Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ...

ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಒ ಡಾ. ಆನಂದ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Jan 2024 7:00 PM IST
share
ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ನಿರಂತರ ನಿಗಾ ವಹಿಸಲು ಸಿಇಒ ಡಾ. ಆನಂದ್ ಸೂಚನೆ

ಮಂಗಳೂರು, ಜ.16: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದ.ಕ. ಜಿಪಂ ಸಿಇಒ ಡಾ. ಆನಂದ್ ಸೂಚಿಸಿದ್ದಾರೆ.

ನಗರದ ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 170 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಸಾಂತ್ವನ ಕೇಂದ್ರಗಳಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ, ಸಂತ್ರಸ್ತರಿಗೆ ಸೂಕ್ತ ನ್ಯಾಯ ದೊರಕಿಸಬೇಕು. ನ್ಯಾಯಾಲಯಗಳಲ್ಲಿ ದಾಖಲಿಸಲಾದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸೂಕ್ತ ಕಾನೂನು ನೆರವು ನೀಡಲು ಇಲಾಖೆ ಒತ್ತು ನೀಡಬೇಕು. ಪ್ರಕರಣದ ವಿಚಾರಣಾ ಹಂತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಡಾ. ಆನಂದ್ ನಿರ್ದೇಶಿಸಿದರು.

ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯಡಿ 36 ಪ್ರಕರಣ ದಾಖಲಾಗಿದೆ. ಈ ಪೈಕಿ 30 ಪ್ರಕರಣ ತನಿಖಾ ಹಂತದಲ್ಲಿದೆ. ದಾಖಲಾದ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಡಾ. ಆನಂದ್ ಸೂಚಿಸಿದರು.

ಸ್ತ್ರೀಶಕ್ತಿ ಗುಂಪುಗಳು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಅವುಗಳಿಗೆ ಆಹಾರ ಸುರಕ್ಷತೆ ಪ್ರಮಾಣ ಪತ್ರ ನೀಡಿ, ಉತ್ತಮ ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸಾಲ ನೀಡುವುದಕ್ಕಿಂತಲೂ ಉತ್ಪಾದನಾ ಚಟುವಟಿಕೆಗಳಿಗೆ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ತೊಡಗಿಸಿಕೊಳ್ಳಲು ಆದ್ಯತೆ ನೀಡಲು ತಿಳಿಸಿದರು.

ನಗರದ ಕದ್ರಿ ಪಾರ್ಕ್‌ನಲ್ಲಿರುವ ಪುಟಾಣಿ ರೈಲನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ವಹಿಸುತ್ತಿದೆ. ಆದರೆ ರೈಲಿನಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡು ಬಂದ ಕಾರಣ ಕೆಲವು ತಿಂಗಳಿನಿಂದ ಸಂಚಾರ ಸ್ಥಗಿತಗೊಂಡಿದೆ. ನಂತರ ಟೆಂಡರ್ ಕರೆದು ರೈಲನ್ನು ದುರಸ್ತಿಗೊಳಿಸಲಾಗಿದ್ದು, ಪ್ರಸ್ತುತ ರೈಲು ಚಲಿಸಲು ಯೋಗ್ಯವಾಗಿದೆ. ರೈಲ್ವೆ ಇಲಾಖೆ ಸುರಕ್ಷತಾ ಪ್ರಮಾಣಪತ್ರ ನೀಡಿದ ನಂತರ ಪುಟಾಣಿ ರೈಲು ಸಂಚಾರ ಪುನರಾರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೆ ಇಲಾಖೆಯ ಪಾಲಕ್ಕಾಡ್ ವಿಭಾಗಕ್ಕೆ ಪತ್ರ ಬರೆಯಲಾಗಿದೆ. ಶೀಘ್ರದಲ್ಲೇ ಪ್ರಮಾಣಪತ್ರ ದೊರಕುವ ಸಾಧ್ಯತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಅಪರ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ, ಡಾ. ಹಿಲ್ಡಾ ರಾಯಪ್ಪನ್, ಸಾಂತ್ವನ ಕೇಂದ್ರಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X