Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಿಜೆಪಿ ವಿರುದ್ಧ ಸ್ಪರ್ಧೆಯಿಂದ ಪಕ್ಷದ...

ಬಿಜೆಪಿ ವಿರುದ್ಧ ಸ್ಪರ್ಧೆಯಿಂದ ಪಕ್ಷದ ಗೆಲುವಿನ ಮೇಲೆ ಪರಿಣಾಮವಾಗದು: ವಿಜಯೇಂದ್ರ

ವಿಧಾನ ಪರಿಷತ್‌ನ ನೈರುತ್ಯ ಪದವೀಧರ- ಶಿಕ್ಷಕರ ಕ್ಷೇತ್ರದ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ27 May 2024 4:49 PM IST
share
ಬಿಜೆಪಿ ವಿರುದ್ಧ ಸ್ಪರ್ಧೆಯಿಂದ ಪಕ್ಷದ ಗೆಲುವಿನ ಮೇಲೆ ಪರಿಣಾಮವಾಗದು: ವಿಜಯೇಂದ್ರ

ಮಂಗಳೂರು: ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕೆಲವರು ಬಿಜೆಪಿ ವಿರುದ್ಧ ವಾಗಿ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿ ಹಾಗೂ ಮೈತ್ರಿ ಅಭ್ಯರ್ಥಿಗಳ ಗೆಲುವಿನ ಮೇಲೆ ಇದರ ಪರಿಣಾಮವಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಮಂಗಳೂರಿನಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಬಿಜೆಪಿ ಕಾರ್ಯಕರ್ತರು, ಮುಖಂಡರ ಗುರಿ ಸ್ಪಷ್ಟವಾಗಿದ್ದು, ಮತದಾರರನ್ನು ಪರಿಣಾಮಕಾರಿಯಾಗಿ ತಲುಪುತ್ತಿದ್ದಾರೆ. ಪ್ರಬುದ್ಧ ಮತದಾರರು ಬಿಜೆಪಿ ಮೇಲೆ, ಮೈತ್ರಿ ಅಭ್ಯರ್ಥಿಗಳ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಗೆಲುವಿನ ಅಂತರ ಜಾಸ್ತಿ ಆಗಲಿದೆಯೇ ಹೊರತು ಕಮ್ಮಿ ಆಗಲ್ಲ ಎಂದರು.

ಬಂಡಾಯ ಸ್ಪರ್ಧಿಗಳು ತಾವು ಬಿಜೆಪಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದು ಹಾಗೂ ನರೇಂದ್ರ ಮೋದಿ ಅವರ ಫೋಟೊ ಬಳಸಿಕೊಳ್ಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಯಾರೇನೇ ಮಾಡಿದರೂ, ಹೇಳಿದರೂ ಕೂಡ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲು ಸಾಧ್ಯವಿಲ್ಲ. ಬಿಜೆಪಿ ಮೈತ್ರಿ ಅಭ್ಯರ್ಥಿಗಳಾದ ಭೋಜೇಗೌಡ ಹಾಗೂ ಡಾ. ಧನಂಜಯ ಸರ್ಜಿ ಅವರು ದೊಡ್ಡ ಅಂತರದಿಂದ ಗೆಲ್ಲಲಿದ್ದಾರೆ ಎಂದವರು ಹೇಳಿದರು.

ವಿಧಾನ ಪರಿಷತ್‌ನ ಮೂರು ಸ್ಥಾನಗಳ ಪೈಕಿ ಕರಾವಳಿಯವರಿಗೆ ಅವಕಾಶ ಇದೆಯಾ ಎಂಬ ಪ್ರಶ್ನೆಗೆ, ಅನೇಕ ಹೆಸರುಗಳಿವೆ. ಜಾತಿವಾರು, ಪ್ರಾಂತ್ಯವಾರು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಈ ಹೆಸರುಗಳನ್ನು ದೆಹಲಿಗೆ ಕಳುಹಿಸಿಕೊಟ್ಟಿದ್ದೇವೆ. ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದರು.

ರಾಜ್ಯ ಸರಕಾರ ವಿನಾಕಾರಣ ನಮ್ಮ ಕಾರ್ಯಕರ್ತರನ್ನು, ಯುವಮೋರ್ಚಾ ಅಧ್ಯಕ್ಷರ ಹೆಸರನ್ನು ಎಫ್‌ಐಆರ್‌ನಲ್ಲಿ ಸೇರಿಸಿಕೊಂಡು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಖಂಡನೀಯ. ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ಅವರು ಹೇಳಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X