Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯದ ಆರ್ಥಿಕ ನಿರ್ವಹಣೆಯಲ್ಲಿ ಸರಕಾರ...

ರಾಜ್ಯದ ಆರ್ಥಿಕ ನಿರ್ವಹಣೆಯಲ್ಲಿ ಸರಕಾರ ವಿಫಲ: ಪ್ರತಾಪ್ ಸಿಂಹ ನಾಯಕ್ ಆರೋಪ

ವಾರ್ತಾಭಾರತಿವಾರ್ತಾಭಾರತಿ28 March 2024 3:18 PM IST
share
ರಾಜ್ಯದ ಆರ್ಥಿಕ ನಿರ್ವಹಣೆಯಲ್ಲಿ ಸರಕಾರ ವಿಫಲ: ಪ್ರತಾಪ್ ಸಿಂಹ ನಾಯಕ್ ಆರೋಪ

ಮಂಗಳೂರು, ಮಾ.28: ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿಂದು ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ ಡಿಆರ್ ಎಫ್ ಗಾಗಿ ಆರ್ಟಿಕಲ್ 32ರ ಅಡಿಯಲ್ಲಿ ಸುಪ್ರೀಂ ಕೋರ್ಟಿಗೆ ಹೋಗುವ ನಾಟಕ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈ ಯತ್ನ ನಡೆಸಿದ್ದಾರೆ. ಇದುವರೆಗೆ ಅವರು ಏನು ಮಾಡುತ್ತಿದ್ದರು ಎಂದು ಪ್ರತಾಪ್ ಸಿಂಹ ನಾಯಕ್ ಪ್ರಶ್ನಿಸಿದರು. ಕಳೆದ ಬಜೆಟ್ನಲ್ಲಿ ಘೋಷಣೆ ಮಾಡಿರು ಗುರಿಯನ್ನು ಶೇ 40ರಷ್ಟು ಸಾಧಿಸುವುದಕ್ಕೂ ಕಾಂಗ್ರೆಸ್ ಸರಕಾರಕ್ಕೆ ಸಾಧ್ಯವಾಗಿಲ್ಲ. ಕೃಷಿಕರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತೇವೆ ಎಂದಿದ್ದ ಸಾಲದ ಪ್ರಮಾಣವನ್ನು 3ರಿಂದ 5 ಲಕ್ಷ ರೂ.ಗೆ ಹೆಚ್ಚಿಸಲು ಸಾಧ್ಯವಾಗಿಲ್ಲ. ಹಾಲು ಉತ್ಪಾದಕರಿಗೆ ನೀಡಬೇಕಿದ್ದ 1,200 ಕೋಟಿ ರೂ. ಹಾಲಿನ ಪ್ರೋತ್ಸಾಹಧನವನ್ನು ಇದುವರೆಗೂ ನೀಡಿಲ್ಲ ಎಂದು ಅವರು ದೂರಿದರು.

15 ಬಜೆಟ್ಗಳನ್ನು ಮಂಡಿಸಿದ್ದೇನೆ ಎಂದು ಹೇಳಿಕೊಳ್ಳುವ ಆರ್ಥಿಕ ತಜ್ಞ ಸಿದ್ದರಾಮಯ್ಯ ಹಣಕಾಸಿನ ನಿರ್ವಹಣೆಯಲ್ಲಿ ಸೋತಿರುವುದು ಎದ್ದು ಕಾಣುತ್ತದೆ. ಇದೇ ಮೊದಲ ಬಾರಿಗೆ ಕರ್ನಾಟಕವು ಜಿಡಿಪಿ ಬೆಳವಣಿಗೆಯಲ್ಲಿ ಭಾರತದ ಸರಾಸರಿಗಿಂತ ಕೆಳಮಟ್ಟಕ್ಕೆ ಕುಸಿದಿದೆ. ಇದಕ್ಕೆ ಕೇಂದ್ರ ಸರಕಾರದ ಮೇಲೆ ಆರೋಪ ಮಾಡಲು ಸಾಧ್ಯವೇ? ಎಂದು ಶಾಸಕ ಪ್ರತಾಪ್ ಸಿಂಹ ಪ್ರಶ್ನಿಸಿದರು.

