ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಉಮ್ಮರ್ ಕೆಮ್ಮಾರ ನೇಮಕ
![ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಉಮ್ಮರ್ ಕೆಮ್ಮಾರ ನೇಮಕ ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಉಮ್ಮರ್ ಕೆಮ್ಮಾರ ನೇಮಕ](https://www.varthabharati.in/h-upload/2024/04/24/1262820-ummar-kemmara.webp)
ಉಪ್ಪಿನಂಗಡಿ: ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಉಮ್ಮರ್ ಕೆಮ್ಮಾರ ನೇಮಕವಾಗಿ ದ್ದಾರೆ. ಬಜತ್ತೂರು ಗ್ರಾಮದ ಕೆಮ್ಮಾರ ನಿವಾಸಿ ಆಗಿರುವ ಉಮ್ಮರ್ ಕೆಮ್ಮಾರ ಬಜತ್ತೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿದ್ದಾರೆ.
ಉಮ್ಮರ್ ಕೆಮ್ಮಾರ ಅವರನ್ನು ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡು ವಂತೆ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಹಿರಿಯ ಮುಖಂಡರು ಮಾಡಿರುವ ಶಿಫಾರಸ್ಸಿನ ಮೇರೆಗೆ ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ನೇಮಕಗೊಳಿಸಿ ಆದೇಶಿಸಿದ್ದಾರೆ.
Next Story