Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಲು...

ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಲು ಯುವಕನಿಂದ ಸೈಕಲ್‌ನ ಒಂದು ಚಕ್ರದಲ್ಲಿ ಕನ್ಯಾಕುಮಾರಿ-ಕಾಶ್ಮೀರ ಯಾತ್ರೆ

ವಾರ್ತಾಭಾರತಿವಾರ್ತಾಭಾರತಿ25 Feb 2024 8:56 PM IST
share
ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸಲು ಯುವಕನಿಂದ  ಸೈಕಲ್‌ನ ಒಂದು ಚಕ್ರದಲ್ಲಿ ಕನ್ಯಾಕುಮಾರಿ-ಕಾಶ್ಮೀರ ಯಾತ್ರೆ

ಮಂಗಳೂರು: ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸೈಕಲ್‌ನ ಒಂದು ಚಕ್ರದಲ್ಲಿ ಕನ್ಯಾ ಕುಮಾರಿಯಿಂದ ಕಾಶ್ಮೀರ ತನಕ ತನ್ನ ಇಬ್ಬರು ಸ್ನೇಹಿತರೊಂದಿಗೆ ಯಾತ್ರೆ ಕೈಗೊಂಡಿರುವ ಕಣ್ಣೂರಿನ ಸವಿತ್ ಮಂಗಳೂರಿನಿಂದ ಸೋಮವಾರ ಯಾತ್ರೆ ಮುಂದುವರಿಸಲಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಡಗ್ಸ್ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಸೇ ನೋ ಡ್ರಗ್ಸ್’ ಎಂಬ ಭಿತ್ತಿಪತ್ರವನ್ನು ಹಿಡಿದು ಸ್ನೇಹಿತರಾದ ಕಣ್ಣೂರಿನ ತಾಹೀರ್ ಮತ್ತು ಪಾಲಕ್ಕಾಡ್‌ನ ಅಭಿಷೇಕ್ ಅವರೊಂದಿಗೆ ಈ ಅಭಿಯಾನವನ್ನು ಆರಂಭಿಸಿದ್ದರು.

ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ಗಳಾಗಿರುವ ಈ ಯುವಕರು ಮಂಗಳೂರಿಗೆ ವಾರದ ಹಿಂದೆ ತಲುಪಿದ್ದರು. ಸವಿತ್ ತಂಡದ ಒಬ್ಬರು ಮುಂದೆ ಸೈಕಲ್‌ನಲ್ಲಿ ಸಾಗುತ್ತಾರೆ. ಅವರನ್ನು ಅನುಸರಿಸಿ ಸವಿತ್ ಮುಂದೆ ಸಾಗುತ್ತಾರೆ. ಇನ್ನೊಬ್ಬರು ಸವಿತ್‌ರನ್ನು ಹಿಂಬಾಲಿಸುತ್ತಾರೆ.

ಸವಿತ್ ಒಂದೇ ಚಕ್ರದ ಸೈಕಲ್‌ನಲ್ಲಿ ಸಂಚರಿಸಲು ವರ್ಷದ ತನಕ ನಿರಂತರ ಅಭ್ಯಾಸ ನಡೆಸಿದ್ದರು. ಅವರ ಪ್ರಯತ್ನ ಇದೀಗ ಯಶಸ್ವಿಯಾಗಿದೆ. ಕೇರಳದ ಬೇರೆ ಜಿಲ್ಲೆಗಳಿಗೆ ತೆರಳಿ ಡ್ರಗ್ಸ್ ವಿರುದ್ಧ ಈ ಮೂವರ ತಂಡ ಮಾದಕ ವಸ್ತು ಸೇವೆನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಸವಿತ್ ಪಾಲಿಗೆ ಇದೊಂದು ಕನಸಾಗಿದೆ. ‘‘ಒಂದೇ ಚಕ್ರದ ಸೈಕಲ್‌ನಲ್ಲಿ ಯಾರೂ ಕೂಡಾ ಈ ತನಕ ಯಾತ್ರೆಯನ್ನು ಕೈಗೊಂಡಿಲ್ಲ. ಮೊದಲ ಈ ಪ್ರಯತ್ನದಲ್ಲಿ ನಾನು ಯಶಸ್ವಿಯಾಗುತ್ತೇನೆ ಎಂದು ಭಾವಿಸುವುದಿಲ್ಲ. ಆದರೆ ಈ ಪ್ರಯತ್ನದಲ್ಲಿ ಯಶಸ್ವಿಯಾಗಿ ಕಾಶ್ಮೀರ ತಲುಪಿದರೆ ಅದು ಬದುಕಿನಲ್ಲಿ ನಾನು ಮಾಡುವ ದೊಡ್ಡ ಸಾಧನೆ ಯಾಗುತ್ತದೆ. ಬಹುಕಾಲದ ಕನಸು ಈಡೇರಿದಂತಾಗುತ್ತದೆ. ’’ಎಂದು ಸವಿತ್ ಹೇಳಿದ್ದಾರೆ.

