ಮೇಲ್ತೆನೆಯಿಂದ ಆಲಿಯಬ್ಬ ಜೋಕಟ್ಟೆಗೆ ಸನ್ಮಾನ

ಮಂಗಳೂರು, ಮಾ.9: ಹಿರಿಯ ಸಾಹಿತಿ, ‘ಬ್ಯಾರಿ: ನಾನು ಕಂಡಂತೆ’ ಕೃತಿಯ ಲೇಖಕ ಹಾಜಿ ಟಿ.ಎ.ಆಲಿಯಬ್ಬ ಜೋಕಟ್ಟೆಯವರನ್ನು ನಗರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ದೇರಳಕಟ್ಟೆಯ ‘ಮೇಲ್ತೆನೆ’ ಸಂಘಟನೆಯ ವತಿಯಿಂದ ಸನ್ಮಾನಿಸಲಾಯಿತು.
ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ, ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್, ಪ್ರಧಾನ ಕಾರ್ಯದರ್ಶಿ ಹಂಝ ಮಲಾರ್, ಕೋಶಾಧಿಕಾರಿ ಹಾಜಿ ಇಬ್ರಾಹೀಂ ನಡುಪದವು, ಮಾಜಿ ಅಧ್ಯಕ್ಷ ಬಶೀರ್ ಅಹ್ಮದ್ ಕಿನ್ಯ, ಮಂಗಳೂರು ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ.ಅಬೂಬಕರ್ ಸಿದ್ದೀಕ್, ಬ್ಯಾರಿ ಅಕಾಡಮಿಯ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಬ್ಯಾರಿ ಅಕಾಡಮಿಯ ರಿಜಿಸ್ಟ್ರಾರ್ ಆರ್. ಮನೋಹರ ಕಾಮತ್, ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಇಸ್ಮಾಯೀಲ್ ಎನ್., ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಡಾ.ಅನಸೂಯ ರೈ, ಬ್ಯಾರಿ ವಾರ್ತೆಯ ಸಂಪಾದಕ ಬಶೀರ್ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್ ನ ಅಧ್ಯಕ್ಷ ಖಾಲಿದ್ ಉಜಿರೆ, ಬ್ಯಾರಿ ಅಧ್ಯಯನ ಪೀಠದ ಸದಸ್ಯರಾದ ಸಮೀರಾ ಕೆ.ಎ., ಖಾಲಿದ್ ತಣ್ಣೀರುಬಾವಿ ಮತ್ತಿತರರು ಉಪಸ್ಥಿತರಿದ್ದರು.





