ಝೆನಿತ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್‌ನಿಂದ ಗೌರವ

ಮಂಗಳೂರು, ಮೇ 26: ಮುಡಿಪುವಿನ ಝೆನಿತ್ ಆಂಗ್ಲಮಾಧ್ಯಮ ಶಾಲೆಯು 2023-24ನೇ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ್ದಕ್ಕಾಗಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ವತಿಯಿಂದ ರವಿವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದವನ್ನು ಗೌರವಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕಿ ಸಫೂರ ಹಾಗೂ ಶಿಕ್ಷಕ ವೃಂದದವರು ಈ ಗೌರವ ಪ್ರಶಸ್ತಿಯನ್ನು ಸ್ವೀಕರಿಸಿದರು.
Next Story