ಇವತ್ತಿನ ಸಮಾಜದಲ್ಲಿ ಯುವ ಜನರು ಡ್ರಗ್ಸ್‌ಗೆ ಬಲಿಯಾಗುತ್ತಿರುವುದು ಜಾಸ್ತಿಯಾಗಿದೆ.ಡ್ರಗ್ಸ್ ಸೇವಿಸಿ ಕೊಲೆ ಮಾಡಿರುವ ಪ್ರಕರಣಗಳನ್ನು ದಿನನಿತ್ಯ ಪತ್ರಿಕೆಗಳಲ್ಲಿ ಕಂಡು ಬರುತ್ತದೆ. ಇದರ ನಿಯಂತ್ರಣ ನಮಗಿಂದು ಸವಾಲಾಗಿ ಪರಿಣಮಿಸಿದೆ. ಈ ಕಾರಣದಿಂದಾಗಿ ಕಳೆದ ಡಿಸೆಂಬರ್‌ನಲ್ಲಿ ನಮ್ಮ ಯಾತ್ರೆ ಆರಂಭಗೊಂಡಿತ್ತು ಎಂದು ಅವರು ಹೇಳಿದ್ದಾರೆ.

ಡ್ರಗ್ಸ್ ಚಟವನ್ನು ಅಂಟಿಸಿಕೊಂಡವರು ನಮ್ಮ ಪ್ರಯತ್ನದಿಂದಾಗಿ ಮುಕ್ತರಾದರೆ ಅದೇ ನಮಗೆ ಸಿಗುವ ದೊಡ್ಡ ಪ್ರತಿಫಲವಾಗಿದೆ ಎಂದು ಅವರು ಹೇಳಿದ್ದಾರೆ.

ಅರಂಭದಲ್ಲಿ ಕಾಸರಗೋಡಿನಿಂದ ಕನ್ಯಾಕುಮಾರಿ ತನಕ ಯಾತ್ರೆ ಕೈಗೊಳ್ಳಲಾಗಿದೆ. ಬಳಿಕ ಅಲ್ಲಿಂದ ಮತ್ತೆ ಯಾತ್ರೆ ಆರಂಭಿಸಿ 2,400 ಕಿ.ಮೀ ಸಾಗಿ ಬರಲಾಗಿದೆ. ಇನ್ನೂ 4,500 ಕಿ.ಮೀ ದೂರದ ಹಾದಿಯನ್ನು ಸಾಗಬೇಕಾಗಿದೆ. ಮೊದಲ ದಿನ 15 ಕಿಮೀ ತನಕ ಯಾತ್ರೆ ಕೈಗೊಂಡಿದ್ದೆವು. ಈಗ ಪ್ರತಿನಿತ್ಯ 40-60 ಕಿಮೀ ತನಕ ಸೈಕಲ್‌ನಲ್ಲಿ ಸಂಚರಿಸುತ್ತೇವೆ. ಈ ತನಕ ಕೇರಳ ಮತ್ತು ತಮಿಳುನಾಡು ಸಾಗಿ ಬಂದಿದ್ದೇವೆ. ಈ ತನಕ ಸಾಗಿ ಬಂದಿರುವ ಹಾದಿಯಲ್ಲಿ ಮಂಗಳೂರಿನಲ್ಲಿ ಸಿಕ್ಕಿದಷ್ಟು ಬೆಂಬಲ ಎಲ್ಲೂ ಸಿಕ್ಕಿಲ್ಲ ಎಂದು ಸವಿತ್ ಹೇಳಿದ್ದಾರೆ.

ಮುಂದಿನ ನಾಲ್ಕು ತಿಂಗಳಲ್ಲಿ ಗುರಿ ತಲುಪುವ ಯೋಜನೆ ಹಾಕಿಕೊಳ್ಳಲಾಗಿದೆ. ಯಾತ್ರೆ ಆರಂಭಿಸುವಾಗ ಕೈಯಲ್ಲಿ ಕೇವಲ 2 ಸಾವಿರ ರೂ. ಇತ್ತು. ಬೇರೆ ಬೇರೆ ಸಂಸ್ಥೆಗಳು ನಮಗೆ ಪ್ರೋತ್ಸಾಹ ನೀಡಿದ್ದಾರೆ ಎಂದು ಸವಿತ್ ತಿಳಿಸಿದ್ದಾರೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X