Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ| ಮನೆಗೆ ನುಗ್ಗಿ ದರೋಡೆ...

ಬೆಳ್ತಂಗಡಿ| ಮನೆಗೆ ನುಗ್ಗಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ; ಸೊತ್ತು ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ27 May 2024 5:29 PM IST
share
ಬೆಳ್ತಂಗಡಿ| ಮನೆಗೆ ನುಗ್ಗಿ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ; ಸೊತ್ತು ವಶಕ್ಕೆ

ಬೆಳ್ತಂಗಡಿ; ನಾಲ್ಕು ವರ್ಷದ ಹಿಂದೆ ಕಲ್ಮಂಜ ಗ್ರಾಮದ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಅವರ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ ದರೋಡೆ ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್‌ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ. ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಈ ಮಾಹಿತಿ ನೀಡಿದರು.

ಬಂಧಿತ ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ 104 ಗ್ರಾಂ ಚಿನ್ನಾಭರಣಗಳನ್ನು, 288 ಗ್ರಾಂ ಬೆಳ್ಳಿಯ ವಸ್ತುಗಳನ್ನು ಹಾಗೂ 25,000 ರೂ. ನಗದು ಹಾಗು ಒಂದು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಘಟನೆಯ ಹಿನ್ನೆಲೆ:

2020 ಜೂನ್ 6ರಂದು ಕಲ್ಮಂಜ ಗ್ರಾಮದ ನಿವಾಸಿಯಾಗಿರುವ ಅಚ್ಯುತ ಭಟ್ ಎಂಬವರ ಮನೆಗೆ ನುಗ್ಗಿದ ದರೋಡೆ ಕೋರರು ಮನೆಯಲ್ಲಿದ್ದ ಅಚ್ಯುತ ಭಟ್ ಅವರನ್ನು ಹಾಗು ಅವರ ತಾಯಿ, ತಮ್ಮನ ಪತ್ನಿಯನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ಚಿನ್ನ ಹಗೂ ಬೆಳ್ಳಿಯ ಆಭರಣಗಳನ್ನು ಹಾಗೂ ನಗದನ್ನು ದರೋಡೆ ಮಾಡಿ ಪರಾರಿಯಾಗುದ್ದರು.

ಆರೋಪಿಗಳು ಸುಮಾರು 30ರಿಂದ 35 ಪವನ್ ಚಿನ್ನಾಭರಣಗಳನ್ನು ಒಂದು ಕೆ.ಜಿ ಬೆಳ್ಳಿಯ ಆಭರಣಗಳನ್ನು ದರೋಡೆ ಮಾಡಿರುವುದಾಗಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿತ್ತು.

ಚಿನ್ನ ಮಾರುವ ವೇಳೆ ಲಭ್ಯವಾದ ಸುಳಿವು

ಕಳ್ಳತನ ಮಾಡಿದ್ದ ಆರೋಪಿಗಳು ಚಿನ್ನಾಭರಣಗಳನ್ನು ಸ್ವಲ್ಪ ಸ್ವಲ್ಪ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ನಡುವೆ ಮೇ 22ರಂದು ಆರೋಪಿ ರಿಯಾಝ್ ಎಂಬಾತ‌ ದಾಖಲೆಯಿಲ್ಲದ ಚಿನ್ನ ಮಾರಾಟ ಮಾಡಲು ಮುಂದಾಗುತ್ತಿದ್ದಾನೆ ಎಂಬ ಮಾಹಿತಿ ಬಂದ ಹಿನ್ನಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಆತನಿಂದ ಲಭಿಸಿದ ಮಾಹಿತಿಗಳ‌ ಮೇರೆಗೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌ ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಭಾಗಿಗಳಾಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದು ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X