ಮಂಗಳೂರು: ಡಿವೈಎಫ್‌ಐ ವತಿಯಿಂದ ಪ್ರಚಾರ ನಡಿಗೆ

ಮಂಗಳೂರು, ಫೆ.18: ಡಿವೈಎಫ್‌ಐ 12ನೇ ರಾಜ್ಯ ಸಮ್ಮೇಳನದ ಪ್ರಚಾರದ ಭಾಗವಾಗಿ ನಗರದ ಕದ್ರಿ ಉದ್ಯಾನವನದಲ್ಲಿ ರವಿವಾರ ಮುಂಜಾನೆಯ ನಡಿಗೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಕೋಶಾಧಿಕಾರಿ ಮನೋಜ್ ವಾಮಂಜೂರು, ಡಿವೈಎಫ್‌ಐ ಜಿಲ್ಲಾ ಮುಖಂಡರಾದ ಡಾ. ಜೀವನ್‌ರಾಜ್ ಕುತ್ತಾರ್, ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ತಯ್ಯೂಬ್ ಬೆಂಗರೆ, ವಕೀಲ ರಾಮಚಂದ್ರ ಬಬ್ಬುಕಟ್ಟೆ, ಚರಣ್ ಶೆಟ್ಟಿ ಪಂಜಿಮೊಗರು, ಮಾದುರಿ ಬೋಳಾರ, ಯೋಗಿತಾ, ಮುಹಾಝ್ ಬೆಂಗರೆ, ಪುನೀತ್ ಉರ್ವಸ್ಟೋರ್, ರಾಜೇಶ್ ಉರ್ವಸ್ಟೋರ್, ನಿತಿನ್ ಬಂಗೇರ, ಭರತ್ ಕುತ್ತಾರ್, ಸಂತೋಷ್ ಡಿಸೋಜ, ವಿದ್ಯಾರ್ಥಿ ಮುಖಂಡರಾದ ರೇವಂತ್ ಕದ್ರಿ, ರಿಹಾಬ್ ಪಾಲ್ಗೊಂಡಿದ್ದರು.
Next Story





