Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಚುನಾವಣೆಗಳು ಪ್ರಜಾತಂತ್ರದ ಜೀವಾಳ:...

ಚುನಾವಣೆಗಳು ಪ್ರಜಾತಂತ್ರದ ಜೀವಾಳ: ಜಯಪ್ರಕಾಶ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ25 May 2024 9:32 PM IST
share
ಚುನಾವಣೆಗಳು ಪ್ರಜಾತಂತ್ರದ ಜೀವಾಳ: ಜಯಪ್ರಕಾಶ್ ಹೆಗ್ಡೆ

ಕಾರ್ಕಳ : ಚುನಾವಣೆಗಳು ಪ್ರಜಾತಂತ್ರದ ಜೀವಾಳವಾಗಿದ್ದು ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಯಾವುದೇ ಪಕ್ಷ ಯಾ ರಾಜಕಾರಿಣಿ ತಾನು ಸೋಲಲಿ ಅಥವಾ ಗೆಲ್ಲಲಿ ಜನ ಸೇವೆಗೆ ಬದ್ಧನಾಗಿರ ಬೇಕು. ಇದು ನಿಜವಾದ ರಾಜಧರ್ಮ ಎಂದು ಮಾಜಿ ಸಚಿವ, ಸಂಸದ, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಅವರು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ವಿಧಾನ ಪರಿಷತ್ ನೈಋತ್ಯ ಪಧವೀದರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪೂರ್ವತಯಾರಿ ಹಾಗೂ ಕಾರ್ಯಕರ್ತರ ಬೇಟಿ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರನ್ನು ಅಭಿನಂದಿಸಿ ಮಾತಾಡುತ್ತಿದ್ದರು.

ನಮ್ಮ ಪಕ್ಷದ ಜನಪರ ಸಿದ್ಧಾಂತಗಳು, ಈ ಹಿಂದಿನ ಅವಧಿಗಳಲ್ಲಿ ನಾನು ಈ ಕ್ಷೇತ್ರದಲ್ಲಿ ಮಾಡಿದ ಮೂಲಭೂತ ಅಭಿವೃದ್ಧಿ ಯನ್ನೊಳಗೊಂಡ ಆಧ್ಯತಾವಲಯದ ಕೆಲಸಗಳು ಹಾಗೂ ಕಾಯಕರ್ತರ ಪರಿಶ್ರಮ ನನಗೆ ಗೆಲುವು ತರಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದ ಅವರು ನಮ್ಮ ಯುವ ಕಾರ್ಯಕರ್ತರಲ್ಲಿ ಪಕ್ಷಕ್ಕಾಗಿ ದುಡಿಯುವ ಬದ್ಧತೆ ಇದೆ. ಈ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆಯನ್ನು ಹೊತ್ತು ಅವರು ಪಕ್ಷಕ್ಕಾಗಿ ದುಡಿಯಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ವಿಧಾನ ಪರಿಷತ್ತಿನ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಸರಕಾರ ನಡೆಸುತ್ತಿರುವ ನಮ್ಮ ಕಾಂಗ್ರೆಸ್ ಪಕ್ಷದ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಪಕ್ಷ ನಮಗೆ ಕೆ.ಕೆ. ಮಂಜುನಾಥ್, ಆಯನೂರು ಮಂಜುನಾಥರಂತಹ ಸಮರ್ಥ ಅಭ್ಯರ್ಥಿಗಳನ್ನು ನೀಡಿದೆ. ಈಗಾಗಲೇ ನಮ್ಮ ಸರಕಾರ ಒಂದು ವರ್ಷ ಪೂರೈಸಿದ್ದು ಈ ಅವಧಿಯ ಜನಪರ ಕೆಲಸಗಳನ್ನು ಮುಂದಿಟ್ಟು ಗೆಲುವು ಸಾಧಿಸುವುದು ದೊಡ್ಡ ಸಮಸ್ಯೆಯೇನಲ್ಲ. ಪಕ್ಷದ ಕಾರ್ಯಕರ್ತರು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರುವ ಶಿಕ್ಷಕರು ಮತ್ತು ಪದವೀಧರರನ್ನು ಗುರುತಿಸಿ ಅವರನ್ನು ಮು:ಖತಾ ಬೇಟಿಯಾಗಿ ಮತ ಚಲಾವಣಾ ಪ್ರಕ್ರಿಯೆಯ ಮಾಹಿತಿ ನೀಡಬೇಕು ಎಂದು ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಕೆಪಿಸಿಸಿ ಹಿಂದುಳಿದ ವರ್ಗದ ಅಧ್ಯಕ್ಷ ಡಿ.ಆರ್ ರಾಜು, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ವಿಧಾನ ಪರಿಷತ್ ಚುನಾವಣೆ ಕಾರ್ಕಳ ಕ್ಷೇತ್ರ ಉಸ್ತುವಾರಿ ಪ್ರೊ. ಸುದೀಪ್ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ನಿಕಟಪೂರ್ವ ಬ್ಲಾಕ್ ಅಧ್ಯಕ್ಷ ಹಿರಿಯ ನ್ಯಾಯವಾದಿ ಶೇಖರ ಮಡಿವಾಳ, ಜಿಲ್ಲಾ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ, ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕುಕ್ಕುಂದೂರು ಉದಯ ಶೆಟ್ಟಿ ಎಸ್ಸಿಎಸ್ಟಿ ಘಟಕ ಜಿಲ್ಲಾಧ್ಯಕ್ಷ ಜಯಕುಮಾರ್, ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ, ಜಿಲ್ಲ ಐಟಿ ಸೆಲ್ ಅಧ್ಯಕ್ಷ ರೋಷನ್ ಶೆಟ್ಟಿ, ಬ್ಲಾಕ್ ಮಹಿಳಾಧ್ಯಕ್ಷೆ ಅನಿತಾ ಡಿ'ಸೋಜ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ವಕ್ತಾರ, ಪುರಸಬಾ ಸದಸ್ಯ ಶುಭದಾ ರಾವ್ ಪ್ರಸ್ತಾವನೆ ಗೈದು ಸ್ವಾಗತಿಸಿದರು. ಬ್ಲಾಕ್ ಉಪಾಧ್ಯಕ್ಷ ಜೋಜ್೯ ಕ್ಯಾಸ್ತಲೀನೋ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಮತದಾನ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿ ವಂದನಾರ್ಪಣೆ ಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X