Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗಾಂಧೀಜಿ ಆದರ್ಶ,ಮೌಲ್ಯಗಳನ್ನು...

ಗಾಂಧೀಜಿ ಆದರ್ಶ,ಮೌಲ್ಯಗಳನ್ನು ಪಸರಿಸಬೇಕಾಗಿದೆ: ರಮಾನಾಥ ರೈ

ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ ಪುಣ್ಯ ಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ30 Jan 2024 6:46 PM IST
share
ಗಾಂಧೀಜಿ ಆದರ್ಶ,ಮೌಲ್ಯಗಳನ್ನು ಪಸರಿಸಬೇಕಾಗಿದೆ: ರಮಾನಾಥ ರೈ

ಮಂಗಳೂರು: ನಮ್ಮ ದೇಶದ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಪ್ರಾಣ ತ್ಯಾಗ ಮಾಡಿದವರು ಮಹಾತ್ಮಾ ಗಾಂಧಿ. ಗಾಂಧೀಜಿ ಕುರಿತು ಅಪಪ್ರಚಾರ ನಡೆಯುತ್ತಿರುವ ಈಗಿನ ಕಾಲಘಟ್ಟದಲ್ಲಿ ಅವರ ಜೀವನ, ಆದರ್ಶ, ಮೌಲ್ಯಗಳ ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸುವ ಕಾರ್ಯ ನಡೆಯಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಮಹಾತ್ಮಾ ಗಾಂಧೀಜಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಗಾಂಧೀಜಿ ಕುರಿತು ತಪ್ಪು ಭಾವನೆಗಳನ್ನು ಇಟ್ಟುಕೊಂಡವರು ಬಹಳಷ್ಟು ಮಂದಿ ಇದ್ದಾರೆ. ಆದರೆ ಗಾಂಧೀಜಿ ಇಡೀ ಜಗತ್ತು ಮೆಚ್ಚಿದ, ಒಪ್ಪಿಕೊಂಡ ನಾಯಕ, ಗಾಂಧಿ ಜನ್ಮದಿನವನ್ನು ಜಗತ್ತಿನ ದೇಶಗಳು ಅಹಿಂಸಾ ದಿನವಾಗಿ ಆಚರಿಸುತ್ತಿದ್ದರೆ, ನಮ್ಮ ದೇಶದಲ್ಲಿ ಗಾಂಧಿ ಹತ್ಯೆ ಮಾಡಿದವರನ್ನೇ ವೈಭವೀಕರಿಸುವುದು ನೋವು ತರುವ ವಿಚಾರ. ಗಾಂಧೀಜಿ ಯಾಕೆ ಹುತಾತ್ಮರಾದರು ಎನ್ನುವುದನ್ನು ವಿಮರ್ಶೆ ಮಾಡಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ರಮಾನಾಥ ರೈ ನುಡಿದರು.

ಅಹಿಂಸಾ ಚಳವಳಿ ಮೂಲಕ ಸ್ವಾತಂತ್ರ್ಯ ತಂದುಕೊಡಬಹುದು ಅಂತ ಇಡೀ ಪ್ರಪಂಚಕ್ಕೆ ತೋರಿಸಿಕೊಟ್ಟದ್ದು ಮಹಾತ್ಮಾ ಗಾಂಧಿ. ಎಷ್ಟೋ ವರ್ಷಗಳ ಕಾಲ ಜೈಲುವಾಸವನ್ನೂ ಅನುಭವಿಸಿದ್ದಾರೆ. ಆದರೆ ಗಾಂಧೀಜಿ ದೇಶಕ್ಕಾಗಿ ಏನು ತ್ಯಾಗ ಮಾಡಿದ್ದಾರೆ ಎಂದು ಲಘುವಾಗಿ ಮಾತನಾಡುವವರಿದ್ದಾರೆ. ಈ ಹಿನ್ನೆಲೆಯಲ್ಲಿ, ಗಾಂಧೀಜಿ ಬಗ್ಗೆ ಸತ್ಯ ವಿಚಾರಗಳುಳ್ಳ ಪುಸ್ತಕಗಳನ್ನು ಓದಿಕೊಂಡು, ಸತ್ಯ ವಿಚಾರಗಳನ್ನು ಸಮಾಜದಲ್ಲಿ ಪಸರಿಸಬೇಕು. ಗಾಂಧೀಜಿ ಅವರ ಕೊಡುಗೆಗಳನ್ನು ಸದಾ ಕಾಲ ದೇಶ ಸ್ಮರಿಸಿಕೊಳ್ಳಬೇಕು ಎಂದರು.

