Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗೋಳಿತ್ತೊಟ್ಟು: ರಾಷ್ಟ್ರಪಿತ...

ಗೋಳಿತ್ತೊಟ್ಟು: ರಾಷ್ಟ್ರಪಿತ ಮಹಾತ್ಮಗಾಂಧಿ ಪ್ರತಿಮೆ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ29 Jan 2024 9:05 PM IST
share
ಗೋಳಿತ್ತೊಟ್ಟು: ರಾಷ್ಟ್ರಪಿತ ಮಹಾತ್ಮಗಾಂಧಿ ಪ್ರತಿಮೆ ಲೋಕಾರ್ಪಣೆ

ನೆಲ್ಯಾಡಿ: ನಿಲಿನಾ ಕೆ.ಜೋನ್ ನೆಲ್ಯಾಡಿ ಇವರ ಸವಿನೆನಪಿಗಾಗಿ ದೈಹಿಕ ಶಿಕ್ಷಣ ಶಿಕ್ಷಕ ಜೋನ್ ಕೆ.ಪಿ.ಅವರು ಕೊಡುಗೆ ಯಾಗಿ ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ಗೋಳಿತ್ತೊಟ್ಟು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯಲ್ಲಿ ನಿರ್ಮಾಣ ಮಾಡಿರುವ ರಾಷ್ಟ್ರಪಿತ ಮಹಾತ್ಮಗಾಂಧಿ ಅವರ ಪ್ರತಿಮೆ ಜ.27ರಂದು ಲೋಕಾರ್ಪಣೆಗೊಳಿಸಲಾಯಿತು.

ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರು ಪ್ರತಿಮೆ ಅನಾವರಣಗೊಳಿಸಿ ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿದರು. ಬಳಿಕ ಮಾತನಾಡಿದ ವಿನಯಕುಮಾರ್ ಸೊರಕೆ ಅವರು, ಮಹಾತ್ಮಗಾಂಧೀಜಿಯವರು ಕೇವಲ ಭಾರತಕ್ಕೆ ಮಾತ್ರ ರಾಷ್ಟ್ರಪಿತ ಅಲ್ಲ. ಜಗತ್ತಿನ 224 ದೇಶಗಳೂ ಗಾಂಧೀಜಿಯವರ ತತ್ವವನ್ನು ಒಪ್ಪಿಕೊಂಡಿವೆ. ಮಹಾತ್ಮಗಾಂಧೀಜಿಯವರದ್ದು ಸತ್ಯ, ಶಾಂತಿ, ಅಹಿಂಸೆಯ ಮೂಲಕ ಜಗತ್ತಿನ ಎಲ್ಲೂ ಜಯಗಳಿಸಬಹುದು ಎಂಬುದನ್ನು ತೋರಿಸಿಕೊಟ್ಟಿರುವಂತಹ ವ್ಯಕ್ತಿತ್ವವಾಗಿದೆ. ಜಗತ್ತಿನಲ್ಲಿ ಅಶಾಂತಿ ನಿರ್ಮಾಣಗೊಂಡ ಸಂದರ್ಭದಲ್ಲೂ ವಿಶ್ವಸಂಸ್ಥೆಯಲ್ಲಿ ಮಹಾತ್ಮಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸೆ ಬಗ್ಗೆ ಚರ್ಚೆ ನಡೆದಿದೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಶೃಂಗಸಭೆಗೆ ಆಗಮಿಸಿದ ವಿವಿಧ ರಾಷ್ಟ್ರಗಳ ಪ್ರಧಾನಿಗಳೂ ರಾಜ್‍ಘಾಟ್‍ಗೆ ತೆರಳಿ ಮಹಾತ್ಮಗಾಂಧೀಜಿಯವರ ಸಮಾಧಿಗೆ ಗೌರವ ಸಲ್ಲಿಸಿದ್ದಾರೆ. ಗಾಂಧೀಜಿಯವರದ್ದು ಎಲ್ಲರೂ ಗೌರವಿಸುವ ಅಭೂತಪೂರ್ವ ವ್ಯಕ್ತಿತ್ವವಾಗಿದೆ ಎಂದರು.

