ಎಸ್ಸೆಸ್ಸೆಫ್ ಸಾಹಿತ್ಯೋತ್ಸವ : ಕರ್ನಾಟಕ ಚಾಂಪಿಯನ್

ಆಂಧ್ರಪ್ರದೇಶ: ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವ ಆಂಧ್ರಪ್ರದೇಶದ ಗುಂಟಕಲ್ ಈದ್ಗಾ ಮೈದಾನದಲ್ಲಿ ನಡೆಯಿತು.
25 ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಿದ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಕರ್ನಾಟಕದ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು. ಕೇರಳ ದ್ವಿತೀಯ ಹಾಗೂ ಜಮ್ಮು ಕಾಶ್ಮೀರ ತೃತೀಯ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.
ಕೇಂದ್ರ ಸಾಹಿತ್ಯ ಪ್ರಶಸ್ತಿ ವಿಜೇತ ಡಾ ಕುಮ್ ವೀರಭದ್ರಪ್ಪ ಉದ್ಘಾಟಿಸಿದರು. ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷ ನೌಶಾದ್ ಆಲಂ ಮಿಸ್ಬಾಹಿ ಒಡಿಸ್ಸಾ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯಾಧ್ಯಕ್ಷ ಡಾ ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್, ಡಾ ಫಾರೂಖ್ ನಈಮಿ ಕೊಲ್ಲಂ ಚಾಂಪಿಯನ್ ಟ್ರೋಫಿ ಹಸ್ತಾಂತರಿಸಿದರು. ಶಾಸಕ ವೆಂಕಟರಾಮನ್ ರೆಡ್ಡಿ ಉಪಸ್ಥಿತರಿದ್ದರು.
Next Story







