Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪೂರ್ವ ಮುಂಗಾರು ಮಳೆಯ...

ಮಂಗಳೂರು: ಪೂರ್ವ ಮುಂಗಾರು ಮಳೆಯ ಬೆನ್ನಲ್ಲೆ ಡೆಂಗ್ ಹೆಚ್ಚಳ

ವಾರ್ತಾಭಾರತಿವಾರ್ತಾಭಾರತಿ27 May 2024 8:42 PM IST
share
ಮಂಗಳೂರು: ಪೂರ್ವ ಮುಂಗಾರು ಮಳೆಯ ಬೆನ್ನಲ್ಲೆ ಡೆಂಗ್ ಹೆಚ್ಚಳ

ಮಂಗಳೂರು, ಮೇ 27: ಮುಂಗಾರು ಪೂರ್ವದಲ್ಲಿ ಬಿಟ್ಟು ಬಿಟ್ಟು ಸುರಿಯುವ ಸುರಿಯುತ್ತಿರುವ ಕಾರಣದಿಂದಾಗಿ ದ.ಕ. ಜಿಲ್ಲೆಯಲ್ಲಿ ಅಪಾಯಕಾರಿ ಡೆಂಗ್ , ಮಲೇರಿಯಾ ಕಾಯಿಲೆಗೆ ಕಾರಣವಾಗುವ ಸೊಳ್ಳೆಗಳ ಹೆಚ್ಚಳಕ್ಕೆ ಪೂರಕ ವಾತಾವರಣವನ್ನುಂಟು ಮಾಡಿದೆ.

ರಾತ್ರಿ ಸ್ವಲ್ಪ ಹೊತ್ತು ಮಳೆ ಹಗಲು ಬಿಸಿಲಿನ ವಾತಾವರಣ ಕೆಲವು ದಿನಗಳಿಂದ ಇದೆ. ಮಳೆ ಬಂದಿದ್ದರೂ ಕುಡಿಯುವ ನೀರಿಗೆ ಸಮಸ್ಯೆ ಇದೆ. ನದಿಯಲ್ಲಿ ಸ್ವಲ್ಪ ನೀರು ಏರಿಕೆಯಾಗಿದ್ದರೂ, ಗ್ರಾಮೀಣ ಪ್ರದೇಶಗಳಲ್ಲಿರುವ ಕೆರೆ, ಬಾವಿಗಳಲ್ಲಿ ಕೆಲವಡೆ ಇದ್ದ ನೀರೂ ಕಲುಶಿತಗೊಂಡಿದೆ. ಚರಂಡಿಗಳಲ್ಲಿ ಅಲ್ಲಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗ ಹರಡುವ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ.

ವಾತಾವರಣದಲ್ಲಿನ ವೈಪರಿತ್ಯದಿಂದಾಗಿ ಬ್ಯಾಕ್ಟೀರಿಯಾ, ವೈರಸ್‌ಗಳ ಬೆಳವಣಿಗೆ ಹೆಚ್ಚಾಗುತ್ತದೆ. ಜನರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾದರೆ ಜನರು ಕಾಯಿಲೆ ಬೀಳುವ ಅಪಾಯವಿದೆ. ಹೀಗಾಗಿ ಎಚ್ಚರ ಅಗತ್ಯ.

ಎಳೆನೀರು ಚಿಪ್ಪು, ತೆಂಗಿನ ಚಿಪ್ಪು, ಟಯರ್, ಟ್ಯೂಬ್, ಹೂಕುಂಡ, ತಾರಸಿ, ತೆರೆದ ಟ್ಯಾಂಕ್‌ಗಳಲ್ಲಿ ಸೊಳ್ಳೆ ಉತ್ಪತ್ತಿಯಾಗುತ್ತವೆ. ನೀರು ಸಂಗ್ರಹವಾಗುವ ಯಾವುದೇ ಪ್ರದೇಶಗಳಲ್ಲಿ ಡೆಂಗ್ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡ ಬಲ್ಲವು. ಹಾಗಾಗಿ ನೀರು ನಿಲ್ಲದಂತೆ ಎಚ್ಚರ ವಹಿಸುವುದು ಸಾರ್ವಜನಿಕರ ಕರ್ತವ್ಯವಾಗಿದೆ.

ಶಾಲಾ ಕಾಲೇಜುಗಳು ಇನ್ನು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಅಷ್ಟು ಹೊತ್ತಿಗೆ ಮುಂಗಾರು ಮಳೆ ಆಗಮನ ವಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎಚ್ಚರವಹಿಸಬೇಕಾಗಿದೆ ಎಂದು ಜಿಲ್ಲಾ ರೋಗ ವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್ ತಿಳಿಸಿದ್ದಾರೆ.