ಗಾಂಧೀಜಿಯವರಷ್ಟು ರಾಮಭಕ್ತ ಬೇರೆ ಯಾರೂ ಇಲ್ಲ. ರಾಮನ ಭಜನೆ, ಪೂಜಿಸುವ ವ್ಯಕ್ತಿತ್ವ ಅವರದ್ದು. ಬಡವರ ಹೃದಯದಲ್ಲಿ ಭಗವಂತನ ದೇಗುಲವಿದೆ ಎಂಬ ಮಾತನ್ನು ಗಾಂಧೀಜಿಯವರು ಹೇಳಿದ್ದರು. ಎಲ್ಲಾ ಜಾತಿ, ಧರ್ಮ, ಪಕ್ಷದವರೂ ಒಪ್ಪುವ ವ್ಯಕ್ತಿ ಮಹಾತ್ಮ ಗಾಂಧೀಜಿಯವರು. ಅವರ ಸರಳ ಜೀವನ ಎಲ್ಲರಿಗೂ ಆದರ್ಶವಾಗಿದೆ. ಗ್ರಾಮೀಣ ಪ್ರದೇಶವಾದ ಗೋಳಿತ್ತೊಟ್ಟು ಶಾಲೆಯಲ್ಲಿ ಮಹಾತ್ಮಗಾಂಧೀಜಿಯವರ ಪ್ರತಿಮೆ ನಿರ್ಮಾಣವಾಗಿರುವುದು ದೇಶದ 140 ಕೋಟಿ ಭಾರತೀಯರೂ ಹೆಮ್ಮೆ ಪಡುವ ವಿಚಾರವಾಗಿದೆ. ಅದರಲ್ಲೂ ದೈಹಿಕ ಶಿಕ್ಷಣ ಶಿಕ್ಷಕರೊಬ್ಬರೂ ತಾನು ಕರ್ತವ್ಯ ನಿರ್ವಹಿಸಿದ ಶಾಲೆಯಲ್ಲಿ ಮಹಾತ್ಮಗಾಂಧೀಜಿಯವರ ಪ್ರತಿಮೆ ನಿರ್ಮಿಸಿ ಕೊಡುಗೆಯಾಗಿ ನೀಡಿರುವುದು ರಾಜ್ಯದಲ್ಲೇ ಪ್ರಥಮ ಆಗಿರಬಹುದು ಎಂದು ಹೇಳಿದರು.

ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡ ನೆಲ್ಯಾಡಿ, ನೆಲ್ಯಾಡಿಯ ಉದ್ಯಮಿ ಕೆ.ಪಿ.ತೋಮಸ್, ಗೋಳಿತ್ತೊಟ್ಟು ಗ್ರಾ.ಪಂ.ಮಾಜಿ ಅಧ್ಯಕ್ಷ ಪೂವಪ್ಪ ಕರ್ಕೇರ, ಗೋಳಿತ್ತೊಟ್ಟು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಜಯಂತಿ ಬಿ.ಎಂ., ಸಾಮಾಜಿಕ ಕಾರ್ಯಕರ್ತರಾದ ಪ್ರಸಾದ್ ರಾಮಕುಂಜ, ಕುಶಾಲಪ್ಪ ಗೌಡ ಕಟ್ಟೆಮಜಲು, ನೆಲ್ಯಾಡಿ ಸೈಂಟ್ ಸ್ಟೀಫನ್ ಚರ್ಚ್‍ನ ಟ್ರಸ್ಟಿ ಬೈಜು ನೆಲ್ಯಾಡಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಾಲಚಂದ್ರ ಗುಂಡ್ಯ, ಸವಣೂರು ಸರಕಾರಿ ಹಿ.ಪ್ರಾ.ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಸುವರ್ಣ, ರಾಮಕುಂಜ ಸರಕಾರಿ ಹಿ.ಪ್ರಾ.ಶಾಲಾ ಮುಖ್ಯಶಿಕ್ಷಕ ಮಹೇಶ್, ಬಿಎಸ್‍ಎನ್‍ಎಲ್‍ನ ನಿವೃತ್ತ ಅಧಿಕಾರಿ ಶೇಖರ ಗೌಡ ಅನಿಲಭಾಗ್, ಎಸ್‍ಡಿಎಂಸಿ ಸದಸ್ಯ ಬೈಜು ಗೋಳಿತ್ತೊಟ್ಟು, ಗೋಳಿತ್ತೊಟ್ಟು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಶಿಕ್ಷಕಿಯರಾದ ತೇಜಸ್ವಿ, ತೇಜಸ್ವಿನಿ ಮತ್ತಿತರರು ಉಪಸ್ಥಿತರಿದ್ದರು.

ಎಸ್‍ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ ಸ್ವಾಗತಿಸಿ, ಪ್ರತಿಮೆ ದಾನಿ, ದೈಹಿಕ ಶಿಕ್ಷಣ ಶಿಕ್ಷಕ ಜೋನ್ ಕೆ.ಪಿ.ವಂದಿಸಿದರು. ಕೆಯ್ಯೂರು ಕೆಪಿಎಸ್ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಪುತ್ತೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ನವೀನ್‍ಕುಮಾರ್ ರೈ ಅವರು ನಿರೂಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X