ಡೆಂಗ್ ನಿಯಂತ್ರಣ ನಮ್ಮೆಲ್ಲರ ಹೊಣೆ : ಡಾ. ಎಚ್. ಆರ್. ತಿಮ್ಮಯ್ಯ
![ಡೆಂಗ್ ನಿಯಂತ್ರಣ ನಮ್ಮೆಲ್ಲರ ಹೊಣೆ : ಡಾ. ಎಚ್. ಆರ್. ತಿಮ್ಮಯ್ಯ ಡೆಂಗ್ ನಿಯಂತ್ರಣ ನಮ್ಮೆಲ್ಲರ ಹೊಣೆ : ಡಾ. ಎಚ್. ಆರ್. ತಿಮ್ಮಯ್ಯ](https://www.varthabharati.in/h-upload/2024/05/16/1266975-whatsapp-image-2024-05-16-at-64423-pm-1.webp)
ಮಂಗಳೂರು: ಮಳೆಗಾಲದಲ್ಲಿ ಡೆಂಗ್ ರೋಗವು ಹೆಚ್ಚಾಗಿ ಹರಡುವ ಸಾದ್ಯತೆ ಇದೆ. ಹಾಗಾಗಿ ಪರಿಸರವನ್ನು ಸ್ವಚ್ಛವಾಗಿಟ್ಟು ಕೊಳ್ಳುವ ಮೂಲಕ ಸುತ್ತಮುತ್ತ ಸೊಳ್ಳೆಗಳ ಉತ್ಪತ್ತಿ ಆಗದಂತೆ ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಸೂಚಿಸಿದರು.
ದ.ಕ.ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗ್ ದಿನದ ಅಂಗವಾಗಿ ವೆನ್ಲಾಕ್ ಆಸ್ವತ್ರೆಯ ಆವರಣದಲ್ಲಿ ಗುರುವಾರ ನಡೆದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸೊಳ್ಳೆಗಳು ಉತ್ಪತ್ತಿ ಆಗದಂತೆ ಮನೆಯಲ್ಲಿ ಸಂಗ್ರಹವಾಗಿರುವ ನೀರಿನ ಮೂಲಗಳನ್ನು ಕಾಲಕಾಲಕ್ಕೆ ಸ್ವಚ್ಚಗೊಳಿಸಿ ಲಾರ್ವ ಬೆಳೆಯದಂತೆ ಗಮನ ಹರಿಸಬೇಕು ಎಂದರು.
ದ.ಕ.ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ನವೀನ್ಚಂದ್ರ ಕುಲಾಲ್, ರಾಜ್ಯ ಸಾಂಕ್ರಾಮಿಕ ರೋಗಗಳ ಸಂಶೋ ದನಾಧಿಕಾರಿ ಡಾ.ನಾಗರಾಜ್ ವೆನ್ಲಾಕ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಜೆಸಿಂತಾ, ವೆನ್ಲಾಕ್ ಆಸ್ಪತ್ರೆಯ ಆರ್ಎಂಒ ಡಾ. ಸುಧಾಕರ್ ಮತ್ತಿತರರು ಪಾಲ್ಗೊಂಡಿದ್ದರು.