ದ.ಕ. ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ವರ್ಗಾವಣೆ

ಖಾದರ್ ಶಾ
ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಸಂಬಂಧಿಸಿದಂತೆ 2024ರ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಜಿಲ್ಲಾ ವಾರ್ತಾಧಿಕಾರಿಗಳನ್ನು ವರ್ಗಾಯಿಸಿ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಆದೇಶ ಹೊರಡಿಸಿದ್ದಾರೆ.
ದ.ಕ.ಜಿಲ್ಲಾ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಎ.ಖಾದರ್ ಶಾ ಅವರನ್ನು ಹಾಸನಕ್ಕೂ, ಹಾಸನದ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮೀನಾಕ್ಷಮ್ಮ ಅವರನ್ನು ದ.ಕ.ಜಿಲ್ಲೆಗೂ ವರ್ಗಾಯಿಸಲಾಗಿದೆ.
ಚುನಾವಣೆಯ ಪ್ರಕ್ರಿಯೆ ಮುಗಿಯುವವರೆಗೆ ಈ ವರ್ಗಾವಣೆಯಾದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಸದ್ರಿ ಕಚೇರಿ ಯಿಂದ ಬಿಡುಗಡೆ ಹೊಂದಿ ಪ್ರಸ್ತುತ ನಿರ್ವಹಿಸುತ್ತಿರುವ ಕಚೇರಿಯಲ್ಲಿ ಮುಂದುವರಿಯಲು ಸೂಚಿಸಲಾಗಿದೆ.
Next Story





