ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭೇಟಿ

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶನಿವಾರ ಆಗಮಿಸಿ ದರ್ಶನ ಪಡೆದರು.
ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಿದರು.
ಸಚಿವರುಗಳಾದ ಮಹಾದೇವಪ್ರಸಾದ್, ಬೈರತಿ ಸುರೇಶ್, ಶಾಸಕ ಅಶೋಕ್ ರೈ, ಹರೀಶ್ ಕುಮಾರ್, ಮಾಜಿ ಶಾಸಕರುಗಳಾದ ರಮಾನಾಥ ರೈ, ಶಕುಂತಳಾ ಶೆಟ್ಟಿ, ಅಭಯಚಂದ್ರ ಜೈನ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಕ್ಷದ ಮುಖಂಡರುಗಳು ಇದ್ದರು.
Next Story







