Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು...

ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ - ಶಾಸಕಿ ಭಾಗೀರಥಿ ಮುರುಳ್ಯ

ಕೊಲ್ಲಮೊಗ್ರದಲ್ಲಿ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Feb 2024 9:40 PM IST
share
ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ - ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ : ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದವರು ಒಂದೇ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಕುರಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ‌ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಂಟೀ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

"ಕೊಲ್ಲಮೊಗ್ರ, ಹರಿಹರ ಗ್ರಾಮಗಳು ಗಡಿಪ್ರದೇಶ. ಕಳೆದ ಬಾರಿ‌ ನೆರೆ ಬಂದು ಇಲ್ಲಿನ ಜನರು ತುಂಬಾ ತೊಂದರೆಗೊಳ ಗಾಗಿದ್ದಾರೆ. ಇಲ್ಲಿರುವ ಈ ನೈಜ್ಯ ಸಮಸ್ಯೆಗಳನ್ನು ಅಧಿಕಾರಿಗಳು ಅರಿತು ಪರಿಹಾರ ಒದಗಿಸಬೇಕು. ಜನಸ್ನೇಹಿ ಕೆಲಸ ಗಳು ಆಗಬೇಕು ಎಂದು ಅವರು ಹೇಳಿದರು.

ದ.ಕ. ಜಿಲ್ಲಾಧಿಕಾರಿ ‌ಮುಲ್ಲೈ ಮುಗಿಲನ್ ಮಾತನಾಡಿ, ಕೊಲ್ಲಮೊಗ್ರಕ್ಕೆ ನಾನು ಬೆಳಗ್ಗೆ ಬರುವಾಗಲೇ ಇಲ್ಲಿಯ ರಸ್ತೆಯ ತಿರುವು ನೋಡಿಕೊಂಡೇ ಈ‌ ಭಾಗದ ಕಷ್ಟಗಳ ಅರಿವಾಗಿದೆ. ಇಲ್ಲಿ ಬಂದಿರುವ ಅರ್ಜಿಗಳಲ್ಲಿ ಶೇ.70 ರಷ್ಟು ಅರ್ಜಿಗಳು ಜಾಗದ ವಿಷಯಕ್ಕೆ ಸಂಬಂಧಿಸಿದ್ದು ಇದೆ. ಭಾಗಶಃ ಅರಣ್ಯ ಪ್ರದೇಶ ಹೆಚ್ಚಿರುವುದರಿಂದ ಇದನ್ನು ಆದ್ಯತೆಯಲ್ಲಿ ತೆಗೆದು ಕೊಂಡು ಗಡಿಗುರುತು ಮಾಡಲಾಗುವುದು. ಈ ಕೆಲಸಕ್ಕೆ 4- 5 ತಿಂಗಳು ಅವಧಿ‌ ಬೇಕಾಗಬಹುದು. ಬಳಿಕ ಇಲ್ಲೆ ಬಂದು ತಮಗೆ ತಿಳಿಸುತ್ತೇವೆ ಎಂದು‌ ಜಿಲ್ಲಾಧಿಕಾರಿಗಳು ಹೇಳಿದರು.

ಕೋವಿ ಲೈಸೆನ್ಸ್ ವರ್ಗಾವಣೆ ಹಿಂದೆ ಇತ್ತು. ಈಗ ಅದಕ್ಕೆ ಅವಕಾಶ ಇಲ್ಲ. ಆದರೆ ಮನೆಯ ಹಿರಿಯರು ತನ್ನ ಹೆಸರಿನ ಲೈಸೆನ್ಸ್ ನ್ನು ನಮಗೆ ಶರಣು ಮಾಡಬೇಕು. ಬಳಿಕ ಅವರ ಮಗನಿಗೆ ಹೊಸ ಲೈಸೆನ್ಸ್ ನೀಡಲು ಅವಕಾಶ ಇದೆ ಎಂದು ಡಿ.ಸಿ.ಯವರು ಹೇಳಿದರು.

ಅಡಿಕೆ ಎಲೆ ಹಳದಿ ರೋಗಕ್ಕೆ ಪರಿಹಾರ ಇಲ್ಲ.‌ಅದರಿಂದ ಹೊರಗೇ ಬರಬೇಕು. ಪರ್ಯಾಯ ಬೆಳೆ ಬೆಳೆಯಲು ಆದ್ಯತೆ ನೀಡಬೇಕು. ಇದಕ್ಕೆ ಇಲಾಖೆಗಳಿಂದ ಸಹಕಾರ ಪಡೆಯಲು ಅವಕಾಶ ಇದೆ. ಕೃಷಿಕರು ಪ್ರಯೋಜನ ಪಡೆಯಿರಿ ಎಂದು‌ ಜಿಲ್ಲಾಧಿಕಾರಿಗಳು ಹೇಳಿದರು.

ಕಡಮಕಲ್ಲು - ಮಡಿಕೇರಿ ರಸ್ತೆ, ಗ್ರಾಮ ಲೆಕ್ಕಾಧಿಕಾರಿ, ಗ್ರಾಮಕ್ಕೆ ಬಸ್ ಇತ್ಯಾಡಿ ಬೇಡಿಕೆಗಳಿಗೂ ಅವರು ಪರಿಹಾರದ ಭರವಸೆ ನೀಡಿದರು.

ಪೋಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ಸಿ.ಬಿ., ಪುತ್ತೂರು ಸಹಾಯಕ ಉಪವಿಭಾಗ ಅಧಿಕಾರಿ ಜುಬಿನ್ ಮಹಾಪಾತ್ರ, ಡಿ.ಎಫ್. ಒ. ಆಂಥೋನಿ ಮರಿಯಪ್ಪ, ಸುಳ್ಯ ತಾ.ಪಂ. ಇ.ಒ. ರಾಜಣ್ಣ, ತಹಸೀಲ್ದಾರ್ ಮಂಜುನಾಥ್ ಜಿ, ಹರಿಹರ - ಕೊಲ್ಲ ಮೊಗ್ರ ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್. ಹರ್ಷ ಕುಮಾರ್, ಹರಿಹರ ಗ್ರಾ.ಪಂ. ಅಧ್ಯಕ್ಷ ವಿಜಯ ಅಂಗಣ, ಕೊಲ್ಲಮೊಗ್ರ ಗ್ರಾ.ಪಂ. ಅಧ್ಯಕ್ಷೆ ಜಯಶ್ರೀ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಮಹಾರಾಷ್ಟ್ರ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ರಾಜೇಶ್, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವೇದಿಕೆಯಲ್ಲಿ ಇದ್ದರು.

ಬಂಗ್ಲೆಗುಡ್ಡೆ ಶಾಲಾ‌ವಿದ್ಯಾರ್ಥಿಗಳು ಪ್ರಾರ್ಥಿಸಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.

ಪತ್ರಕರ್ತರಾದ ಬಾಲಕೃಷ್ಣ ಭೀಮಗುಳಿ ಹಾಗೂ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X