ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು

ಮಂಗಳೂರು, ಮೇ 27: ಮಾರ್ಗಮಧ್ಯೆ ಬೈಕ್ ಸ್ಕಿಡ್ ಆಗಿ ಬೈಕ್ ಸವಾರ ಮೃತಪಟ್ಟ ಘಟನೆ ಕವತ್ತಾರು ಕೊರಗಜ್ಜನ ಗುಡಿ ಬಳಿ ಸೋಮವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಬೈಕ್ ಸವಾರ ಸಂತೋಷ್ ಎಂಬವರೇ ಮೃತಪಟ್ಟ ಬೈಕ್ ಸವಾರ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ 9 ಗಂಟೆಗೆ ಕರ್ನಿರೆ ಕಡೆಯಿಂದ ಮುಲ್ಕಿ ಕಡೆಗೆ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ಸಂತೋಷ್ ಕೊರಗಜ್ಜನ ಗುಡಿಯ ಬಳಿ ತಲುಪುತ್ತಿದ್ದಂತೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಟೆಂಪೊವನ್ನು ನೋಡಿ ಒಮ್ಮೆಲೆ ಬೈಕ್‌ಗೆ ಬ್ರೇಕ್ ಹಾಕಿದರೆನ್ನಲಾಗಿದೆ. ಬೈಕ್‌ಗೆ ಒಮ್ಮೆಲೆ ಬ್ರೇಕ್ ಹಾಕಿದಾಗ ಬೈಕ್ ರಸ್ತೆಯಲ್ಲಿ ಸ್ಕಿಡ್ ಆಗಿ ಸವಾರ ಸಂತೋಷ್ ಬೈಕ್ ಸಮೇತ ಡಾಮಾರು ರಸ್ತೆಗೆ ಬೀಳುತ್ತಿದ್ದಂತೆ ಎದುರಿನಿಂದ ಬರುತ್ತಿದ್ದ ಟೆಂಪೂದ ಹೆಡ್ ಲೈಟ್ ತಲೆಗೆ ಬಡಿದು ಗಂಭೀರ ಗಾಯಗೊಂಡರು.
ಗಾಯಾಳು ಸಂತೋಷ ಅವರನ್ನು ಸುರತ್ಕಲ್‌ನ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಟ್ರಾಫಿಕ್ ಉತ್ತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





