪಿಸಿದರು.
Next Story





