Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೈಂಟ್ ಅಲೋಶಿಯಸ್ ಸ್ವಾಯತ್ತ ಕಾಲೇಜಿಗೆ...

ಸೈಂಟ್ ಅಲೋಶಿಯಸ್ ಸ್ವಾಯತ್ತ ಕಾಲೇಜಿಗೆ ಪರಿಗಣಿತ ವಿಶ್ವ ವಿದ್ಯಾಲಯದ ಸ್ಥಾನಮಾನ

ವಾರ್ತಾಭಾರತಿವಾರ್ತಾಭಾರತಿ25 Jan 2024 9:51 PM IST
share
ಸೈಂಟ್ ಅಲೋಶಿಯಸ್ ಸ್ವಾಯತ್ತ ಕಾಲೇಜಿಗೆ ಪರಿಗಣಿತ ವಿಶ್ವ ವಿದ್ಯಾಲಯದ ಸ್ಥಾನಮಾನ

ಮಂಗಳೂರು: ನಗರದ ಪ್ರಸಿದ್ದ ಸಂತ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ವಿಶ್ವವಿದ್ಯಾನಿಲಯದ ಸ್ಥಾನಮಾನದ ಪ್ರಸ್ತಾವನೆಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (ಯುಜಿಸಿ) ಮತ್ತು ಭಾರತ ಸರಕಾರದ ಶಿಕ್ಷಣ ಸಚಿವಾಲ ಯವು ಅನುಮೋದಿಸಿ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಥಾನಮಾನವನ್ನು ನೀಡಿದೆ ಎಂದು ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ. ಫಾ. ಮೆಲ್ವಿನ್ ಜೆ. ಪಿಂಟೋ ತಿಳಿಸಿದ್ದಾರೆ.

ಕಾಲೇಜಿನ ಸಾನ್ನಿಧ್ಯ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಈ ಮಾಹಿತಿ ನೀಡಿದ ಅವರು, ಈ ಸ್ಥಾನಮಾನ ದೊಂದಿಗೆ ಸಂಸ್ಥೆಯು ಇನ್ನು ಮುಂದೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಎಂದು ಕರೆಯಲ್ಪಡುತ್ತದೆ. ಗುಣ ಮಟ್ಟದ ಉನ್ನತ ಶಿಕ್ಷಣವನ್ನು ನೀಡಿ ಶೈಕ್ಷಣಿಕ ಸೇವೆ ಸಲ್ಲಿಸಬೇಕೆಂದು ಬಹುದಿನಗಳಿಂದ ಅವಕಾಶದ ನಿರೀಕ್ಷೆಯಲ್ಲಿದ್ದ ಕಾಲೇಜಿನ ಆಡಳಿತ ಮಂಡಳಿಗೆ ಈ ಸ್ಥಾನಮಾನವು ವಿಶೇಷ ಸಂತಸವನ್ನು ತಂದಿದೆ ಎಂದರು.

ಕಾಲೇಜಿನ ಪ್ರಾಧ್ಯಾಪಕರ ವೃಂದದವರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರರು ಮತ್ತು ಸಂಬಂಧಪಟ್ಟ ಎಲ್ಲರ ಸಮರ್ಪಣಾ ಮನೋಭಾವ ಮತ್ತು ದಣಿವರಿಯದ ಶ್ರಮದ ಫಲವಾಗಿದೆ. ಪರಿಗಣಿತ ವಿಶ್ವವಿದ್ಯಾನಿಲಯವಾಗಿ ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆ ಹೊಸ ಕನಸುಗಳೊಂದಿಗೆ ತನ್ನ ಪಯಣವನ್ನು ಆರಂಭಿಸಲಿದೆ. ಪರಿಗಣಿತ ವಿಶ್ವವಿದ್ಯಾನಿಲ ಯದ ಸ್ವರೂಪಕ್ಕೆ ಹೊದಿಕೊಲ್ಳುತ್ತಾ ಶೈಕ್ಷಣಿಕ ಸಂಸ್ಥೆಯ ಸಾಮಾಜಿಕ ಬದ್ಧತೆಯನ್ನು ಗಮನದಲ್ಲಿರಿಸಿ ಸಮಾಜ ಕಟ್ಟುವ ಸದುದ್ದೇಶದ ಕಾರ್ಯಗಳನ್ನು ಸಂಸ್ಥೆ ಮುಂದುವರಿಸಲಿದೆ ಎಂದು ಅವರು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ, ಯುಜಿಸಿ ಮತ್ತು ಶಿಕ್ಷಣ ಸಚಿವಾಲಯವು, ಕಾಲೇಜಿನ ಭೌತಿಕ ಮತ್ತು ಡಿಜಿಟಲ್ ಮೂಲಸೌಕರ್ಯ, ಪಠ್ಯಕ್ರಮ ವಿನ್ಯಾಸ, ಸಂಶೋಧನೆ ಮತ್ತು ಆವಿಷ್ಕಾರ, ಪದವಿ ಫಲಿತಾಂಶ ಗಳು, ವಿದ್ಯಾರ್ಥಿಗಳ ಸಾಧನೆಯ ಮಟ್ಟಗಳು, ನೇಮಕಾತಿ, ಸಂಸ್ಥೆಯ ಕನಸು - ಧೈಯ ಮತ್ತು ಸಮಾಜದ ಮೇಲೆ ಇವುಗಳು ಬೀರಿದ ಪರಿಣಾಮವನ್ನು ಕೂಲಂ ಕು ಷವಾಗಿ ಅಧ್ಯಯನ ಮಾಡಿ ಈ ಸ್ಥಾನಮಾನವನ್ನು ನೀಡಿದೆ ಎಂದರು.

