ವ್ಯಕ್ತಿ ನಾಪತ್ತೆ

ಮಂಗಳೂರು: ಮಂಗಳೂರಿನಲ್ಲಿ ಗಾರೆ ಕೆಲಸ ಮಾಡುತ್ತಿದ್ದ ರವಿ ಪಕ್ಕಿರಪ್ಪ ದೇಸೂರು (48) ಎಂಬವರು 2021ನೇ ನವೆಂಬರ್ ತಿಂಗಳಿನಲ್ಲಿ ಊರಿಗೆ ಹೋಗುವುದಾಗಿ ತಿಳಿಸಿ ಹೋದವರು ಕಾಣೆಯಾಗಿರುತ್ತಾರೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಚಹರೆ: 5.6 ಅಡಿ ಎತ್ತರ, ಗೋಧಿ ಮೈ ಬಣ್ಣ ಸಪೂರ ಶರೀರ, ಕನ್ನಡ, ಹಿಂದಿ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಹೆಚ್ಚಿನ ಮಾಹಿತಿ ಸಿಕ್ಕಲ್ಲಿ ಕಾವೂರು ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0824- 220533, ಪೊಲೀಸ್ ಉಪನಿರೀಕ್ಷಕರು ಕಾವೂರು ಪೊಲೀಸ್ ಠಾಣೆ 9480805358, ಮಂಗಳೂರು ನಗರ ಪೊಲೀಸ್ ಕಂಟ್ರೋಲ್ ರೂಂ 0824-2220800 ಸಂಪರ್ಕಿಸುವಂತೆ ಕಾವೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story





