ದ.ಕ.ಜಿಲ್ಲಾಧಿಕಾರಿಯಿಂದ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ

ಮಂಗಳೂರು: ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ವೀಕ್ಷಿಸಿ ಪರಿಶೀಲನೆ ಮಾಡಿದರು.
ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಅವರು ಕಾಮಗಾರಿಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಬಿ.ಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಪೆರಿಯಶಾಂತಿ, ಅಡ್ಡಹೊಳೆ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.
ಮುಂದಿನ ಮಳೆಗಾಲದ ಒಳಗೆ ಭಾಗಶಃ ಕಾಮಗಾರಿಗಳನ್ನು ಮುಗಿಸುವಂತೆ ಸೂಚಿಸಿದ ಅವರು ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಗಳನ್ನು ನಿರ್ವಹಿಸಲು ಸಲಹೆ ನೀಡಿದರು. ಸರ್ವಿಸ್ ರಸ್ತೆ, ಚರಂಡಿ ಮತ್ತಿತರ ಕಾಮಗಾರಿಗಳಿಗೂ ಆದ್ಯತೆ ನೀಡಲು ತಿಳಿಸಿದರು.
ಈ ಸಂದರ್ಭ ವಿವಿಧೆಡೆ ಸಾರ್ವಜನಿಕರು ಹೆದ್ದಾರಿ ಕಾಮಗಾರಿ ಕುರಿತು ಜಿಲ್ಲಾಧಿಕಾರಿಗೆ ಮನವಿ ಅಹವಾಲು ಸಲ್ಲಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ, ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.