ಈ ಎಲ್ಲ ಮಾನದಂಡಗಳ ಜೊತೆಗೆ ನ್ಯಾಕ್ ಮತ್ತು ನಿರ್ಫ್‌ನಂತಹ ರಾಷ್ಟ್ರೀಯ ಮಟ್ಟದ ಸಂಸ್ಥೆಗಳು ನೀಡಿರುವ ಶ್ರೇಯಾಂಕ ಗಳನ್ನು ಪರಿಗಣಿಸಿ ಸಂತ ಅಲೋಶಿಯಸ್ ಕಾಲೇಜಿಗೆ ಈ ಮಾನ್ಯತೆಯನ್ನು ನೀಡಲಾಗಿದೆ. ಕಾಲೇಜಿಗೆ ದೊರೆತ ಈ ಮಾನ್ಯತೆಯಿಂದಾಗಿ ಸಂಸ್ಥೆಯು ಜಾಗತಿಕವಾಗಿ ಸ್ಪರ್ಧಾತ್ಮಕ ಪಠ್ಯಕ್ರಮ, ಉನ್ನತ ಮಟ್ಟದ ಸಂಶೋಧನೆ ಆವಿಷ್ಕಾರಗಳು ಮತ್ತು ಉದ್ಯಮಶೀಲತಾ ಪ್ರತಿನಿಧೀಕರಣ ಮೊದಲಾದುವುಗಳನ್ನು ದಕ್ಷವಾಗಿ ನಡೆಸುವುದಕ್ಕೆ ಮತ್ತು ರಚನಾತ್ಮಕ ವಾತಾವರಣವನ್ನು ನಿರ್ಮಿಸುವುದಕ್ಕೆ ಶಕ್ತವಾಗುವುದು. ಪ್ರಾದೇಶಿಕ, ರಾಷ್ಟ್ರೀಯ ಮತ್ತು ಜಾಗತಿಕ ಪಾಲುದಾರರೊಂದಿಗೆ ಗಟ್ಟಿಯಾದ ಸಹಯೋಗದ ಸಾಧ್ಯತೆಗಳಿಗೆ ಇದು ದೊಡ್ಡಮಟ್ಟದಲ್ಲಿ ಅವಕಾಶಗಳನ್ನು ಒದಗಿಸಲಿದೆ ಎಂದು ಅವರು ಹೇಳಿದರು.

