ವಗ್ಗ: ಸರಣಿ ಅಪಘಾತ; ಬೈಕ್ ಸವಾರರಿಬ್ಬರಿಗೆ ಗಾಯ

ಬಂಟ್ವಾಳ : ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿ ಎರಡು ಬೈಕ್ ಹಾಗೂ ಪಿಕಪ್ ವಾಹನ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶನಿವಾರ ನಡೆದಿದೆ.
ಗುಣವಂತ ಮತ್ತು ಶಮೀರ್ ಎಂಬವರು ಗಾಯಗೊಂಡ ಬೈಕ್ ಸವಾರರು.
ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಗುಣವಂತ ಎಂಬವರು ಬಿಸಿರೋಡು ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಎದುರಿನಿಂದ ಡಿಕ್ಕಿ ಹೊಡೆದಿದ್ದು ಇದೇ ವೇಳೆ ಪಿಕಪ್ ವಾಹನದ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಇಬ್ಬರು ಗಾಯ ಗೊಂಡಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





