Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. "ವಿದೇಶದಲ್ಲಿ ದುಡಿಯುವ ಕರ್ನಾಟಕದ...

"ವಿದೇಶದಲ್ಲಿ ದುಡಿಯುವ ಕರ್ನಾಟಕದ ಉದ್ಯೋಗಿ, ವ್ಯಾಪಾರಿಗಳ ಕಲ್ಯಾಣ ಯೋಜನೆ ಜಾರಿಗೆ ಆಗ್ರಹ"

ಡಿವೈಎಫ್‌ಐ ಕರ್ನಾಟಕ ರಾಜ್ಯ 12ನೇ ಸಮ್ಮೇಳನದಲ್ಲಿ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ26 Feb 2024 9:17 PM IST
share
ವಿದೇಶದಲ್ಲಿ ದುಡಿಯುವ ಕರ್ನಾಟಕದ ಉದ್ಯೋಗಿ, ವ್ಯಾಪಾರಿಗಳ ಕಲ್ಯಾಣ ಯೋಜನೆ ಜಾರಿಗೆ ಆಗ್ರಹ

ಮಂಗಳೂರು: ಗಲ್ಫ್ ಸೇರಿದಂತೆ ವಿದೇಶದಲ್ಲಿ ದುಡಿಯುವ ಕರ್ನಾಟಕದ ಉದ್ಯೋಗಿ, ವ್ಯಾಪಾರಿಗಳಿಗೆ ಕಲ್ಯಾಣ ಯೋಜನೆ ಜಾರಿಗೆ ತರುವಂತೆ ಸರಕಾರವನ್ನು ಆಗ್ರಹಿಸಿ ಡಿವೈಎಫ್‌ಐ ಕರ್ನಾಟಕ ರಾಜ್ಯ 12ನೇ ಸಮ್ಮೇಳನದಲ್ಲಿ ನಿರ್ಣಯ ಕೈಗೊಂಡಿದೆ.

ಇಲ್ಲಿನ ತೊಕ್ಕೊಟ್ಟು ಯುನಿಟಿ ಸಭಾಂಗಣದಲ್ಲಿ ಡಿ.25ರಂದು ಆರಂಭಗೊಂಡಿದ್ದ ಮೂರು ದಿನಗಳ ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮ್ಮೇಳನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ವಿದೇಶಗಳಲ್ಲಿ ಅದರಲ್ಲೂ ಪ್ರಧಾನವಾಗಿ ಗಲ್ಫ್ ರಾಷ್ಟ್ರಗಳಲ್ಲಿ ಕರಾವಳಿ ಕರ್ನಾಟಕ ಸೇರಿದಂತೆ ಕರ್ನಾಟಕ ರಾಜ್ಯದ ಲಕ್ಷಾಂತರ ಜನರು ಉದ್ಯೋಗ, ವ್ಯಾಪಾರ, ಉದ್ದಿಮೆಗಳಲ್ಲಿ ತೊಡಗಿಕೊಂಡಿದ್ದಾರೆ. ತಾಯ್ನೆಲದಲ್ಲಿ ಉತ್ತಮ ಉದ್ಯೋಗಾವಕಾಶಗಳ‌ ಕೊರತೆ, ನಿರುದ್ಯೋಗದಿಂದ ಕಂಗೆಟ್ಟು ಉತ್ತಮ ವೇತನ, ಘನತೆಯ ಬದುಕಿನ ಕನಸು ಗಳೊಂದಿಗೆ ನಮ್ಮ ಯುವ ಜನರು ಗಲ್ಫ್ ರಾಷ್ಟ್ರಗಳಿಗೆ ತೆರಳುತ್ತಾರೆ. ಈ ರೀತಿ ತೆರಳಿದ ಬಹುತೇಕರು ಶ್ರಮವನ್ನು ಬೇಡುವ, ದೊಡ್ಡ ಮಟ್ಟಿಗಿನ ವೇತನ, ಭದ್ರತೆಯಿಲ್ಲದ ಉದ್ಯೋಗಗಳನ್ನೇ ಅವಲಂಭಿಸಿದ್ದಾರೆ.

