Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು...

ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುವುದು: ಕನ್ಯಾಡಿ ಶ್ರೀ

ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ26 May 2024 8:51 PM IST
share
ಸಂಪತ್ತನ್ನು ಕೂಡಿಡುವ ಬದಲು ಹಂಚಿದರೆ ಅದು ದುಪ್ಪಟ್ಟಾಗುವುದು: ಕನ್ಯಾಡಿ ಶ್ರೀ

ಮಂಗಳೂರು: ನಮ್ಮಲ್ಲಿರುವ ಸಂಪತ್ತನ್ನು ಕೂಡಿಡುವ ಬದಲು ಯೋಗ್ಯರಿಗೆ ಹಂಚಿದರೆ ಅದು ದುಪ್ಪಟ್ಟಾಗುತ್ತದೆ ಎಂದು ಶ್ರೀರಾಮ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಇದರ ವತಿಯಿಂದ ಅಡ್ಯಾರ್ ಗಾರ್ಡನ್‌ನಲ್ಲಿ ರವಿವಾರ ನಡೆದ ಯಕ್ಷಧ್ರುವ ಪಟ್ಲ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಸಾಮಾಜಿಕ ಯಜ್ಞದ ಮೂಲಕ ಜನರಿಗೆ ಪಟ್ಲ ನೆರವಾಗುತ್ತಿದ್ದಾರೆ. ಪಟ್ಲರಲ್ಲಿ ಸರಳತೆ, ಸಜ್ಜನಿಕೆ ಎರಡೂ ಇದೆ. ನಾವು ನಮ್ಮ ನಮ್ಮ ಕೆಲಸವನ್ನು ಸರಿಯಾಗಿ ಮಾಡಿದರೆ ಭಗವಂತನ ಕೃಪೆ ಇರುತ್ತದೆ. ಒಳ್ಳೆಯ ಕೆಲಸಗಳಿಗೆ ಸಂಪತ್ತನ್ನು ದಾನ ಮಾಡಿದರೆ ಅದು ವ್ಯರ್ಥವಾಗುವುದಿಲ್ಲ. ಪಟ್ಲ ಫೌಂಡೇಶನ್ ಕೈಗೊಂಡಿರುವ ಈ ಸಮಾಜಮುಖಿ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸುವ ಮೂಲಕ ಸಮಾಜದ ಅಶಕ್ತರಿಗೆ ನೆರವಾಗೋಣ ಎಂದರು.

ಜಮ್ಮು ಕಾಶ್ಮೀರದ ಪ್ರಿನ್ಸಿಪಾಲ್ ಸೆಕ್ರೆಟರಿ ರಾಜೇಶ್ ಪ್ರಸಾದ್ ಮಾತನಾಡಿ, ‘ಒಂದು ಕಾಲದಲ್ಲಿ ನಮ್ಮ ಕರಾವಳಿಯ ಕಲೆ ಯಕ್ಷಗಾನವು ನಶಿಸಿಹೋಗುವ ಸ್ಥಿತಿಯಲ್ಲಿತ್ತು. ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಟ್ಲ ಸತೀಶ್ ಶೆಟ್ಟಿ ಅವರು ಭಗೀರಥ ಪ್ರಯತ್ನವನ್ನು ಮಾಡುತ್ತಿದ್ದಾರೆ. 4000ಕ್ಕೂ ಹೆಚ್ಚು ಮಕ್ಕಳಿಗೆ ಯಕ್ಷಗಾನ ತರಬೇತಿ ನೀಡುವ ಮೂಲಕ ಕಲೆಯನ್ನು ರಾಜ್ಯಾದ್ಯಂತ ಪಸರಿಸುತ್ತಿದ್ದಾರೆ. ಯಕ್ಷಗಾನದಂತಹ ಕಲೆ ಮುಂದಿನ ಪೀಳಿಗೆಗೂ ಉಳಿಯಬೇಕು ಎಂದರು.

ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, ಯುವಜನತೆ ಯಕ್ಷಗಾನದಿಂದ ದೂರವಾಗುತ್ತಿ ರುವ ಈ ಆಧುನಿಕ ಕಾಲಘಟ್ಟದಲ್ಲಿ ಸೋಷಿಯಲ್ ಮೀಡಿಯಾದಲ್ಲೂ ಯಕ್ಷಗಾನದ ವೈಭವ ಮರುಕಳಿಸುವಲ್ಲಿ ಯಕ್ಷಧ್ರುವ ಪಟ್ಲ ಟ್ರಸ್ಟ್ ಶ್ರಮ ಶ್ಲಾಘನೀಯ ಎಂದರು.

ವೇದಿಕೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸೃಷ್ಟಿ ಶಶಿಧರ್ ಶೆಟ್ಟಿ, ಉದ್ಯಮಿ ಕೆ.ಡಿ. ಶೆಟ್ಟಿ, ವಿದ್ಯಾ ಹರ್ಬಲ್ ಗ್ರೂಫ್ ಆಫ್ ಕಂಪೆನಿ ಅಧ್ಯಕ್ಷ ಕೆ. ಶ್ಯಾಮ ಪ್ರಸಾದ್ ಉದ್ಯಮಿ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಪುರುಷೋತ್ತಮ್ ಶೆಟ್ಟಿ, ಕಿಮ್ಮನೆ ಆದಿತ್ಯ, ಭುವನೇಶ್ ಪಚ್ಚಿನಡ್ಕ, ರವಿನಾಥ್ ಶೆಟ್ಟಿ, ಮಹೇಶ್ ಶೆಟ್ಟಿ, ಸಂತೋಷ್ ಶೆಟ್ಟಿ ಪನ್ವೆಲ್, ಶಶಿಧರ್ ಶೆಟ್ಟಿ ಇನ್ನಂಜೆ, ಯುಎಸ್‌ಎ ಯೋಗೇಂದ್ರ ಭಟ್ ಉಳಿ, ಯುಎಸ್‌ಎ ವಾಸು ಐತಾಳ್ ಪಣಂಬೂರು, ಜಯಂತ್ ಕೋಟ್ಯಾನ್ ನಡುಬೈಲ್, ದೆಹಲಿ ಘಟಕದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ, ಬಾಬು ಶೆಟ್ಟಿ ಪೆರಾರ, ರಾಜೀವ್ ಪೂಜಾರಿ ಕೈಕಂಬ, ಸತೀಶ್ ಶೆಟ್ಟಿ ಎಕ್ಕಾರ್, ಉಮೇಶ್ ಭಂಡಾರಿ, ಜಗದೀಶ್ ಶೆಟ್ಟಿ, ಗಣೇಶ್, ತಾರಾನಾಥ್ ಶೆಟ್ಟಿ ಬೋಳಾರ್, ಉಮೇಶ್ ಶೆಟ್ಟಿ, ಹೇಮಂತ್ ರೈ, ಯಶೋಧರ್, ಸತೀಶ್ ಶೆಟ್ಟಿ, ಪಿ.ಆರ್. ಶೆಟ್ಟಿ, ಕೇಂದ್ರೀಯ ಸಮಿತಿ ಉಪಾಧ್ಯಕ್ಷ ಡಾ. ಮನು ರಾವ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ , ಕೋಶಾಧಿಕಾರಿ ಅಂ ಸುದೇಶ್ ಕುಮಾರ್, ಸುಧಾಕರ್ ಎಸ್. ಪೂಂಜಾ, ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಕಾಶ್ ರಾವ್, ಕೇಂದ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ರವಿಚಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಪಟ್ಲ ಫೌಂಡೇಶನ್ ಟ್ರಸ್ಟ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕರ್ನೂರು ಮೋಹನ್ ರೈ, ನಿತೇಶ್ ಶೆಟ್ಟಿ ಎಕ್ಕಾರ್, ಶರತ್ ಶೆಟ್ಟಿ ಪಡುಪಳ್ಳಿ ಕಾರ್ಯಕ್ರಮ ನಿರೂಪಿಸಿದರು. ದೇವದಾಸ್ ಶೆಟ್ಟಿ ತುಂಬೆ ವಂದಿಸಿದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X