ವಿಟ್ಲ: ಮನೆಗೆ ನುಗ್ಗಿ ಸೊತ್ತು ಕಳವು

ವಿಟ್ಲ: ಮನೆಗೆ ನುಗ್ಗಿ ಡಿ.ವಿ.ಆರ್ ಕಳವು ಮಾಡಿದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿಯಲ್ಲಿರುವ ಮನೆಯಲ್ಲಿ ನಡೆದಿದೆ.
ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ ಗಲ್ಫ್ ನಲ್ಲಿದ್ದು ಆರು ತಿಂಗಳ ಹಿಂದಷ್ಟೇ ಬಂದು ಹೋಗಿದ್ದರು. ರವಿವಾರ ಬೆಳಗ್ಗೆ ಪಕ್ಕದ ಮನೆಯವರು ನೋಡಿದಾಗ ಮುಂಭಾಗದ ಬಾಗಿಲು ತೆರೆದಿರುವುದನ್ನು ಗಮನಿಸಿ ಸಂಶಯಗೊಂಡಿದ್ದರು. ಮನೆಗೆ ಹೋಗಿ ನೋಡಿದಾಗ ಅಂಗಳದಲ್ಲಿದ್ದ ಸಿ.ಸಿ.ಕ್ಯಾಮರಾದ ದೃಷ್ಟಿ ಬದಲಾಯಿಸಿ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ನಾಲ್ಕು ಕಪಾಟುಗಳನ್ನು ಒಡೆದು ಸೊತ್ತುಗಳಿಗಾಗಿ ಸಾಕಷ್ಟು ಜಾಲಾಡಿದ್ದಾರೆ.
ಕಪಾಟಿನಲ್ಲಿದ್ದ ಒಂದು ಲಕ್ಷ ರೂ. ಮೌಲ್ಯದ Rado ವಾಚ್, ಡಿ.ವಿ.ಆರ್ ಹೊತ್ತೊಯ್ದಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Next Story