ತಮ್ಮ ದುಡಿಮೆಯ ಬಹುತೇಕ ಭಾಗವನ್ನು ತಮ್ಮನ್ನು ಅವಲಂಭಿಸಿರುವ ಕುಟುಂಬಕ್ಕಾಗಿ ಪ್ರತಿ ತಿಂಗಳು ಕಳುಹಿಸಿ ಕೊಡುತ್ತಾರೆ. ಈ ರೀತಿ ದಶಕಗಳ ಕಾಲ ಗಲ್ಫ್ ರಾಷ್ಟ್ರಗಳಲ್ಲಿ ದುಡಿದು ತಮ್ಮ ಗಳಿಕೆಯನ್ನು ಪೂರ್ತಿಯಾಗಿ ತಮ್ಮ ಕುಟುಂಬದ ನಿರ್ವಹಣೆಗೆ ಕಳುಹಿಸುತ್ತಾರೆ. ತಮ್ಮ ಯೌವನ ಪೂರ್ತಿಯಾಗಿ ಹೀಗೆ ವಿದೇಶಿ ನೆಲದಲ್ಲಿ ಕಳೆಯುವ ಇವರಲ್ಲಿ ಬಹುತೇಕರು ತಮ್ಮ ದುಡಿಮೆಯ ಕಾಲಾವಧಿ ಮುಗಿಸಿ ತಾಯ್ನೆಲಕ್ಕೆ ಮರಳಿದಾಗ ಇವರಲ್ಲಿ ಬಹುತೇಕರಲ್ಲಿ ಉಳಿತಾಯ ಎಂಬುದು ಇರುವುದಿಲ್ಲ. ಗಲ್ಫ್ ರಾಷ್ಟ್ರಗಳಲ್ಲಿ ಕಾಲ ಕಾಲಕ್ಕೆ ಬದಲಾಗುವ ನಿಯಮಗಳಿಂದಲೂ ಹೆಚ್ಚಿನವರು ತಮ್ಮ ಉದ್ಯೋಗ ಕಳೆದುಕೊಂಡು ದಿಢೀರನೆ ಭಾರತಕ್ಕೆ ಹಿಂದಿರುಗುವ ಸ್ಥಿತಿಯೂ ಉದ್ಭವವಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ಅನಿವಾಸಿ ಭಾರತೀಯರ ಸ್ಥಿತಿ ದಾರುಣವಾಗಿರುತ್ತದೆ ಎಂದು ಡಿವೈಎಫ್‌ಐ ಕಳವಳ ವ್ಯಕ್ತಪಡಿಸಿದೆ.

