ಪುತ್ತೂರು: ರಸ್ತೆ ಅಪಘಾತ; ಗಾಯಾಳು ಯುವಕ ಮೃತ್ಯು

ಸಫ್ವಾನ್
ಪುತ್ತೂರು: ತಾಲೂಕಿನ ಕಲ್ಲರ್ಪೆ ಎಂಬಲ್ಲಿ ಬುಧವಾರ ರಾತ್ರಿ ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ, ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಮುಕ್ವೆ ನಿವಾಸಿ ಅಬ್ದುಲ್ಲಾ ಎಂಬವರ ಪುತ್ರ ಸಫ್ವಾನ್(23) ಮೃತಪಟ್ಟ ಯುವಕ.
ಸಫ್ವಾನ್ ಪ್ರಯಾಣಿಸುತ್ತಿದ್ದ ಬೈಕ್ ಮತ್ತು ಟಿಪ್ಪರ್ ಮಧ್ಯೆ ಢಿಕ್ಕಿಯಾಗಿತ್ತು. ಈ ಸಂದರ್ಭ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯ ಗೊಂಡಿದ್ದ ಸಫ್ವಾನ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





