Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ರಾಜ್ಯ ಮನಪಾ ನಿವೃತ್ತ ನೌಕರರ...

ಕರ್ನಾಟಕ ರಾಜ್ಯ ಮನಪಾ ನಿವೃತ್ತ ನೌಕರರ ಸಂಘಗಳ ಒಕ್ಕೂಟದ ಸಭೆ

ವಾರ್ತಾಭಾರತಿವಾರ್ತಾಭಾರತಿ26 Feb 2024 8:52 PM IST
share
ಕರ್ನಾಟಕ ರಾಜ್ಯ ಮನಪಾ ನಿವೃತ್ತ ನೌಕರರ ಸಂಘಗಳ ಒಕ್ಕೂಟದ ಸಭೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನಿವೃತ್ತ ನೌಕರರ ಸಂಘಗಳ ಒಕ್ಕೂಟದ ಸಭೆಯು ರಾಜ್ಯಾಧ್ಯಕ್ಷ ವೀರಭದ್ರ ಸಿಂಪಿ ಅವರ ಅಧ್ಯಕ್ಷತೆ ಯಲ್ಲಿ ನಗರದ ಖಾಸಗೀ ಸಭಾಂಗಣದಲ್ಲಿ ರವಿವಾರ ಜರಗಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯಾಧ್ಯಕ್ಷ ವೀರಭದ್ರ ಸಿಂಪಿ ರಾಜ್ಯ ಸರಕಾರಿ ನೌಕರರರಲ್ಲಿ ಇಲಾಖಾವಾರು ಭೇದಭಾವ ಸರಿಯಲ್ಲ. ಮಹಾನಗರ ಪಾಲಿಕೆಯ ನೌಕರರೂ ಕೂಡ ಸರಕಾರಿ ನೌಕರರಾಗಿದ್ದಾರೆ. ನಗರದ ಸ್ವಚ್ಚತೆ, ಆರೋಗ್ಯ ರಕ್ಷಣೆಯ ಜತೆಗೆ ಜನರ ಜತೆ ದೈನಂದಿನ ಚಟುವಟಿಕೆಯಲ್ಲಿ ಸದಾ ಬೆರೆತು ಕೆಲಸ ಮಾಡುತ್ತಾರೆ. ಇಂತಹ ಪ್ರಮುಖ ನೌಕರರ ಬೇಡಿಕೆಯನ್ನು ಕಡೆಗಣಿಸದೆ ಸರಕಾರ ಈಡೇರಿಸಬೇಕು ಎಂದರು.

ಕೆಸಿಎಸ್‌ಆರ್ ನಿಯಮದನ್ವಯ ಪಿಂಚಣಿಯ ಎಲ್ಲಾ ಸವಲತ್ತುಗಳನ್ನು ರಾಜ್ಯದ ಮನಪಾ ನಿವೃತ್ತ ನೌಕರರಿಗೆ 7-8 ವರ್ಷವಾದರೂ ನೀಡದಿರುವುದನ್ನು ಖಂಡಿಸಿ ಸರಕಾರಿ ನಿವೃತ್ತ ನೌಕರರಿಗೆ ನೀಡಿದಂತೆ ನಮಗೂ ನೀಡಿ ತಾರತಮ್ಯ ತಪ್ಪಿಸಬೇಕು ಎಂದು ಸಭೆಯಲ್ಲಿ ನಿರ್ಣಯಿಸಿ ಸರಕಾರದ ಗಮನಕ್ಕೆ ತರಲು ನಿರ್ಧರಿಸಲಾಯಿತು.

ಸಭೆಯಲ್ಲಿ ರಾಜ್ಯ ಸಂಘದ ನೋಂದಣಿ ನಿಯಮಗಳ ಕರಡು ಪ್ರತಿಯ ಉಪಸಮಿತಿ ತೀರ್ಮಾನಿಸಿದ ನಡಾವಳಿ ಮಂಡಿಸ ಲಾಯಿತು. ರಾಜ್ಯಮಹಾನಗರ ಪಾಲಿಕೆಯ ನಿವೃತ್ತ ನೌಕರರ ರಾಜ್ಯಮಟ್ಟದ ಪ್ರಥಮ ಸಮ್ಮೇಳನ ನಡೆಸಲು ತೀರ್ಮಾನಿ ಸಲಾಯಿತು. ಬೆಂಗಳೂರಿನಲ್ಲಿ ರಾಜ್ಯ ಸಂಘದ ಕಚೇರಿ ಸ್ಥಾಪಿಸಲು, ಮಂಗಳೂರು ಪಾಲಿಕೆ ನಿವೃತ್ತ ನೌಕರರ ಸಂಘದ ಮತ್ತು ಸದಸ್ಯರ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಿ, ಪರಿಹಾರಕ್ಕೆ ಯೋಜನೆ ರೂಪಿಸಲಾಯಿತು.

ನಿವೃತ್ತ ನೌಕರರ ಬೇಡಿಕೆಯನ್ನು ಸರಕಾರದ ಮಟ್ಟದಲ್ಲಿಟ್ಟು ನೆರವೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ವೀರಭದ್ರ ಸಿಂಪಿ ಅವರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು. ಶೇ.17ರ ಪರಿಹಾರ ನಿಧಿ ವಿಳಂಭವಾಗಿರುವುದನ್ನು ಪರಿಹರಿಸಿ ಕೊಡುವಲ್ಲಿ ಸಹಕರಿಸಿದ ಸಚಿವರಾದ ಬಿ.ಸುರೇಶ, ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ ಮತ್ತು ಪೌರಾಡಳಿತ ಇಲಾಖೆ ಆಯುಕ್ತರು, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅವರನ್ನು ಅಭಿನಂದಿಸಲಾಯಿತು.

ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಿವೃತ್ತ ನೌಕರರ ಸಂಘದ ಗೌರವಾಧ್ಯಕ್ಷ ಜಗನ್ನಾಥ ಶೆಟ್ಟಿ, ಅಧ್ಯಕ್ಷ ಎ.ಪದ್ಮನಾಭ, ಪ್ರಧಾನ ಕಾರ್ಯದರ್ಶಿ ಚಿನ್ನಪ್ಪಮೂಲ್ಯ, ಜತೆ ಕಾರ್ಯದರ್ಶಿ ಶಿವಣ್ಣ ನಾಯಕ್, ಕೋಶಾಧಿಕಾರಿ ಟಿ.ರಘು ರಾಮ ಶೆಟ್ಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಕ್ರಂ ಅಹ್ಮದ್, ಖಜಾಂಚಿ ಶಿವಾಜಿ ಜಮಾದಾರ ಪಾಲ್ಗೊಂಡಿದ್ದರು.

ರಾಮು ಮಾಯಿಪ್ಪಾಡಿ ಪ್ರಾರ್ಥಿಸಿದರು. ಕಲ್ಯಾಣಪ್ಪಬಿರಾದಾರ ವಚನ ಗಾಯನ ಮಾಡಿದರು. ಮಂಗಳೂರು ಪಾಲಿಕೆ ಕಾರ್ಯದರ್ಶಿ ಶಿವಣ್ಣ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X