ವಿಧಾನ ಪರಿಷತ್ ಎರಡು ಸೀಟುಗಳು ಕಾಂಗ್ರೆಸ್ ಜಯಗಳಿಸಲಿದೆ: ಮಿಥುನ್ ರೈ

ಹಳೆಯಂಗಡಿ: ಜೂನ್ 3ರಂದು ನಡೆಯಲಿರುವ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಮೀಸಲಾಗಿರುವ ವಿಧಾನ ಪರಿಷತ್ ಶಾಸಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎರಡೂ ಕ್ಷೇತ್ರ ದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಜಯಗಳಿಸಲಿ ದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ. ರೈ ತಿಳಿಸಿದ್ದಾರೆ.
ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾರ್ಯಕರ್ತರು ಈ ಬಗ್ಗೆ ಮತದಾರರ ಮನೆಗಳಿಗೆ ತೆರಳಿ ಮತಯಾಚನೆ ಮಾಡುವಂತೆ ಕರೆ ಅವರು ನೀಡಿದರು.
ಈ ಸಂದರ್ಭ ವಿಧಾನ ಪರಿಷತ್ ಚುನಾವಣಾ ವೀಕ್ಷಕರು ಹಾಗೂ ಮಂಗಳೂರು ಮಹಾನಗರ ಪಾಲಿಕೆ ವಿಪಕ್ಷ ನಾಯಕರಾದ ಪ್ರವೀಣ್ ಚಂದ್ರ ಆಳ್ವ, ಕೆಪಿಸಿಸಿ ಸದಸ್ಯರಾದ ಎಚ್. ವಸಂತ ಬರ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಕೋಟ್ಯಾನ್ ,ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೋನಪ್ಪ ಶೆಟ್ಟಿ ಎಕ್ಕಾರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಯು.ಪಿ. ಇಬ್ರಾಹಿಂ, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ ಮೊದಲಾದವರು ಇದ್ದರು.