ಈ ವರ್ಷ ಡೆಂಗ್ ಮತ್ತು ಮಲೇರಿಯಾ ಪ್ರಕರಣಗಳು ಕಳೆದ ವರ್ಷಕ್ಕಿಂತ ಸ್ವಲ್ಪ ಜಾಸ್ತಿಯಾಗಿದೆ. ಡೆಂಗ್ ,ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಾಗೂ ಸ್ಥಳೀಯಾಡಳಿತ ಸಂಸ್ಥೆ ಜಂಟಿಯಾಗಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ವಹಿಸುತ್ತವೆ. ಸಾರ್ವಜನಿಕರಿಗೆ ಸೂಕ್ತ ಜಾಗೃತಿಯನ್ನೂ ಮೂಡಿಸಲಾಗುತ್ತಿದೆ ಎಂದು ಡಾ.ನವೀನ್‌ ಚಂದ್ರ ಕುಲಾಲ್ ತಿಳಿಸಿದ್ದಾರೆ.

5 ತಿಂಗಳಲ್ಲಿ 156 ಡೆಂಗ್ ಪ್ರಕರಣ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2024ರ ಜನವರಿಯಿಂದ ಈ ವರೆಗೆ ಒಟ್ಟು 156ಡೆಂಗ್ಯೂ, 26 ಮಲೇರಿಯಾ ಪ್ರಕರಣಗಳು ಪತ್ತೆಯಾಗಿವೆ. 2023ರಲ್ಲಿ ಜಿಲ್ಲೆಯಲ್ಲಿ ಒಟ್ಟು 566 ಡೆಂಗ್ಯೂ , 82 ಮಲೇರಿಯಾ ಮತ್ತು 2ಚಿಕುನ್ ಗುನ್ಯ 2 ಪ್ರಕರಣಗಳು ಪತ್ತೆಯಾಗಿತ್ತು.

ಕಳೆದ ಆರು ವರ್ಷಗಳ ಅಂಕಿಅಂಶಗಳ ಕಡೆಗೆ ಗಮನ ಹರಿಸಿದರೆ 2019ರಲ್ಲಿ ಗರಿಷ್ಠ ಡೆಂಗ್ ಪ್ರಕರಣ ದಾಖಲಾಗಿತ್ತು. ಅಲ್ಲದೆ ಮಲೇರಿಯಾ ಪ್ರಕರಣ 2,797 ಹಾಗೂ ಚಿಕುನ್ ಗುನ್ಯಾ 17 ಪ್ರಕರಣಗಳು ದಾಖಲಾಗಿತ್ತು. ಇದು ಆರೋಗ್ಯ ಇಲಾಖೆಯಲ್ಲಿ ದಾಖಲಾದ ಅಂಕಿಅಂಶಗಳು. ಡೆಂಗ್ ಪ್ರಕರಣ 2020ರಲ್ಲಿ 239, 2021ರಲ್ಲಿ 295, 2022ರಲ್ಲಿ 388 ಪ್ರಕರಣಗಳು ದಾಖಲಾಗಿದ್ದರೆ, ಮಲೇರಿಯಾ 2020ರಲ್ಲಿ 1,397. 2021ರಲ್ಲಿ 689, 2022ರಲ್ಲಿ 168 , ಚಿಕುನ್ ಗುನ್ಯ 2022ರಲ್ಲಿ 2 ಪ್ರಕರಣಗಳು ಕಂಡು ಬಂದಿತ್ತು.

ಮಳೆಗಾಲ ಆರಂಭವಾಗುತ್ತಲೇ ಸೊಳ್ಳೆಗಳಿಂದ ಹರಡುವ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಸೊಳ್ಳೆಗಳ ಉತ್ಪತ್ತಿಗೆ ಪೂರಕ ವಾತಾವರಣ ಕಂಡು ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿ ದರೆ ಈ ಬಾರಿ ಡೆಂಗ್ ಪ್ರಕರಣ ಸ್ವಲ್ಪ ಜಾಸ್ತಿಯಾಗಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಅಗತ್ಯ.

*ಡಾ.ನವೀನ್‌ಚಂದ್ರ ಕುಲಾಲ್, ದ.ಕ. ಜಿಲ್ಲಾ ರೋಗ ವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X