ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ‘ಹುತಾತ್ಮರ ದಿನಾಚರಣೆ’

ಮಂಗಳೂರು : ‘‘ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸದಾ ಸ್ಮರಿಸಬೇಕು. ಶಾಂತಿ, ಅಹಿಂಸೆ, ಸತ್ಯ ಪ್ರಾಮಾಣಿ ಕತೆಯ ಮೂಲಕ ಮಹಾತ್ಮರು ದೇಶಕ್ಕೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಅವರ ತತ್ವಗಳನ್ನು ಪ್ರತಿಯೊಬ್ಬ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲ ವಂ.ಫಾ.ರಾಬರ್ಟ್ ಡಿಸೋಜ ಕರೆ ನೀಡಿದ್ದಾರೆ.
ಲೂರ್ಡ್ಸ್ ಸೆಂಟ್ರಲ್ ಸ್ಕೂಲ್‌ನಲ್ಲಿ ಆಯೋಜಿಸಿದ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲೆ ಬೆಲಿಟಾ ಮಸ್ಕರೇನ್ಹಸ್ ಮತ್ತು ಅನೀತಾ ಥೋಮಸ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಮಹಾತ್ಮರ ಸಂದೇಶವನ್ನು ಸಾರಿ ಕಿರು ನಾಟಕವನ್ನು ಪ್ರದರ್ಶಿಸಿದರು. ವಿದ್ಯಾರ್ಥಿ ನೇತನ್ ಪ್ರೀಥ್ ದೇಶಭಕ್ತಿಗೀತೆಯನ್ನು ಹಾಡಿದರು. ವಿದ್ಯಾರ್ಥಿನಿ ಎರಿಕಾ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ರೇಶ್ಮಾ ಮತ್ತು ನೀತಾ ಕಾರ್ಯಕ್ರಮವನ್ನು ಸಂಯೋಜಿಸಿದರು.
Next Story