ಇಂದು ಕರಾವಳಿ ಕರ್ನಾಟಕ, ಮಲೆನಾಡಿನ ಆರ್ಥಿಕತೆ ಗಲ್ಫ್ ಹಣವನ್ನು ಅವಲಂಭಿಸಿದೆ. ಅಲ್ಲಿ ಕಡಿಮೆ ವೇತನಕ್ಕೆ ದುಡಿಯುವ, ಸಣ್ಣಪುಟ್ಟ ವ್ಯಾಪಾರದಲ್ಲಿ ತೊಡಗಿರುವವರು ತಮ್ಮ ಕುಟುಂಬದ ನಿರ್ವಹಣೆಗೆ ಕಳುಹಿಸಿದ ಶ್ರಮದ ಗಳಿಕೆಯೇ ಆಗಿದೆ.ಈ ರೀತಿ ಇಲ್ಲಿನ ನಿರುದ್ಯೋಗದಿಂದ ಬೇಸತ್ತು ಅನಿವಾರ್ಯವಾಗಿ ವಿದೇಶಗಳಿಗೆ ತೆರಳಿ ದುಡಿದು ವಾಪಾಸಾಗುವ ಆರ್ಥಿಕವಾಗಿ ದುರ್ಬಲ ವಿಭಾಗಗಳಿಗೆ ನೆರವಾಗುವುದು ಸರಕಾರದ ಕರ್ತವ್ಯ. ಅವರು ಕಳುಹಿಸಿದ ವಿದೇಶಿ ಹಣ ಇಲ್ಲಿನ ಸರಕಾರದ ಖಜಾನೆಯನ್ನೂ ಬಲಗೊಳಿಸಿದೆ. ಮಾರುಕಟ್ಟೆ ಆರ್ಥಿಕತೆಗೆ ದೊಡ್ಡ ಶಕ್ತಿ ನೀಡಿದೆ. ಶಿಕ್ಷಣ, ಆರೋಗ್ಯ, ರಿಯಲ್ ಎಸ್ಟೇಟ್ ವ್ಯವಹಾರಗಳು ಬಹುತೇಕ ಅನಿವಾಸಿಗಳು ಕಳುಹಿಸುವ ಕರೆನ್ಸಿಯನ್ನೆ ಅವಲಂಬಿಸಿದೆ. ತಮ್ಮ ವಿಶ್ರಾಂತಿ ರಹಿತ ಶ್ರಮದ ದುಡಿಮೆಯಿಂದ ಮಲೆನಾಡು, ಕರಾವಳಿ ಕರ್ನಾಟಕ ಮಾತ್ರವಲ್ಲದೆ ರಾಜ್ಯದ ಆರ್ಥಿಕತೆಗೆ ದೊಡ್ಡ ಶಕ್ತಿ ನೀಡಿರುವ ಅನಿವಾಸಿ ದುಡಿಮೆಗಾರರು, ವ್ಯಾಪಾರಿಗಳಿಗೆ ನೆರವು, ಪ್ರೋತ್ಸಾಹ, ಪುನರ್ವಸತಿ ಒದಗಿಸುವುದು, ವಿಶೇಷ ಪ್ಯಾಕೇಜ್ ಘೋಷಿಸುವುದು ಸರಕಾರದ ಕರ್ತವ್ಯವಾಗಿದೆ.

ಅನಿವಾಸಿ ಭಾರತೀಯರು ಹಲವು ವರ್ಷಗಳಿಂದ ಸರಕಾರದ ಮುಂದೆ ಹಕ್ಕೊತ್ತಾಯ ಸಲ್ಲಿಸುತ್ತಾ ಬಂದಿದ್ದಾರೆ. ಇತ್ತೀಚೆಗಷ್ಟೆ ದೊಡ್ಡ ನಿಯೋಗ ಬಂದು ಮುಖ್ಯಮಂತ್ರಿಗಳ ಸಹಿತ ವಿರೋಧ ಪಕ್ಷಗಳ ನಾಯಕರನ್ನೂ ಭೇಟಿಯಾಗಿ ಮನವಿ ಸಲ್ಲಿಸಿರುತ್ತಾರೆ. ಕರ್ನಾಟಕ ರಾಜ್ಯ ಸರಕಾರ ತಕ್ಷಣವೇ ಅನಿವಾಸಿ ಭಾರತೀಯ ದುಡಿಮೆಗಾರರ, ವ್ಯಾಪಾರಿಗಳ ಬೇಡಿಕೆಯನ್ನು ಈಡೇರಿಸಬೇಕು, ಕೇರಳ ಸರಕಾರ ಈಗಾಗಲೆ ಅನಿವಾಸಿಗಳಿಗಾಗಿ ವಿಶೇಷ ಯೋಜನೆ, ಪುನರ್ವಸತಿ ಪ್ಯಾಕೇಜ್‌ಗಳನ್ನು ಕಾರ್ಯಗತಗೊಳಿಸಿದೆ. ಕರ್ನಾಟಕ ಸರಕಾರವೂ ಕನಿಷ್ಠ ಕೇರಳ ಮಾದರಿಯಲ್ಲಾದರೂ ಯೋಜನೆ ಯನ್ನು ಘೋಷಿಸಬೇಕು ಎಂದು ಡಿವೈಎಫ್‌ಐ ಕರ್ನಾಟಕ ರಾಜ್ಯ 12ನೇ ಸಮ್ಮೇಳನ ಸರಕಾರವನ್ನು ಆಗ್ರಹಿಸಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X