ಇಂದು ದೇಶದ ಪರಿಸ್ಥಿತಿ ಅಪಾಯದಲ್ಲಿದೆ. ಆಡಳಿತ ಯಂತ್ರ ಒಂದು ದೃಷ್ಟಿಯಲ್ಲಿ ಅಪಾಯದ ಕಡೆ ಹೋಗ್ತಿದೆ. ಅದನ್ನು ತಡೆಯಬೇಕಾದರೆ ದೇಶದ ಜಾತ್ಯತೀತ ಚಳವಳಿಯನ್ನು ಸ್ಥಿರಗೊಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಒಂದಾಗುವ ಅಗತ್ಯವಿದೆ ಎಂದು ರೈ ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಾ.ಮಂಜುನಾಥ ಭಂಡಾರಿ ಮಾತನಾಡಿ, ಗಾಂಧೀಜಿ ಆಚಾರ ವಿಚಾರಗಳು ಇಂದಿಗೂ ಪ್ರಸ್ತುತ. ಗಾಂಧೀಜಿ ಬಗ್ಗೆ ಇಂದಿನ ಪೀಳಿಗೆಗೆ ಶಾಲೆ ಕಾಲೇಜುಗಳಲ್ಲಿ, ಯುವಕರಿಗೆ ಆದಷ್ಟು ತಿಳಿಹೇಳುವ ಕೆಲಸ ಮಾಡಬೇಕಿದೆ. ಗಾಂಧೀಜಿ ಕಾಣುತ್ತಿದ್ದ ಕನಸನ್ನು ಯಾವಾಗ ಮರೆಯುತ್ತೇವೋ ಅಂದು ದೇಶದ ಪ್ರಜಾಪ್ರಭುತ್ವಕ್ಕೆ ಕಂಟಕ ಬರಲಿದೆ. ಹಾಗಾಗಿ ಗಾಂಧೀಜಿ ಆದರ್ಶಗಳನ್ನು ಯುವ ಪೀಳಿಗೆಗೆ ತಿಳಿಸುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.

ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಮಾತನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್., ಕೃಪಾ ಆಳ್ವಾ, ಬ್ಲಾಕ್ ಅಧ್ಯಕ್ಷರಾದ ಅಬ್ದುಲ್ ಸಲೀಂ, ಪ್ರಕಾಶ್ ಸಾಲಿಯಾನ್, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರಾದ ಬಿ.ಎಂ. ಅಬ್ಬಾಸ್ ಅಲಿ, ಮನೋರಾಜ್ ರಾಜೀವ್, ಲಾರೆನ್ಸ್ ಡಿಸೋಜ, ಸುಹಾನ್ ಆಳ್ವ, ಅಬ್ದುಲ್ ರವೂಫ್, ಕಿರಣ್ ಬುಡ್ಲೆಗುತ್ತು, ನೀರಜ್‌ಪಾಲ್, ಶಬೀರ್.ಎಸ್, ಸುಧೀರ್ ಟಿ ಕೆ, ಪ್ರಕಾಶ್ ಆಳ್ವಿನ್, ತನ್ವಿರ್ ಶಾ, ಗಣೇಶ್ ಪೂಜಾರಿ, ವಿಕಾಸ್ ಶೆಟ್ಟಿ, ಹೈದರ್ ಬೋಳಾರ್, ಸುರೇಖಾ ಚಂದ್ರಹಾಸ್, ಲಿಯಾಕತ್ ಶಾ, ಯೋಗೀಶ್ ನಾಯಕ್, ಚಂದ್ರಕಲಾ ಜೋಗಿ, ಸುರೇಶ್ ಪೂಜಾರಿ, ನಮಿತಾ ಡಿ ರಾವ್, ಸಲೀಮ್ ಮಕ್ಕ, ಶಾಂತಲಾ ಗಟ್ಟಿ, ಜೋರ್ಜ್, ಸಬಿತಾ ಮಿಸ್ಕಿತ್, ಮಲರ್ ಮೋನು, ದಿನೇಶ್ ರಾವ್, ನಝೀರ್ ಬಜಾಲ್ ಇದ್ದರು. ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿದರು. ಶುಭೋದಯ ಆಳ್ವ ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X