ಸುಳ್ಯ: ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ನರಿಮೊಗರು ಗ್ರಾಮ ಮುಕ್ವೆ ನಿವಾಸಿ ನೌಶಾದ್ ಬಿ.ಎ. (36) ಮತ್ತು ಸುಲಿಗೆಗೆ ಸಹಕರಿಸಿದ ಕಾಸರಗೋಡಿನ ಉದ್ಯಾವರ ನಿವಾಸಿ ಚಂದ್ರಮೋಹನ್ (42) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 80,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





