ಪುತ್ತೂರು: ಟಿಪ್ಪರ್ - ಸ್ಕೂಟರ್ ಢಿಕ್ಕಿ; ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ

ಪುತ್ತೂರು: ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ, ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಗಂಭೀರ ಗಾಯ ಗೊಂಡು, ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಕಬಕ ಗ್ರಾಮದ ಮುರ ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಗೋಳಿತೊಟ್ಟು ನಿವಾಸಿ ತೇಜಸ್ (24) ಎಂದು ಗುರುತಿಸಲಾಗಿದೆ. ಪವನ್ ಎಂಬವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುತ್ತೂರಿನಿಂದ ಕಬಕ ಕಡೆಗೆ ಸಾಗುತ್ತಿದ್ದ ಸ್ಕೂಟರ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು.
ಪುತ್ತೂರು ಸಂಚಾರಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story





