Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಲೆ, ಕಾಲೇಜು ಬಳಿಯ ಅಂಗಡಿಗಳಲ್ಲಿ...

ಶಾಲೆ, ಕಾಲೇಜು ಬಳಿಯ ಅಂಗಡಿಗಳಲ್ಲಿ ತಂಬಾಕು ಮಾರಾಟದ ವಿರುದ್ಧ ಕ್ರಮಕ್ಕೆ ಎಸಿ ಹರ್ಷವರ್ಧನ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 Feb 2024 10:14 PM IST
share
ಶಾಲೆ, ಕಾಲೇಜು ಬಳಿಯ ಅಂಗಡಿಗಳಲ್ಲಿ ತಂಬಾಕು ಮಾರಾಟದ ವಿರುದ್ಧ ಕ್ರಮಕ್ಕೆ ಎಸಿ ಹರ್ಷವರ್ಧನ್ ಸೂಚನೆ

ಮಂಗಳೂರು: ಶಾಲಾ ಕಾಲೇಜುಗಳ ಆವರಣದ 100 ಮೀಟರ್ ಅಂತರದಲ್ಲಿರುವ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆ ಗಳಲ್ಲಿ ತಂಬಾಕುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುವಂತೆ ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದ್ದಾರೆ.

ನಗರದ ಮಿನಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಾಲಾ ಕಾಲೇಜುಗಳ ಆವರಣದಿಂದ 100 ಮೀಟರ್ ಅಂತರದಲ್ಲಿ ತಂಬಾಕು ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ಕ್ರಮವನ್ನು ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ತಂಡವನ್ನು ರಚಿಸಿ ಪ್ರತೀ 15 ದಿನಗಳಿಗೊಮ್ಮೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಎಲ್ಲಾ ಶಾಲಾ ಕಾಲೇಜು ಹಾಗೂ ಸರಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಫಲಕವನ್ನು ಅಳವಡಿಸಬೇಕು, ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ಮಾಡುತ್ತಿರುವವರ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಸಿ ಸೂಚಿಸಿದರು.

ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಪ್ರಾಣಿಗಳ ಮಲದಿಂದ ಮನುಷ್ಯರಿಗೆ ಹರಡುತ್ತಿರುವ ಇಲಿ ಜ್ವರದ ಬಗ್ಗೆ ಮಾತನಾ ಡಿದ ಅವರು, ಜನರಲ್ಲಿ ಇಲಿ ಜ್ವರದ ಬಗ್ಗೆ ಜಾಗೃತಿಯನ್ನು ಮೂಡಿಸಬೇಕು. ಇಲಿ ಜ್ವರವು ಬಾರದಂತೆ ತಡೆಗಟ್ಟಲು ಸ್ವಚ್ಛತೆಗೆ ಮೊದಲ ಆದ್ಯತೆಯನ್ನು ನೀಡಬೇಕು, ಚರಂಡಿ, ತ್ಯಾಜ್ಯದ ರಾಶಿಗಳನ್ನು ಶುಚಿಗೊಳಿಸುವಂತೆ ಆದೇಶಿಸಿದರು.

