ದಾರುನ್ನೂರ್ ಸಂಸ್ಥೆಗೆ ಜಿಫ್ರಿ ಮುತ್ತುಕೋಯ ತಂಙಳ್ ಭೇಟಿ

ಮಂಗಳೂರು: ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾದ ಕೇಂದ್ರ ಮುಶಾವರ ಅಧ್ಯಕ್ಷ ಸಯ್ಯಿದ್ ಜಿಫ್ರಿ ಮುತ್ತು ಕೋಯ ತಂಙಳ್ ಅವರು ಕಾಶಿಪಟ್ಣದ ದಾರುನ್ನೂರ್ ಸಂಸ್ಥೆಗೆ ಭೇಟಿ ನೀಡಿದರು.
ಈ ಸಂದರ್ಭ ಸಂಸ್ಥೆಯ ವತಿಯಿಂದ ಜಿಫ್ರಿ ಮುತ್ತುಕೋಯ ತಂಙಳ್ ರಿಗೆ ಗೌರವಾರ್ಪಣೆ ಮಾಡಲಾಯಿತು. ದಾರುನ್ನೂರ್ ಕೇಂದ್ರ ಸಮಿತಿಯ ಸದಸ್ಯ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಉಪಾಧ್ಯಕ್ಷ ಫಕೀರಬ್ಬ ಮಾಸ್ಟರ್ ಫ್ಲವರ್, ಅಬೂಬಕ್ಕರ್ ಮರೋಡಿ, ಪ್ರಾಂಶುಪಾಲ ಅಮೀನ್ ಹುದವಿ, ಸದರ್ ಮುದರ್ರಿಸ್ ಹುಸೈನ್ ರಹ್ಮಾನಿ, ಉಪಪ್ರಾಂಶುಪಾಲ ಮುಈನುದ್ದೀನ್ ಹುದವಿ, ಎಸ್ಕೆಎಸೆಸ್ಸೆಫ್ ಕೇಂದ್ರೀಯ ಸಮಿತಿಯ ಇಸ್ಮಾಯಿಲ್ ಯಮಾನಿ, ಮೂಡುಬಿದಿರೆ ಕೇಂದ್ರ ಮಸೀದಿಯ ಖತೀಬ್ ಅಬೂಬಕ್ಕರ್ ಸಿದ್ದೀಕ್ ದಾರಿಮಿ, ಶಿಹಾಬ್ ಕಾಶಿಪಟ್ಣ ಉಪಸ್ಥಿತರಿದ್ದರು.
Next Story