ಸಿದ್ದರಾಮಯ್ಯನವರು ರಾಜ್ಯದ ಮಧ್ಯಂತರ ಆರ್ಥಿಕ ಯೋಜನೆಯ ವರದಿಯಲ್ಲಿ ಸಮರ್ಪಕ ಅಂಕಿ-ಅಂಶ ನೀಡುತ್ತಾರೆ. ಆದರೆ ಬೀದಿಗೆ ಬಂದು ಮಾತನಾಡುವಾಗ ಕೇಂದ್ರದ ವಿರುದ್ಧ ಮಾತನಾಡುತ್ತಾರೆ. ಈ ವರದಿಯ ಒಂದು ಕಡೆ 2021-22ಕ್ಕೆ ಹೋಲಿಸಿದರೆ 2022-23ರಲ್ಲಿ ಕೇಂದ್ರ ಸರಕಾರದ ಒಟ್ಟು ತೆರಿಗೆ ಸ್ವೀಕೃತಿಯು ಶೇ 12.6ರಷ್ಟು ಹೆಚ್ಚಳವಾಗಿದೆ ಎಂದಿದ್ದಾರೆ. ಇದನ್ನು ಇದೇ ಫೆಬ್ರವರಿಯಲ್ಲಿ ವಿಧಾನಸಭೆಯಲ್ಲೂ ಮಂಡಿಸಿದ್ದಾರೆ. 2022-23ರಲ್ಲಿ ಕೇಂದ್ರದಿಂದ ಪುರಸ್ಕೃತವಾದ ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ 16,579 ಕೋಟಿ ರೂ. ಸಹಾಯಧನ ಸ್ವೀಕೃತವಾಗಿದೆ. ಅಲ್ಲದೆ 6,739 ಕೋಟಿ ರೂ.ಗಳನ್ನು ಇಲಾಖೆಗಳ ಎನ್ಎಸ್ಎ ಖಾತೆಗಳಿಗೆ ನೇರವಾಗಿ ಬಿಡುಗಡೆ ಮಾಡಿದೆ. ವಿವಿಧ ಬಂಡವಾಳ ಯೋಜನೆಗಳಿಗೆ ಕೇಂದ್ರವು 3,399 ಕೋಟಿ ರೂ. ಬಡ್ಡಿರಹಿತ ಸಾಲವನ್ನು ಬಿಡುಗಡೆ ಮಾಡಿದೆ. 22-23ರ ಆಯವ್ಯಯದಲ್ಲಿ ಅಂದಾಜಿಸಿದ ಜಿಎಸ್ ಟಿ ಪರಿಹಾರದ ಮೊತ್ತವು 5 ಸಾವಿರ ಕೋಟಿ ರೂ.ಗೆ ಬದಲಾಗಿದೆ. ಕೇಂದ್ರ ಸರರಕಾರದಿಂದ 20,288 ಕೋಟಿ ರೂ. ಸ್ವೀಕೃತವಾಗಿದ್ದು, ರಾಜ್ಯದ ರಾಜಸ್ವ ಸ್ವೀಕೃತಿ ಹೆಚ್ಚಾಗಿದೆ ಎಂದು ಅಧಿಕೃತ ದಾಖಲೆಗಳಲ್ಲಿ ಅವರೇ ಬರೆದುಕೊಂಡಿದ್ದಾರೆ. ಆದರೆ ಹೊರಗೆ ಬಂದು ಕೇಂದ್ರ ಸರಕಾರ ಹಣ ನೀಡುತ್ತಿಲ್ಲ ಎಂದು ದೂರುತ್ತಾರೆ ಎಂದು ಪ್ರತಾಪ್ ಸಿಂಹ ನಾಯಕ್ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

2004ರಿಂದ 2014ರವರೆಗೆ ಆಗಿನ ಕಾಂಗ್ರೆಸ್ ಸರಕಾರ ತೆರಿಗೆ ಹಂಚಿಕೆಯಲ್ಲಿ 81,000 ಕೋಟಿ ರೂ.ಗಳನ್ನು ನೀಡಿದರೆ, ಅನಂತರದ 10 ವರ್ಷಗಳಲ್ಲಿ ಕೇಂದ್ರದ ಬಿಜೆಪಿ ಸರಕಾರ 2.36 ಲಕ್ಷ ಕೋಟಿ ರೂ. ನೀಡಿದೆ. ಹಾಗಿದ್ದರೂ ಬೀದಿಗೆ ಬಂದು ಮಾತನಾ ಡುವಾಗ ಸಿದ್ದರಾಮಯ್ಯ ಕೇಂದ್ರ ಸರಕಾರ ಹಣ ಕೊಟ್ಟಿಲ್ಲ ಎನ್ನುತ್ತಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಚುನಾವಣೆ ನಿರ್ವಹಣಾ ಸಮಿತಿಯ ದೇವದಾಸ್ ಶೆಟ್ಟಿ ಹಾಗೂ ದ.ಕ. ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕ ವಸಂತ ಜೆ. ಪೂಜಾರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X