ನಗರದ ಕೆಲವು ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್‌ಗಳಲ್ಲಿ ಅಶುದ್ಧ ನೀರಿನ ಸೇವನೆಯಿಂದಾಗಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣಗಳು ನಡೆದಿದೆ. ಹಾಸ್ಟೆಲ್ ಪಿಜಿಗಳಲ್ಲಿ ನೀರಿನ ಟ್ಯಾಂಕರ್‌ಗಳನ್ನು ಸ್ವಚ್ಛಗೊಳಿಸುವಂತೆ ಆದೇಶಿಸಬೇಕು. ಟ್ಯಾಂಕರ್‌ ಗಳಿಂದ ಸರಬರಾಜಾಗುವ ನೀರು ಯಾವ ಭಾಗದಿಂದ ತರಲಾಗುತ್ತಿದೆ ಮತ್ತು ಅದು ಸ್ವಚ್ಛವಾಗಿದೆಯೇ? ಬಳಕೆಗೆ ಯೋಗ್ಯವಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿಗಳು ಪರೀಕ್ಷಿಸಬೇಕು ಎಂದು ಉಪವಿಭಾಗಾಧಿಕಾರಿ ಹರ್ಷವರ್ಧನ್ ಸೂಚಿಸಿದರು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು ಹುಟ್ಟಿನಿಂದ ಮಕ್ಕಳಲ್ಲಿ ಉಂಟಾಗುವ ಆರಂಭಿಕ ನ್ಯೂನ್ಯತೆಗಳು, ದೋಷಗಳು, ರೋಗಗಳ ಬಗ್ಗೆ, ಪೌಷ್ಟಿಕ ಆಹಾರದ ಕೊರತೆಯ ಬಗ್ಗೆ ಹೆಚ್ಚಾಗಿ ಬಡತನದಲ್ಲಿರುವ ಮಕ್ಕಳಲ್ಲಿ ತಪಾಸಣೆಯನ್ನು ನಡೆಸಿ ಅವರಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸಬೇಕು ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಕುಮಾರ್ ಮಾತನಾಡಿ 18 ವರ್ಷ ಪ್ರಾಯ ಮೇಲ್ಪಟ್ಟರಿಗೆ 2025ರೊಳಗೆ ಬಿಸಿಜಿ ಲಸಿಕೆಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಸರಕಾರ ಹೊಸ ಪ್ರಸ್ತಾಪ ಮುಂದಿಟ್ಟಿವೆ. ಹೆಚ್ಚಾಗಿ ಈ ಲಸಿಕೆಯನ್ನು 60 ವರ್ಷ ಮೇಲ್ಪಟ್ಟವರು, ಮದ್ಯವ್ಯಸನಿಗಳು, ಟಿಬಿ ರೋಗಿಗಳ ಸಂಪರ್ಕದಲ್ಲಿರುವವರು, ಎಚ್‌ಐವಿ, ರೋಗಿ ಗಳು, ಮಧುಮೇಹದಿಂದ ಬಳಲುತ್ತಿರುವವರು, 4 ವರ್ಷಗಳ ಹಿಂದೆ ಟಿಬಿ ಕಾಯಿಲೆಯಿಂದ ಗುಣಮುಖರಾಗಿರುವವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಬಿಸಿಜಿ ಲಸಿಕೆಯನ್ನು ಪಡೆಯಬಹುದು ಎಂದರು.

ವರ್ಷದಲ್ಲಿ ಎರಡು ಸಲ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಂತುಹುಳ ಮಾತ್ರೆ ನೀಡಲಾಗುತ್ತಿದೆ. ರೋಗನಿರೋಧಕ ಶಕ್ತಿ ಕಡಿಮೆ ಇರುವ ಅಥವಾ ವಯಸ್ಕರು ಕೂಡ ಈ ಜಂತುಹುಳ ಮಾತ್ರೆಯನ್ನು ತೆಗೆದುಕೊಳ್ಳಬಹುದು ಎಂದು ಸೂಚಿಸಿದರು.

ಮಾ.3ರಂದು ಪೋಲಿಯೋ ದಿನ

ಮಾ.3ರಂದು ಪಲ್ಸ್ ಪೋಲಿಯೋ ದಿನ ಆಚರಿಸಲಾಗುತ್ತಿದೆ. ನಗರ ಪ್ರದೇಶದಲ್ಲಿ ಪೋಲಿಯೋ ಲಸಿಕೆಯನ್ನು ತೆಗೆದು ಕೊಳ್ಳದೆ ಇರುವವರ ಬಗ್ಗೆ ಸಮೀಕ್ಷೆ ನಡೆಸಿ ಎಲ್ಲರಿಗೂ ಲಸಿಕೆ ನೀಡುವಂತಾಗಬೇಕು. ಎಲ್ಲಾ ಇಲಾಖೆಯವರು ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಕೈಜೋಡಿಸಬೇಕು ಎಂದರು.

ಸಭೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರದೀಪ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X