Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿಆರ್‌ಝಡ್ ಉಲ್ಲಂಘನೆ ವಿರುದ್ಧ ಕ್ರಮ:...

ಸಿಆರ್‌ಝಡ್ ಉಲ್ಲಂಘನೆ ವಿರುದ್ಧ ಕ್ರಮ: ಸಚಿವ ಈಶ್ವರ ಖಂಡ್ರೆ

ಕಡಲಾಮೆ ಮೊಟ್ಟೆ ಪತ್ತೆ ಮಾಡಿದವರಿಗೆ ಬಹುಮಾನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ6 Feb 2024 8:15 PM IST
share
ಸಿಆರ್‌ಝಡ್ ಉಲ್ಲಂಘನೆ ವಿರುದ್ಧ ಕ್ರಮ: ಸಚಿವ ಈಶ್ವರ ಖಂಡ್ರೆ

ಮಂಗಳೂರು: ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ವರದಿ ಸಿದ್ಧಪಡಿಸುವಂತೆ ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯ ಕಚೇರಿಯಲ್ಲಿ ಮಂಗಳವಾರ ನಡೆದ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾತನಾಡಿದರು.

ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಅವುಗಳಲ್ಲಿ ನಿಯಮ ಉಲ್ಲಂಘಿಸಿರುವವರ ವಿರುದ್ಧ ಮತ್ತು ಮಂಗಳೂರು ಅರಣ್ಯ ವೃತ್ತದಲ್ಲಿ ಸೆಕ್ಷನ್ 17ರಡಿ ಆಗದ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.

ಒಂದೇ ಸರ್ವೆ ನಂಬರ್‌ನಲ್ಲಿ ಸಾವಿರಾರು ಎಕರೆ ಅರಣ್ಯ ಮತ್ತು ಕಂದಾಯ ಭೂಮಿ ಇರುವ ಪ್ರದೇಶಗಳಲ್ಲಿ ತ್ವರಿತವಾಗಿ ಜಂಟಿ ಸರ್ವೆ ನಡೆಸಬೇಕು. ಮಂಗಳೂರು ವೃತ್ತದಲ್ಲಿ ಕಡಲ್ಕೊರೆತ ತಡೆಯಲು ಕಾಂಡ್ಲಾ ವನ (ಮ್ಯಾಂಗ್ರೋ)ಬೆಳೆಸುವಂತೆ ಮತ್ತು ಕಡಲ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಶೇಖರಣೆಯಾಗದಂತೆ ಕ್ರಮ ವಹಿಸಲು ಸಚಿವರು ಸೂಚನೆ ನೀಡಿದರು.

ಕಡಲಾಮೆ ಮೊಟ್ಟೆ ಪತ್ತೆ ಹಚ್ಚಿದ ಮೀನುಗಾರರಿಗೆ ಬಹುಮಾನ

ತಣ್ಣೀರುಬಾವಿಯ ಕಡಲ ತೀರದಲ್ಲಿ ಅಪರೂಪದ ಆಲಿವ್ ರೆಡ್ಲಿ ಕಡಲಾಮೆ ಮೊಟ್ಟೆ ಇಟ್ಟಿರುವುದನ್ನು ಪತ್ತೆ ಮಾಡಿ ಸಂರ ಕ್ಷಣೆಗೆ ನೆರವಾದ ಸಸಿಹಿತ್ಲು ಗ್ರಾಮದ ಮೀನುಗಾರರಾದ ಆನಂದ ಕೋಟ್ಯಾನ್ ಮತ್ತು ವಾಸು ಕೋಟ್ಯಾನ್‌ಗೆ ಸಚಿವರು ೫ ಸಾವಿರ ರೂ. ಬಹುಮಾನ ಮತ್ತು ಪ್ರಶಂಸಾ ಪತ್ರ ಪ್ರದಾನ ಮಾಡಿದರು.

*ಬೈಕಂಪಾಡಿ ಕೈಗಾರಿಕಾ ಪ್ರದೇಶ ತ್ಯಾಜ್ಯ ನೀರು ಪರಿಶೀಲಿಸಿ

ಪರಿಸರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಬೈಕಂಪಾಡಿ ಕೈಗಾರಿಕಾ ಪ್ರದೇಶದಿಂದ ತ್ಯಾಜ್ಯ ಮತ್ತು ರಾಸಾಯನಿಕ ತ್ಯಾಜ್ಯ ಸಂಸ್ಕರಣೆ ಆಗದೆ ಫಲ್ಗುಣಿ ನದಿಯನ್ನು ಸೇರುತ್ತಿದೆ ಎಂಬ ಬಗ್ಗೆ ದೂರುಗಳಿವೆ. ಈ ಬಗ್ಗೆ ನಿಯಮಿತ ವಾಗಿ ನೀರಿನ ಗುಣಮಟ್ಟ ಪರೀಕ್ಷಿಸಬೇಕು. ನಿಯಮ ಪಾಲಿಸದ ಕೈಗಾರಿಕಾ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು.

ಮತ್ಸ್ಯ ಸಂಸ್ಕರಣಾ ಘಟಕಗಳಿಂದ ದುರ್ನಾತ ಬರುತ್ತಿದ್ದು, ಜನರು ತೀವ್ರ ಸಂಕಷ್ಟ ಅನುಭಸುವಂತಾಗಿದೆ ಎಂಬ ದೂರುಗಳನ್ನೂ ಗಂಭೀರವಾಗಿ ಪರಿಗಣಿಸಿದ ಸಚಿವರು ಈ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.

ಅರಣ್ಯ ಒತ್ತುವರಿಯೂ ಹೆಚ್ಚಾಗುತ್ತಿದೆ. ಕೆಲವರು ಶುಂಠಿ ಬೆಳೆಯುವ ಹೆಸರಲ್ಲಿ ೩ ಎಕರೆ ೫ ಎಕರೆ ಭೂಮಿ ಗುತ್ತಿಗೆ ಪಡೆದು ಅಥವಾ ಖರೀದಿಸಿ ಸುತ್ತಮುತ್ತಲಿನ ಅರಣ್ಯ ನಾಶ ಮಾಡುತ್ತಿದ್ದಾರೆ ಎಂಬ ದೂರಿದೆ.ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಾಲಕಾಲಕ್ಕೆ ಸ್ಯಾಟಲೈಟ್ ಚಿತ್ರಗಳ ಮೂಲಕ ಪರಿಶೀಲನೆ ನಡೆಸಿ, ಅರಣ್ಯನಾಶವಾಗಿದ್ದರೆ ನಿರ್ದಾಕ್ಷಿಣ್ಯ ಕ್ರಮ ವಹಿಸುವಂತೆ ಸೂಚಿಸಿದರು.

1978ರಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆು ಜಾರಿಗೆ ಬರುವ ಮೊದಲು 3 ಎಕರೆಗಿಂತ ಕಡಿಮೆ ಭೂಮಿಯಲ್ಲಿ ಉಳಿಮೆ ಮಾಡುತ್ತಿ ರುವ ಮತ್ತು ಸಣ್ಣ ಮನೆ ಕಟ್ಟಿಕೊಂಡು ವಾಸ ಮಾಡುತ್ತಿರುವ ಜನರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸದಂತೆ ಮತ್ತು ಹತ್ತಾರು ಎಕರೆ ಭೂಮಿಯನ್ನು ಸ್ವಾರ್ಥಕ್ಕಾಗಿ ಒತ್ತುವರಿ ಮಾಡಿರುವವರ ವಿರುದ್ಧ ಕಠಿಣಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X