1880 ರಲ್ಲಿ ಜೆಸ್ಯೂಟ್ ಪಿತಾಮಹರಿಂದ ಸ್ಥಾಪಿತವಾದ ಸಂತ ಅಲೋಶಿಯಸ್ ಕಾಲೇಜು ಈ ಪ್ರದೇಶದ ಯುವಕರಲ್ಲಿ ಬದ್ಧತೆ, ಸಾಮರ್ಥ್ಯ, ಸಹಾನುಭೂತಿ ಮತ್ತು ಆತ್ಮಸಾಕ್ಷಿಯನ್ನು ಹೊಂದಿರುವ ವ್ಯಕ್ತಿಗಳನ್ನಾಗಿ ರೂಪಿಸಿದೆ. ಜೊತೆಗೆ ಈ ಸಂಸ್ಥೆ ಹಲವಾರು ವಿಶಿಷ್ಟ ಸಾಧನೆಗಳನ್ನು ಹೊಂದಿರುವ ಈ ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಸಂಸ್ಥೆಯ ರಾಷ್ಟ್ರೀಯ ಮತ್ತು ಜಾಗತಿಕ ಸ್ಥಾನಮಾನವನ್ನು ಪರಿಗಣಿಸಿ 2007 ರಲ್ಲಿ ಅದಕ್ಕೆ ಸ್ವಾಯತ್ತತೆಯ ಸ್ಥಾನಮಾನ ನೀಡಲಾಯಿತು. ಇದಲ್ಲದೆ, ಸಂಸ್ಥೆಯು ರಾಷ್ಟ್ರೀಯ ಮಟ್ಟದಲ್ಲಿ ನ್ಯಾಕ್ ಮಾನ್ಯತೆಗಳ ಎಲ್ಲಾ ನಾಲ್ಕು ಹಂತಗಳ ಮೌಲ್ಯಮಾಪನ ಕ್ರಮದಲ್ಲಿ ಉನ್ನತ ದರ್ಜೆಯ ಶ್ರೇಯಾಂಕವನ್ನು ನಿರಂತರವಾಗಿ ಪಡೆದುಕೊಂಡಿದೆ. ನಾಲ್ಕನೇ ಹಂತದ ಮೌಲ್ಯಮಾಪನದಲ್ಲಿ ಒಟ್ಟು ಅಂಕ 4 ರಲ್ಲಿ 3.67 ಸಿಜಿಪಿಎ ಯೊಂದಿಗೆ ಎ ಪ್ಲಸ್ ಪ್ಲಸ್ ದರ್ಜೆಯನ್ನು ಪಡೆದಿದೆ. ನಿರ್ಫ್ ಶ್ರೇಯಾಂಕದಲ್ಲಿ ಸತತ 3 ಅವಧಿಗೆ ಉನ್ನತ 100 ಕಾಲೇಜುಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು.

ರಿಜಿಸ್ಟ್ರಾರ್ ಆಲ್ವಿನ್ ಡೇಸಾ ಉಪಸ್ಥಿತರಿದ್ದರು.

‘ಕಾಲೇಜಿಗೆ ವಿಶ್ವವಿದ್ಯಾನಿಲಯದ ಸ್ಥಾನಮಾನ ಸ್ವಲ್ಪ ವಿಳಂಬವಾದರೂ ಸೂಕ್ತ ಸಮಯದಲ್ಲಿ ದೊರಕಿರುವ ಸಂತಸವಿದೆ. ಜ. 19ರಂದು ವಿಶ್ವವಿದ್ಯಾನಿಲಯ ಸ್ಥಾನಮಾನದ ಘೋಷಣೆಯಾಗಿದೆ. ಯುಜಿಸಿಯ ಮಾನದಂಡಗಳೊಂದಿಗೆ ವಿಶ್ವವಿದ್ಯಾನಿಲಯಕ್ಕಾಗಿನ ಅಧ್ಯಯನ ಮಂಡಳಿ, ಎಕ್ಸಿಕ್ಯೂಟಿವ್ ಕೌನ್ಸಿಲ್‌ಗಳ ರಚನೆ ಪ್ರಕ್ರಿಯೆ ನಾಳೆಯಿಂದ ಆರಂಭಗೊಳ್ಳಲಿದೆ. ಬಳಿಕ ಮುಂದಿನ ಜೂನ್‌ನಲ್ಲಿ ಹೊಸ ಶೈಕ್ಷಣಿಕ ವರ್ಷದಿಂದ ವಿಶ್ವವಿದ್ಯಾಲಯದ ಪ್ರವೇಶಾತಿ ಆರಂಭಗೊಳ್ಳಲಿದೆ. ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳು ಈವರೆಗೆ ಪಾಲಿಸಿಕೊಂಡು ಬಂದ ಆದರ್ಶದಂತೆ, ಬಡ, ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಸೇವೆಯನ್ನು ಮುಂದುವರಿಸಲಿದೆ. ಜತೆಗೆ ಸಂಶೋಧನಾತ್ಮಕ ಚಟುವಟಿಕೆಗಳಿಗೆ ಒತ್ತು ನೀಡಲಿದೆ.’

-ಡಾ. ಪ್ರವೀಣ್ ಮಾರ್ಟಿಸ್, ಪ್ರಾಂಶುಪಾಲರು, ಸಂತ ಅಲೋಶಿಯಸ್ ಕಾಲೇಜು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X