ಉಪ್ಪಿನಂಗಡಿ: ಡಾಮರು ಸಾಗಾಟದ ಲಾರಿಯಲ್ಲಿ ಆಕಸ್ಮಿಕ ಬೆಂಕಿ

ಉಪ್ಪಿನಂಗಡಿ: ಚಲಿಸುತ್ತಿದ್ದ ಡಾಮರು ಸಾಗಾಟದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಲಾರಿ ಭಾಗಶಃ ಸುಟ್ಟು ಹೋದ ಘಟನೆ ಫೆ.13ರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಡಾಮರು ಸಾಗಾಟದ ಲಾರಿಯಲ್ಲಿ ಉದನೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವು ಸಿಗುತ್ತಿದಂತೆ ಚಾಲಕ ಲಾರಿ ನಿಲ್ಲಿಸಿ ಕೆಳಗಿಳಿಯುತ್ತಿದಂತೆ ಲಾರಿಗೆ ಬೆಂಕಿ ಹತ್ತಿ ಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ಕಾರ್ಮಿಕರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಲಾರಿ ಭಾಗಶಃ ಸುಟ್ಟು ಹೋಗಿದ್ದು ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
Next Story





